ಮೈಸೂರು, ಅಕ್ಟೋಬರ್ 6: ನಾಡಹಬ್ಬ ದಸರಾ ಹಿನ್ನಲೆ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ಆಗಮಿಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ನಗರದ ಮೈಸೂರು- ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷ್ಯಾ ಜಂಕ್ಷನ್ ಬಳಿ ಎಸ್.ಎಂ. ಕೃಷ್ಣ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು ಹೂಗುಚ್ಛ ನೀಡಿ, ಆತ್ಮೀಯವಾಗಿ ಸ್ವಾಗತಿಸಿದರು.  ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ: ಶಿವಸೇನೆ ಆಕ್ರೋಶ ಈ ಬಾರಿಯ […]

ಬೆಂಗಳೂರು : ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಅನುಭವ, ಸಲಹೆ ಹಾಗೂ ಮಾರ್ಗದರ್ಶನದ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸೆಂಚುರಿ ಕ್ಲಬ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ ನನ್ನದೇ ಜವಾಬ್ದಾರಿಗಳಿವೆ. ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಕಟ್ಟಬೇಕು. ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ […]

ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಮೇಲೆ ನಡೆದಿರುವ ದೌರ್ಜನ್ಯ ದೇಶದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿದೆ. ದೇಶದ ಅನ್ನದಾತರ ಮೇಲೆ ಉತ್ತರ ಪ್ರದೇಶ, ಹರಿಯಾಣ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ದೌರ್ಜನ್ಯ ನಡೆಸುತ್ತಿವೆ.ಮೂರು ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಕಳೆದ 10 ತಿಂಗಳಿಂದ ಚಳುವಳಿ ಮಾಡುತ್ತಿದ್ದಾರೆ. ಇಂತಹ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಕಾರು ಹರಿಸಿ ಹತ್ಯೆ […]

“ನಿನ್ನ ಸನಿಹಕೆ” ಚಿತ್ರ ಡಾ ರಾಜ್ ಮೊಮ್ಮಗಳು ಧನ್ಯ ರಾಮ್‌ಕುಮಾರ್‌ ಅವ್ರ ಚೊಚ್ಚಲ ಚಿತ್ರವಾಗಿದ್ದು, ಈಗಾಗ್ಲೇ ಸಾಕಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ. ಹೀಗಾಗಿ ರಾಜ್ ಕುಟುಂಬದ ಸದಸ್ಯರು ಕೂಡ ಚಿತ್ರವನ್ನ ಕಣ್ತುಂಬಿಕೊಳ್ಳೊದಕ್ಕೆ ಕಾತುರರಾಗಿದ್ದಾರೆ. ಅಷ್ಟೆ ಅಲ್ಲದೇ ಇಂದು ಸಿ.ಎಂ ಬಸವರಾಜ ಬೊಮ್ಮಾಯಿ ಅವ್ರನ್ನ ಭೇಟಿಮಾಡಿ. ಇದೇ ಸಂದರ್ಭದಲ್ಲಿ ಸಿ.ಎಂ ಬೊಮ್ಮಾಯಿ ಅವ್ರಿಗೆ ಚಿತ್ರದ ಪ್ರೀಮಿಯರ್ ಶೋಗೆ ಟಿಕೆಟ್ ನೀಡಿ ಆಹ್ವಾನಿಸಿದ್ದಾರೆ. ಇದೇ ಗುರುವಾರ ನಡೆಯೋ ಪ್ರೀಮಿಯರ್ ಶೊ ನಲ್ಲಿ ಧನ್ಯ ರಾಮ್‌ಕುಮಾರ್ […]

ರಾಮ ಹುಟ್ಟಿದ ರಾಜ್ಯ, ರಾವಣ ರಾಜ್ಯವಾಗುತ್ತಿದೆ…! ರಾಮ ಹುಟ್ಟಿದ ಉತ್ತರ ಪ್ರದೇಶ ರಾಜ್ಯ ಈಗ ರಾವಣರ ರಾಜ್ಯವಾಗುತ್ತಿದೆ. ರೈತರನ್ನ ರಕ್ಷಿಸುವ ಬದಲು ಅವರನ್ನ ಸಾಯಿಸುವ ಘಟನೆ ಆ ರಾಜ್ಯದಲ್ಲಿ ನಡೆಯುತ್ತಿದೆ. ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟರೆ ಅವರನ್ನ ತಡೆದು ಗೃಹಬಂಧನದಲ್ಲಿ ಇಡಲಾಗಿದೆ. ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ರೈತರು ಪ್ರತಿಭಟನೆ ಆರಂಭಿಸಿ 10 ತಿಂಗಳಾದರೂ ಅವರಿಗೆ ನ್ಯಾಯ ಕೊಡಲು, ಕಾನೂನಿಗೆ ತಿದ್ದುಪಡಿ ತರಲು ಆಗಿಲ್ಲ. ಇಂತಹ ಸರ್ಕಾರ ನಮಗೆ […]

