ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಇಂದೂ ಮುಂದುವರಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿದ್ದು, ಗಾಳಿಯ ರಭಸಕ್ಕೆ ಕೆಎಸ್‌ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ನಡೆದಿದೆ. ಸರ್ಕಾರಿ ಬಸ್ ಮೂಡಿಗೆರೆಯಿಂದ-ಚಿಕ್ಕಮಗಳೂರಿಗೆ ಸಂಚಾರ ನಡೆಸುತ್ತಿತ್ತು. ಕುದುರೆಗುಂಡಿ ಬಳಿ ಬಂದಾಗ ವಿದ್ಯುತ್ ಕಂಬ ಮುರಿದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಮುರಿದ ಕಂಬ ಬಸ್ […]

  ನವದೆಹಲಿ: ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಟಾಟಾ ಗ್ರೂಪ್​ ಒಡೆತನದ ಎ-320ನಿಯೋ ಏರ್​ ಇಂಡಿಯಾ ವಿಮಾನದ ಇಂಜಿನ್​ ಹಾರಾಟದ ಸಂದರ್ಭದಲ್ಲಿಯೇ ‘ಆಫ್’​ ಆಗಿರುವ ಘಟನೆ ನಡೆದಿದೆ. ಹಾರಾಟದ ಸಮಯದಲ್ಲಿ ಇಂಜಿನ್​ ಆಫ್​ ಆಗಿದೆ. ವಿಮಾನವು ಟೇಕ್​ ಆಫ್​ ಆದ 27 ನಿಮಿಷದಲ್ಲಿ ಇಂಜಿನ್​ ಸ್ಥಗಿತವಾಗಿದ್ದರಿಂದ ಮರಳಿ ಮುಂಬೈ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೆಳಗ್ಗೆ 9.43ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್​ ಆಫ್​ ಆಗಿತ್ತು. ಮಾರ್ಗಮಧ್ಯದಲ್ಲಿ […]

  ಬೆಂಗಳೂರು, ಮೇ 20- ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹೊರಡಿಸಲಾಗಿದ್ದ ಅಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಸೂಚಿತ ಕೆರೆ ಪ್ರದೇಶಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ […]

ಐಷಾರಾಮಿ ಕಾರು ತಯಾರಕ ಬಿಎಂಡಬ್ಲ್ಯು ಈ ವರ್ಷದ ಕ್ಯಾನೆಸ್ ಚಲನಚಿತ್ರೋತ್ಸವದ ಅಧಿಕೃತ ಪ್ರಾಯೋಜಕತ್ವವನ್ನು ಹೊಂದಿದೆ, ಇದೇ ವೇಳೆ ತನ್ನ ಹೊಸ ಉತ್ಪನ್ನವಾದ ಬಿಎಂಡಬ್ಲ್ಯು ಐ7 ಎಲೆಕ್ಟ್ರಿಕ್ ಕಾರ್ ಅನ್ನು ಶೋಕೇಸ್ ಮಾಡಿದೆ. ಸಿನಿ ಹಬ್ಬಕ್ಕೆ ಆಗಮಿಸುವ ಅಂತರಾಷ್ಟ್ರೀಯ ಅತಿಥಿಗಳು, ವಿಐಪಿಗಳು, ಸಿಇಒಗಳು ತನ್ನ ಪ್ರೀಮಿಯಂ ಎಲೆಕ್ಟ್ರಿಕ್ ವಾಹನಗಳ ಶ್ರೇಣಿಯನ್ನು ಹತ್ತಿರದಿಂದ ನೋಡುವ ಅವಕಾಶವನ್ನು ನೀಡುತ್ತಿದೆ. ಜತೆಗೆ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಬಿಎಂಡಬ್ಲ್ಯು 163 ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳನ್ನು ಸಹ […]

