ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ನಿಯಂತ್ರಣಕ್ಕಾಗಿ ಬಿಬಿಎಂಪಿ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಡಿ ಬರುವ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ಕ್ಲಿನಿಕ್ ಗಳಲ್ಲಿ ಉಚಿತ ಕೊವಿಡ್ ಪರೀಕ್ಷಾ ಮಾಡಲಾಗುತ್ತದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಐಎಲ್‌ಐ ಹಾಗೂ ಎಸ್‌ಎಆರ್‌ಐ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹಾಗೂ ಕೆಮ್ಮು, ಜ್ವರ, ಶೀತ, ನೆಗಡಿಯಿಂದ ಬಳಲುತ್ತಿವವರಿಗೆ ಉಚಿತ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಲಾಗುವುದು […]

ಬೆಂಗಳೂರು ಹಾಗೂ ಹೊರ ರಾಜ್ಯದಿಂದ ದಾವಣಗೆರೆಗೆ ಬರುವ ವ್ಯಕ್ತಿಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಂದು ದಿನಕ್ಕೆ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ಬೆಂಗಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಬರುವವರ ಬಗ್ಗೆ ಆತಂಕ ಹೆಚ್ಚಾಗಿದೆ ಎಂದಿದ್ದಾರೆ. ಹಾಗೂ ಈ ಬಗ್ಗೆ ಪ್ರತಿಯೊಂದು ಹಳ್ಳಿಯಲ್ಲಿ ಡಂಗುರ ಸಾರಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ. ದಾವಣಗೆರೆಗೆ ಬೆಂಗಳೂರು ಹಾಗೂ ಹೊರ ರಾಜ್ಯದ […]

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಆದ್ದರಿಂದ ಸೀಲ್ ಡೌನ್ ಪ್ರದೇಶಗಳಲ್ಲಿ ನೆಲೆಯೂರಿರುವ ವಿಧಾನಸೌಧ ಸೇರಿದಂತೆ ಸರ್ಕಾರಿ ಸಚಿವಾಲಯಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ರಾಜ್ಯ ಸರ್ಕಾರ ಅನುಮಂತಿ ನೀಡಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ, ಹೀಗಾಗಿ ವಿಧಾನಸೌಧ, ವಿಕಾಸಸೌಢ, ಎಂ.ಎಸ್.ಬಿಲ್ಡಿಂಗ್ ಸೇರಿದಂತೆ ಸರ್ಕಾರದ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸೀಲ್ಡೌನ್ ಪ್ರದೇಶದಲ್ಲಿದ್ದರೆ ಮನೆಯಿಂದಲೇ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಗಳ ಬೇಜವಾಬ್ದಾರಿತನ ಮತ್ತೆ ಮತ್ತೆ ವರದಿಯಾಗುತ್ತಲೇ ಇದೆ. ಕೋವಿಡ್ ಪರಿಸ್ಥಿತಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ಇಲ್ಲದ ರೋಗಿಗಳಿಗೆ ಚಿಕಿತ್ಸೆ ಸಿಗುವುದು ಕಷ್ಟಕರವಾಗಿದೆ. ಅನಾರೋಗ್ಯಕ್ಕೀಡಾಗಿದ್ದ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಆಕೆ ಸಾವನ್ನಪ್ಪಿದ್ದಾರೆ. ಕುರುಬರಹಳ್ಳಿಯ ಲೋಕೇಶ್ ಎಂಬವರ ತಾಯಿಗೆ ಹೃದಯಾಘಾತ ಸಂಭವಿಸಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದರು. ಬಳಿಕ ಜಯದೇವ ಸೇರಿದಂತೆ ನಾಲ್ಕೈದು […]