ನಟ-ರಾಜಕಾರಣಿ ಜಗ್ಗೇಶ್ ಅವರು ಸಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಆರ್‌ಎಸ್‌ಎಸ್ ಅಂದ್ರೆ ಏನೆಂದು ವಿವರಿಸುವ ಪ್ರಯತ್ನ ಮಾಡಿದ್ದಾರೆ. ”ನಾನು ಕಂಡ ಅರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ, ಕೊರೊನಾ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ […]

ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಲೆ ಪಾವತಿಗೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ನೀಡಿದ್ದ ಗಡುವಿನಲ್ಲಿ 5 ಕಾರ್ಖಾನೆಗಳು ಒಟ್ಟು 13.65 ಕೋಟಿ ರೂ ಬಾಕಿ ಪಾವತಿಸಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಂಕರ ಪಾಟೀಲ್ ಮುನೇನಕೊಪ್ಪ ,ಗಡುವು ಮುಗಿದರೂ 15.91 ಕೋಟಿ ರೂ ಬಾಕಿ ಉಳಿಸಿಕೊಂಡಿರುವ ಎರಡು ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಈಗಾಗಲೇ ನೋಟಿಸ್ ಜಾರಿಗೊಳಿಸಿದ್ದು ರೈತರಿಗೆ ಬಾಕಿ […]

ಪ್ರೊ ಕಬಡ್ಡಿ ಲೀಗ್ ನ ಎಂಟನೇ ಆವೃತ್ತಿ ಡಿಸೆಂಬರ್ 22 ರಿಂದ ಮತ್ತೆ ಆರಂಭವಾಗುತ್ತಿದೆ. ಕೊರೊನಾ ಹಿನ್ನಲೆಯಲ್ಲಿ ಎಲ್ಲ ಆಟಗಳನ್ನ ಒಂದೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದ್ದು ಎಲ್ಲಾ ಆಟಗಳು ಬೆಂಗಳೂರಿನ ಕಂಠಿರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ಕ್ರೀಡಾಕೂಟದ ಆಯೋಜಕರಾದ ಮಾಶಾಲ್ ಸ್ಪೋರ್ಟ್ಸ್ ತಿಳಿಸಿದೆ. ಆದರೆ ಕೊರೊನಾ ಅಲೆಯ ಭೀತಿ ಇದ್ದು, ಆಟಗಾರರು ಮತ್ತು ಎಲ್ಲಾ ಪಾಲುದಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗೃತಾ ಕ್ರಮವಾಗಿ, ಪಂದ್ಯಗಳು ಕ್ರೀಡಾಂಗಣದಲ್ಲಿ ಯಾವುದೇ […]

ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಮೇಲೆ ಹಲ್ಲೆಯನ್ನು ಖಂಡಿಸಿ ಹಾಗೂ ಕಬ್ಬಿನ ಎಫ್‍ಆರ್‍ಪಿ ದರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದವು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಜಾಥ ನಡೆಸಿ ಕಬ್ಬಿನ ಎಫ್‍ಆರ್‍ಪಿ ದರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಲಾಯಿಸಿದರು ಇದೇ ವೇಳೆ  ಮಾತನಾಡಿದ ಕುರುಬೂರು ಶಾಂತಕುಮಾರ್, ಕಬ್ಬಿನ ಎಫ್‍ಆರ್‍ಪಿ ದರವನ್ನು ಕಳೆದ ಎರಡು ವರ್ಷಗಳಿಂದ ಏರಿಕೆ […]

‘ಅಣ್ಣಾತೆ’ ಸಿನಿಮಾದ ಹಾಡು ಇಂದು ಬಿಡುಗಡೆ ಆಗಿದ್ದು, ಇದು ಎಸ್‌ಪಿಬಿ ರಜನಿಕಾಂತ್‌ಗೆ ಹಾಡಿರುವ ಕೊನೆಯ ಹಾಡಾಗಿದೆ. ರಜನಿಕಾಂತ್‌ಗಾಗಿ ಎಸ್‌ಪಿ ಬಾಲಸುಬ್ರಹ್ಮಣ್ಯಂ ಹಾಡಿರುವ ಕೊನೆಯ ಹಾಡು ಇಂದು ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಆದ ಬಗ್ಗೆ ಭಾವುಕವಾಗಿ ಟ್ವೀಟ್ ಮಾಡಿರುವ ರಜನಿಕಾಂತ್, ”ಕಳೆದ 45 ವರ್ಷಗಳಿಂದ ಎಸ್‌ಪಿ ಬಾಲಸುಬ್ರಹ್ಮಣ್ಯಂ ಧ್ವನಿ ನನ್ನ ಪಾತ್ರಗಳಿಗೆ ಜೀವ ತುಂಬಿದೆ. ನನ್ನ ‘ಅಣ್ಣಾತೆ’ ಸಿನಿಮಾಕ್ಕಾಗಿ ಎಸ್‌ಪಿಬಿ ಹಾಡುವ ಹಾಡು ಅವರ ಜೀವನದ ಕೊನೆಯ ಹಾಡಾಗುತ್ತದೆ ಎಂದು […]

Advertisement

Wordpress Social Share Plugin powered by Ultimatelysocial