ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಲೆಕ್ಕಾಚಾರ ತುಂಬಾ ಸಿಂಪಲ್​​. ಗುಜರಾತ್​​ ಟೈಟಾನ್ಸ್​​ ವಿರುದ್ಧ ಗೆಲುವು ಮತ್ತು ಶನಿವಾರ ಮುಂಬೈ ಇಂಡಿಯನ್ಸ್​​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ ಸೋಲುವುದು. ಹೀಗಾದರೆ ಮಾತ್ರ ಆರ್​​ಸಿಬಿ ಪ್ಲೇ-ಆಫ್​​ ತಲುಪುತ್ತದೆ. ಹೀಗಾಗಿ ವಾಂಖೆಡೆಯಲ್ಲಿ ನಡೆಯುವ ಈ ಪಂದ್ಯ ಕುತೂಹಲದ ಕೇಂದ್ರಬಿಂದುವಾಗಿದೆ. ಲೆಕ್ಕಾಚಾರದಷ್ಟು ಸುಲಭವಾಗಿ ಐಪಿಎಲ್​​ 2022ರ ಅಗ್ರಸ್ಥಾನಿ ಗುಜರಾತ್​​ ಟೈಟಾನ್ಸ್​​​ ತಂಡವನ್ನು ಸೋಲಿಸಲು ಸಾಧ್ಯವಿಲ್ಲ. ಫಾಫ್​​ ಡು ಪ್ಲೆಸಿಸ್​​, ವಿರಾಟ್​​ ಕೊಹ್ಲಿ ಮತ್ತು ಗ್ಲೆನ್​​ ಮ್ಯಾಕ್ಸ್​​​ ಪೈಕಿ […]

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕಟು ವಿರೋಧಿಗಳಾಗಿರುವ ನಟ ಪ್ರಕಾಶ್ ರಾಜ್ ಅವರು ತಮಗೆ ಅನಿಸಿದ್ದನ್ನು ಮುಕ್ತವಾಗಿ ಹೇಳುತ್ತಾರೆ. ಅದರಲ್ಲೂ ಮೋದಿ ಅವರ ಬಗ್ಗೆ ಸದಾ ಒಂದು ಕಣ್ಣಿಟ್ಟಿರುವ ಪ್ರಕಾಶ್ ರಾಜ್ ಸಮಯ ಸಿಕ್ಕಾಗಲೆಲ್ಲಾ ಅವರನ್ನು ವಿರೋಧಿಸಿ ಕಾಲೆಳೆಯುವ ಟ್ವೀಟ್‌ಗಳನ್ನು ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ಗಿರಿಧಾಮವೊಂದಕ್ಕೆ ಭೇಟಿ ನೀಡಿದ್ದ ಪ್ರಕಾಶ್ ರಾಜ್ ಅಲ್ಲಿಯ ಆಕರ್ಷಕ ವೇಷ ತೊಟ್ಟು ಮೋದಿ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ಕಿಚಾಯಿಸಿದ್ದಾರೆ. ‘ನೋಡಿ, […]

ನೀವೇನಾದ್ರೂ ಚಿನ್ನ ಖರೀದಿ ಮಾಡುವ ಚಿಂತನೆಯಲ್ಲಿದ್ದರೆ ನಿಮಗಿದು ಸಕಾಲ. ಯಾಕಂದ್ರೆ ಕಳೆದ ಕೆಲವು ತಿಂಗಳುಗಳಿಂದ ಏರುತ್ತಲೇ ಇದ್ದ ಚಿನ್ನದ ಬೆಲೆಯಲ್ಲೀಗ ಸಾಕಷ್ಟು ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನದ ಬೆಲೆ 50,105 ರೂಪಾಯಿ ಇದ್ದು, ಬೆಳ್ಳಿ ಪ್ರತಿ ಕೆಜಿಗೆ 60,885 ರೂಪಾಯಿ ಆಗಿದೆ. ಬುಲಿಯನ್ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಕುಸಿತವಾಗಿದೆ. ಎಂಸಿಎಕ್ಸ್ ಮತ್ತು ಬುಲಿಯನ್ ಮಾರುಕಟ್ಟೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿ ಬಂಗಾರದ ದರ ಕನಿಷ್ಠ ಮಟ್ಟಕ್ಕೆ […]

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ನಿನ್ನೆ ಭಾರಿ ಮಳೆಯಾಗಿದ್ದು, ನಗರಾದ್ಯಂತ ಮನೆಗಳಿಗೆ ನೀರು ನುಗ್ಗಿದ್ದಲ್ಲದೆ, ಸಾವು-ನೋವಿನಂಥ ಅನಾಹುತಗಳೂ ಸಂಭವಿಸಿವೆ. ಮಳೆ ಅವಾಂತರದಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಒಂದೆಡೆಯಾದರೆ, ಆಡಳಿತ ಯಂತ್ರವೂ ಚುರುಕುಗೊಂಡಿದೆ. ನಿನ್ನೆ ರಾತ್ರಿ ನಗರದಲ್ಲಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಉಲ್ಲಾಳ ಉಪನಗರದ ಉಪ್ಕಾರ್ ಲೇಔಟ್ ಬಸ್ ನಿಲ್ದಾಣದ ಬಳಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು. ಈ ಸ್ಥಳದಲ್ಲಿ ಕಾವೇರಿ 5ನೇ ಹಂತದ ಪೈಪ್​ಲೈನ್​ ಕಾಮಗಾರಿಯಲ್ಲಿ ತೊಡಗಿದ್ದ ಬಿಹಾರ ಮೂಲದ […]