ಜನರು ಅಸ್ವಸ್ಥ ಪಂಜಾಬ್‌ನ ತಾರ್ನ್ ತರಣ್‌ನ ಗುರುದ್ವಾರದಲ್ಲಿ ಪ್ರಸಾದ ಸೇವಿಸಿದ ನಂತರ ಕನಿಷ್ಠ 10 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಅಮೃತಸರ ಮೂಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೆ ನಿಧನರಾದ ತಾಯಿಗಾಗಿ ರಘುವೀರ್ ಸಿಂಗ್ ಎನ್ನುವವರು ಆಯೋಜಿಸಿದ್ದ ಸುಖಮಣಿ ಸಾಹಿಬ್ ಪ್ರವಚನದಲ್ಲಿ ಈ ಘಟನೆ ನಡೆದಿದೆ. ಅವರ ಮನೆಯಲ್ಲಿ ಪ್ರಾರ್ಥನಾ ಪ್ರವಚನವನ್ನು ಆಯೋಜಿಸಲಾಗಿತ್ತು. ಪ್ರಾರ್ಥನೆಯ ಪ್ರವಚನದ ನಂತರ ರಘುವೀರ್ ಸಿಂಗ್ […]

ವಿಶ್ವದಲ್ಲೇ ಅತಿದೊಡ್ಡ ಕೋವಿಡ್-ಆರೈಕೆ ಕೆಂದ್ರವೆಂದು ಹೆಸರಾದ ಹತ್ತು ಸಾವಿರ ಹಾಸಿಗೆಗಳ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಇಂದು ಇಲ್ಲಿನ ರಾಧಾ ಸೋಮಿ ಸತ್ಸಂಗ್ ಬಿಯಾಸ್‌ನಲ್ಲಿ ಉದ್ಘಾಟಿಸಿದರು. ಸೌಮ್ಯ ಮತ್ತು ಲಕ್ಷಣರಹಿತ ಕರೊನಾವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಛತ್ತಾಪುರದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ ಇದ್ದು 200 ಆವರಣಗಳನ್ನು ಹೊಂದಿದೆ. ತಲಾ ಒಂದೊಂದು ಆವರಣದಲ್ಲಿ 50 […]

ಕೊರೊನಾ ವೈರಸ್ ಗೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧಾರಿಸಿದ್ದಾರೆ. ಬೆಂಗಳೂರಿನಲ್ಲಿ  ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ದಿನೇ ದಿನೇ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ  ಸುಮಾರು 50 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 40 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 12 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಆದರಿಂದ್ದ ಮಲ್ಲೇಶ್ವರಂ ವ್ಯಾಪಾರಿಗಳು ಇಂದಿನಿಂದ ಜುಲೈ 7 ರವೆಗೆ […]

ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪರದಾಡುತ್ತಿದೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು […]

ದಿನದಿಂದ ದಿನಕ್ಕೆ ಕೊರೊನಾ ಹೆಚ್ಚುತ್ತಿದ್ದು ನಗರದ 20 ವಾರ್ಡ್‍ಗಳನ್ನು ಡೇಂಜರ್ ಝೋನ್‍ಗಳಾಗಿ ಪರಿವರ್ತನೆಗೊಳಿಸಲಾಗಿದೆ. ಕೊರೊನಾ ಹಾಟ್‍ಸ್ಪಾಟ್ ಪಾದರಾಯನಪುರವನ್ನು ವಿವಿ ಪುರಂ ಮೀರಿಸುತ್ತಿದ್ದು, ಈ ಎರಡೂ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಪಾದರಾಯನಪುರದಲ್ಲಿ 81 ಮಂದಿ ಸೋಂಕಿತರಿದ್ದರೆ, ಇತ್ತೀಚೆಗಷ್ಟೆ ಸೋಂಕು ಕಾಣಿಸಿಕೊಂಡ ವಿವಿಪುರಂನಲ್ಲಿ  73 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ವಿವಿ ಪುರಂನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚುಮಾಡಿದೆ. ಹಾಗೆಯೇ ಧರ್ಮರಾಯಸ್ವಾಮಿ ದೇವಸ್ಥಾನ […]

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಕ್ತಿದ್ದು, ಬಳ್ಳಾರಿಯಲ್ಲಿ ಇಂದು ಕೊರೊನಾ ಮಹಾಮಾರಿಗೆ ಮೂವರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಕ್ತಾ ಇತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೂವರೂ ಸಾವನ್ನಪ್ಪಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಇದುವರೆಗೆ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 32 […]

Advertisement

Wordpress Social Share Plugin powered by Ultimatelysocial