ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡಲಾಗುವುದು ಆದರೆ ಎಷ್ಟು ಸಂಬಳ ಹೆಚ್ಚಳ ಮಾಡಬೇಕು ಎಂಬುದನ್ನು ಸರ್ಕಾರದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಖ್ಯಮಂತ್ರಿ ಅವರು ನಿರ್ಧಾರ ಮಾಡಲಿದ್ದಾರೆ. 2-3 ದಿನಗಳಲ್ಲಿ ಆದೇಶ ತಿಳಿಯಲಿದೆ ಹಾಗೂ ದೇಶದಲ್ಲಿ ಕೊರೊನಾ ಇನ್ನೂ ಸಮುದಾಯ ಹಂತಕ್ಕೆ ತಲುಪಿಲ್ಲ. ಕಳೆದ 15 ದಿನಗಳಿಂದ […]

ಕೊರೊನಾ ವೈರಸ್ ಪಾಸಿಟಿವ್ ವ್ಯಕ್ತಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸದೆ ಆರೋಗ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೊರೊನಾ ಸೋಂಕು ದೃಢವಾದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ನರಳಾಟ ಅನುಭವಿಸಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 13 ರಂದು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದ 33 ವರ್ಷದ ವ್ಯಕ್ತಿಗೆ ನಿನ್ನೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಚಿತ್ರದುರ್ಗದ ನೆಹರೂ ನಗರದ ಮನೆಯಲ್ಲಿ ವಾಸವಿರುವ ಸೋಂಕಿತ ವ್ಯಕ್ತಿಯನ್ನು ಕೋವಿಡ್ […]

ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಟೆಕ್ನಾಲಜಿ ಸೆಂಟರ್ ಸ್ಥಾಪಿಸುವ ಉದ್ದೇಶವಿದ್ದು, ಸ್ಥಳೀಯ ಪ್ರತಿಭೆಗಳನ್ನೂ ಉದ್ಯೋಗಕ್ಕೆ ಸೇರ್ಪಡೆಗೊಳಿಸಲಾಗುವುದು. ಅಷ್ಟೇ ಅಲ್ಲ, ಮುಂದಿನ ಕೆಲವು ವರ್ಷಗಳ ಅವಧಿಯಲ್ಲಿ ಭಾರತದಾದ್ಯಂತ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಝೂಮ್ ವಿಡಿಯೋ ಕಮ್ಯೂನಿಕೇಷನ್ಸ್​ ಘೋಷಿಸಿದೆ. ಭಾರತದಲ್ಲಿ ಈ ವರ್ಷ ಜನವರಿಯಿಂದ ಏಪ್ರಿಲ್ ವರೆಗಿನ ಅವಧಿಯಲ್ಲಿ ಝೂಮ್ ಅಪ್ಲಿಕೇಶನ್ ಡೌನ್​ಲೋಡ್ ಮಾಡಿ ಯೂಸರ್ ಸೈನ್​ ಅಪ್ ಪ್ರಮಾಣ ಶೇಕಡ 6700ರ ಬೆಳವಣಿಗೆ ದರದಲ್ಲಿತ್ತು. ಕಂಪನಿಗೆ ಈಗಾಗಲೇ ಮುಂಬೈನಲ್ಲಿ ಒಂದು ಕಚೇರಿ ಮತ್ತು […]

ಬಕ್ರೀದ್ ಹಬ್ಬಕ್ಕಾಗಿ ಬಲಿಕೊಡಲು ತಂದಿದ್ದ 8 ಒಂಟೆಗಳನ್ನು ಕಲಬುರ್ಗಿ ಜಿಲ್ಲೆಯಲ್ಲಿ ರಕ್ಷಣೆ ಮಾಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ 6 ಜನರನ್ನು ಬಂಧಿಸಲಾಗಿದೆ. ಕಲಬುರ್ಗಿ ಜಿಲ್ಲೆ ಆಳಂದ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಪೊಲೀಸರು ಒಂಟೆಗಳನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ಒಂದೊಂದು ಒಂಟೆ 50 ಸಾವಿರ ರೂಪಾಯಿ ಬೆಲೆ ಬಾಳುತ್ತಿವೆ. ಒಟ್ಟು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಎಂಟು […]

