ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ […]

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. 2020ರಲ್ಲಿ, ರಜನಿಕಾಂತ್​ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ ಆರಂಭಿಸುವುದಿಲ್ಲ […]

ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್‌ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್‌ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ನವದೆಹಲಿ,ಅ.21- ನೂರು ಕೋಟಿ ಮಂದಿಗೆ ಕೊರೊನಾ ಲಸಿಕೆ ಹಾಕುವ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. 130 ಕೋಟಿ ಭಾರತೀಯರ ಪೈಕಿ ನೂರು ಕೋಟಿ ಮಂದಿಗೆ ಲಸಿಕೆ ಹಾಕಲು ನಾವು ಯಶಸ್ವಿಯಾಗಿರುವುದು ಭಾರತೀಯ ವಿಜ್ಞಾನಿಗಳ ವಿಜಯ ಎಂದು ಮೋದಿ ಟ್ವಿಟರ್‍ನಲ್ಲಿ ಶ್ಲಾಘಿಸಿದ್ದಾರೆ. ನಾವು 100 ಕೋಟಿ ಲಸಿಕೆ ಸಾಧನೆ ಮಾಡಲು ಸಹಕರಿಸಿರುವ ವಿಜ್ಞಾನಿಗಳು, ವೈದ್ಯರು, ನರ್ಸ್‍ಗಳು ಹಾಗೂ ಈ ನಿಟ್ಟಿನಲ್ಲಿ ಪರಿಶ್ರಮ ಹಾಕಿರುವ […]

 ಜ್ವರದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜೀ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ. ದೇವರು ಅವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ. ಎಂದು ಪಿಎಂ ಮೋದಿ ಹಾರೈಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಏರುಪೇರಾಗಿದ್ದು. ಕೆಲವು ವರ್ಷಗಳಿಂದ ಆರೋಗ್ಯ ಸರಿಯಿರಲಿಲ್ಲ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಘಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು.ಈ ಹಿಂದೆ ಗ್ಯಾಂಗ್ರಿನ್ ಆಗಿದ್ದ ಕಾರಣ ಅವರ ಒಂದು ಕಾಲನ್ನು ತೆಗೆಯಲಾಗಿತ್ತು. ಆ ನಂತರವೂ ಹಲವು ಆರೋಗ್ಯ ಸಮಸ್ಯೆಗಳು ಅವರನ್ನು ಬಾಧಿಸುತ್ತಲೇ ಇದ್ದವು. 72 ವರ್ಷದ ಸತ್ಯಜಿತ್‌ ಕೆಲವು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಬಳಿಕ ಅವಕಾಶಗಳು ಇಲ್ಲವಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದಾರೆ. ಸತ್ಯಜಿತ್‌ […]

Advertisement

Wordpress Social Share Plugin powered by Ultimatelysocial