  ಬೆಂಗಳೂರು: ನಗರದಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ಉಲ್ಲಾಳ ಕೆರೆ ಸಮೀಪದ ಉಪಕಾರ್‌ ಲೇಔಟ್‌ ಬಸ್‌ನಿಲ್ದಾಣದ ಬಳಿ ಪೈಪ್‌ಲೈನ್‌ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ‘ಬಿಹಾರದ ದೇವ್‌ಭರತ್‌ ಹಾಗೂ ಉತ್ತರಪ್ರದೇಶದ ಅಂಕಿತ್‌ಕುಮಾರ್‌ ಮೃತಪಟ್ಟವರು. ತ್ರಿಲೋಕ್‌ ಎಂಬುವರು ಅಪಾಯದಿಂದ ಪಾರಾಗಿದ್ದಾರೆ’ ಎಂದು ಜ್ಞಾನಭಾರತಿ ಠಾಣೆ ಪೊಲೀಸರು ತಿಳಿಸಿದ್ದಾರೆ. ‘ಉಪಕಾರ್‌ ಲೇಔಟ್‌ ಬಸ್‌ನಿಲ್ದಾಣದ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಸ್ಥಳದಲ್ಲಿ ಮೂವರು […]

ಬೆಂಗಳೂರು, ಮೇ 18: ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕಾಗಿ ಬಲಿಕೊಡುವುದು ಬೇಡ. ಆರ್‌ಎಸ್‌ಎಸ್‌ನ ಹೆಡಗೆವಾರ್ ಭಾಷಣವನ್ನು ಪಠ್ಯ ಪುಸ್ತಕದಲ್ಲಿ ಸೇರಿಸುತ್ತಿರುವುದಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿಯಬೇಕು. ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ […]

ನವದೆಹಲಿ : ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 (NFHS-5)ರ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಜನರು ಮೊದಲಿಗಿಂತ ಹೆಚ್ಚು ಮಾಂಸಾಹಾರವನ್ನ ಸೇವಿಸುತ್ತಿದ್ದಾರೆ. ಇನ್ನೀದು ವಿಶೇಷವಾಗಿ ಕಳೆದ ಆರು ವರ್ಷಗಳಲ್ಲಿ ಪುರುಷರಲ್ಲಿ ತೀವ್ರ ಏರಿಕೆಯಾಗಿದೆ. 2019-21ರಲ್ಲಿ ನಡೆಸಲಾದ ಸಮೀಕ್ಷೆಯ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಎಂದಿಗೂ ಮಾಂಸಾಹಾರಿ ಆಹಾರವನ್ನ ಸೇವಿಸಿಲ್ಲ, ಇದನ್ನು ಸಮೀಕ್ಷೆಯಲ್ಲಿ ‘ಮೀನು, ಕೋಳಿ ಅಥವಾ ಮಾಂಸ’ ಎಂದು ಉಲ್ಲೇಖಿಸಲಾಗಿದೆ. ಇದು 2015-16 ರಲ್ಲಿ ನಡೆಸಿದ ಹಿಂದಿನ ಎನ್‌ಎಫ್‌ಎಚ್‌ಎಸ್‌ನಲ್ಲಿ […]

  ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಅದ್ಧೂರಿ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತದಿಂದ ಹಲವು ತಾರೆಯರು ಭಾಗಿಯಾಗಿದ್ದಾರೆ. ನಿನ್ನೆಯಿಂದಲೇ ( ಮೇ17) ಆರಂಭವಾಗಿರುವ ಕಾನ್‌ ಚಿತ್ರೋತ್ಸವ ಮೇ 28 ರವರೆಗೂ ನಡೆಯಲಿದೆ. ಈಗಾಗಲೇ ಹಲವು ತಾರೆಯರು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಕೊರೊನಾ ಹಿನ್ನೆಲೆಯಿಂದ ಕಳೆದ ಎರಡು ವರ್ಷಗಳಿಂದ ಕಾನ್‌ ಚಿತ್ರೋತ್ಸವವನ್ನು ಅದ್ಧೂರಿಯಾಗಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ಬಹಳ ಅದ್ಧೂರಿಯಾಗಿ ಮಾಡಲಾಗುತ್ತಿದ್ದು, ಸಿನಿಮಾ ತಾರೆಯರು ಕೂಡ ವಿಭಿನ್ನ ಶೈಲಿಯ ಡ್ರೆಸ್‌ಗಳಲ್ಲಿ […]

ಹೊಸದಿಲ್ಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 31 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಜೀವಾವಧಿ ಆರೋಪಿಗಳಲ್ಲಿ ಒಬ್ಬನಾದ ಎಜಿ ಪೆರಾರಿವಾಲನ್ ನನ್ನು ಬಿಡುಗಡೆ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ಈ ತೀರ್ಪು ಶ್ರೀಲಂಕಾ ಪ್ರಜೆಯಾದ ನಳಿನಿ ಶ್ರೀಹರನ್ ಹಾಗೂ ಆಕೆಯ ಪತಿ ಮುರುಗನ್ ಸೇರಿದಂತೆ ಇತರ ಆರು ಅಪರಾಧಿಗಳ ಬಿಡುಗಡೆಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಯಾಗಿದೆ. ಹತ್ಯೆಯ ಸಮಯದಲ್ಲಿ ಹತ್ತೊಂಬತ್ತು ವರ್ಷ ವಯಸ್ಸಿನವನಾಗಿದ್ದ […]

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ ” ಪ್ರಾರಂಭ ” ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ “ಪ್ರಾರಂಭ” ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ. ಇದು ನನ್ನ ಅಭಿನಯದ ನಾಲ್ಕನೇ ಚಿತ್ರ. ಪ್ರೀತಿ ಕೈ ಕೊಟ್ಡರೆ, ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಆದರೆ ಅದು […]

Advertisement

Wordpress Social Share Plugin powered by Ultimatelysocial