ಕೋವಿಡ್ 19ರ ರೋಗಿಗಳಿಗೆ ಹಾಸಿಗೆ ನಿರಾಕರಿಸಬಾರದು,ಖಾಸಗಿ ಆಸ್ಪತ್ರೆಗಳು ಒಂದು ವೇಳೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮುಖ್ಯಮಂತ್ರಿ ಸಭೆ ಬಳಿಕ ಮಾತನಾಡಿದ ಅವರು, 50% ಹಾಸಿಗೆಯನ್ನು ಬಿಟ್ಟುಕೊಡಬೇಕು ಎಂದಿದ್ದಾರೆ. ಹಾಗೆಯೇ ಇನ್ನು ಮುಂದೆ ನಾನು ಯಾವ ಸಭೆಯನ್ನು ನಡೆಸುವುದಿಲ್ಲ. ಕಷ್ಟದ  […]

ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತಗಳಿಂದ ಎಚ್ಚರಿಕೆ ಫಲಕಗಳನ್ನು ಹಾಕುತ್ತಿರುವುದು ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸೋಂಕಿತ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕೆಂದು ಹೇಳಿದ್ದಾರೆ. ಸೋಂಕಿತರ ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ […]

ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತಿತರ ಕಡೆ ಸೋಂಕಿತರಿಗೆ ಬೆಡ್ ಗಳ ಕೊರತೆ ಉಂಟಾಗಿದ್ದು, ಅವರ ಪ್ರಾಣಕ್ಕೂ ಸಂಚಾರ ಉಂಟಾಗಿದೆ. ಇಂಥ ಸಂಕಷ್ಟ ಸನ್ನಿವೇಶದಲ್ಲಿ ಅತಿ ಕಡಿಮೆ ವೆಚ್ಚ, ಸುಲಭ ಸಾಗಣೆ, 350 ಕೆಜಿಯಷ್ಟು ಭಾರ ತಡೆಯಬಹುದಾದ ಶೇಕಡಾ 100 ರಷ್ಟು ನವೀಕರಿಸಬಹುದಾದ ಪರಿಸರ ಸ್ನೇಹಿ 650 ಬೆಡ್ ಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೊಡ್ಡಬಳ್ಳಾಪುರದಿಂದ ಕಲ್ಯಾಣ ಕರ್ನಾಟಕಕ್ಕೆ ಸಾಗಣೆ ಮಾಡಲು ಹಸಿರು […]

ಬಾಗಲಕೋಟೆ  ಜಿಲ್ಲೆಯಲ್ಲಿ  ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿ ಸೇರಿ ಒಟ್ಟು 26 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ನಾಲ್ಕು ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.  ಬಾಕಿ ಉಳಿದ 22 ಜನರಲ್ಲಿ 6 ಜನ ಎಸ್ಪಿ ಕಚೇರಿ ಸಿಬ್ಬಂದಿಗಳು, ಇಬ್ಬರು ಬನಹಟ್ಟಿ-ತೇರದಾಳ ಕಚೇರಿಯ ಸಿಬ್ಬಂದಿಗಳು, ಆರು ಗುಳೇದಗುಡ್ಡ ಮತ್ತು ಕೆರೂರು ಸಿಬ್ಬಂದಿಗಳು, ಮೂವರು ಬಾಗಲಕೋಟೆ ಸಿಬ್ಬಂದಿಗಳು, ಓರ್ವ ಡಿಆರ್ ಒ ಸಿಬ್ಬಂದಿ […]

ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ನಟಿ, ಸಂಸದೆ ಸುಮಲತಾ ಅಂಬರೀಶ್​ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆಯೂ ಮಾಹಿತಿ ನೀಡಿದ್ದ ಅವರು, ‘ನಾನು ಕರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ […]

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,884 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು 10.38 ಲಕ್ಷಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೊನಾ ವೈರಸ್ ಗೆ 671 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಮೃತಪಟ್ಟವರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ. 10,38,716 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 6,53,751ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಂದು ಆರೋಗ್ಯ ಮತ್ತು ಕುಟುಂಬ […]

Advertisement

Wordpress Social Share Plugin powered by Ultimatelysocial