ಬೆಂಗಳೂರು: ಪಕ್ಷವನ್ನು ಸಮರ್ಥಿಸಿಕೊಳ್ಳಲು ವಕ್ತಾರರ ಹುಡುಕಾಟದಲ್ಲಿರುವ ಯುವ ಕಾಂಗ್ರೆಸ್​ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್​ ಮೊಬೈಲ್​ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್​, ಯುವ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೃಷ್ಣ, ರಾಜ್ಯ ಘಟಕದ ಅಧ್ಯಕ್ಷ ಮೊಹಮದ್​ ನಲಪಾಡ್​ ಹ್ಯಾರಿಸ್​ ಅವರು ಭಾಷಣ ಸ್ಪರ್ಧೆಯ ಮಾಹಿತಿಯನ್ನು ಪ್ರಕಟಿಸಿದರು. ರಾಜ್ಯದ ಯುವಕರು […]

ರಾಜಧಾನಿ ಬೆಂಗಳೂರಿನಲ್ಲಿ ಇಂದು ಶುಕ್ರವಾರ ಬೆಳಗ್ಗೆಯಿಂದ ಮಳೆಯ ಆರ್ಭಟ ಕೊಂಚ ಕಡಿಮೆಯಾದರೂ ಇತರ ಹಲವು ಜಿಲ್ಲೆಗಳಲ್ಲಿ ಮುಂದುವರಿದಿದೆ. ಹಲವು ಕಡೆಗಳಲ್ಲಿ ನಿನ್ನೆ ಹಗಲು ಮತ್ತು ರಾತ್ರಿಯ ಮಳೆಗೆ ಹಲವು ಅವಾಂತರಗಳು ಸಂಭವಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಶಾಲೆಗಳಿಗೆ ಇಂದು ಕೂಡ ರಜೆ ನೀಡಲಾಗಿದೆ. ದಾವಣಗೆರೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ […]

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ […]

  ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿದೆ. 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೊಕದ್ದಮೆಯಲ್ಲಿ ಹೇಳಿಕೊಳ್ಳಲಾಗಿದೆ. ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ […]

ಹುಸಿ ಬಾಂಬ್​​ ಕರೆ ಮಾಡಿದ್ದ ಆರೋಪಿ ಅರೆಸ್ಟ್​ ಬಾಂಕರ್: KIAL ಏರ್​​ಪೋರ್ಟ್​ಗೆ ಬಾಂಬ್​​ ಬೆದರಿಕೆ ಕರೆಮಾಡಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.. ಇಂದು ಮುಂಜಾನೆ 3:30ರ ಸಮಯದಲ್ಲಿ ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದ, ತಕ್ಷಣ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಮತ್ತು ಸಿಐಎಫ್​ಸಿ ಪೊಲೀಸರು ಪರಿಶೀಲನೆ ನಡೆಸಿದ್ದರು.. ಇದೀಗ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ […]

ಮೈಸೂರು: ನಮ್ಮ ದೇಶ ಕೃಷ ಆಧಾರಿತ ಕ್ಷೇತ್ರ.ನಮ್ಮ ದೇಶದಲ್ಲಿ 90ರಷ್ಟು ಸಣ್ಣ ಹಾಗೂ ಮಧ್ಯಮ ಕೃಷಿಕರಿದ್ದಾರೆ.ಇಡೀ ದೇಶದಲ್ಲಿ ನಗರಕ್ಕೆ ಹತ್ತಿರವಿರುವ ಭೂಮಿ ಸೈಟ್ ಗಳಾಗುತ್ತಿದೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಆತಂಕ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಣ್ಣ ಹಾಗೂ ಮಧ್ಯಮ ಕೃಷಿಕರನ್ನ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಂಘಗಳನ್ನ ಮಾಡಿದೆ.ಕೇಂದ್ರ ಸರ್ಕಾರ ವರ್ಷಕ್ಕೆ 6 ಸಾವಿರ ಹಣವನ್ನ ರೈತರಿಗೆ ನೇರವಾಗಿ […]

Advertisement

Wordpress Social Share Plugin powered by Ultimatelysocial