ಮತಾಂತರಗೊಂಡ ವ್ಯಕ್ತಿಯಿಂದ ಹಿಂದೂ ದೇಗುಲದ ವಿಗ್ರಹ ಭಗ್ನಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ…ದೇವರ ವಿಗ್ರಹ ಮೂರ್ತಿಯನ್ನ ಒಡೆದು ಹಾಕಿ ವಿಕೃತಿ ಮೆರೆದಿದ್ದಾರೆ… ಚಿಕ್ಕಬೇರ್ಯ ಗ್ರಾಮದ ಮಹೇಶ್ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿಯ ವಿಗ್ರಹ ಒಡೆದು ಹಾಕಿದ್ದಾನೆ.  ಕೃತ್ಯ ನಡೆಸಿತ್ತಿದ ವೇಳೆ ಗ್ರಾಮಸ್ಥರ ಕೈಗೆ ಆರೋಪಿ ಸಿಕ್ಕಿ ಬಿದ್ದಿದ್ದರಿಂದ  ಗ್ರಾಮಸ್ಥರು ಆರೋಪಿಯನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ…ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಮಹೇಶ್ ಎಂದು […]

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ […]

ನೆಲಮಂಗಲ: ಮಠ ಮಾನ್ಯಗಳು ವಿದ್ಯಾರ್ಥಿಗಳ ಪಾಲಿಕೆ ಜೀವನವನ್ನು ಕಲಿಸುವ ಗುರುಕುಲ ಇದ್ದಂತೆ, ಆದರೆ ಇಲ್ಲೊಂದು ಮಠ ಮಕ್ಕಳಿಗೆ ವಿದ್ಯೆ, ವಸತಿ, ಪ್ರಸಾದ ನೀಡುವ ಬದಲಿಗೆ ಕಾವಲು ಕಾಯುವ ಕೆಲಸದ ಶಿಕ್ಷೆ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವನಕಲ್ಲು ಮಲ್ಲೇಶ್ವರ ಮಠದ ಶ್ರೀ ಬಸವರಮಾನಂದ ಸ್ವಾಮೀಜಿ ತಮ್ಮ ಮಠದ ಶಾಲೆಯಲ್ಲಿ ಶಿಕ್ಷಣ ಕಲಿಯಬೇಕಾಗಿದ್ದ ಮಕ್ಕಳಿಗೆ ಪ್ರತಿನಿತ್ಯ ಕಾವಲು ಕಾಯೋ ಕೆಲಸಕ್ಕೆ ನೇಮಕ ಮಾಡಿರುವ ಆರೋಪ ಕೇಳಿಬಂದಿದೆ. […]

ಬೆಳಗಾವಿ: ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದರು. ಓಲಾ, […]

ಕೊರಟಗೆರೆ:- ಕೊರೊನಾ ಮತ್ತು ಪಾಶ್ಚುವಾರ್ಯ ರೋಗ ಬರೋದಿಲ್ಲ ಎಂಬ ಅನಾಮಿಕ ವ್ಯಕ್ತಿಯ ಮೂಢನಂಬಿಕೆಯ ಮಾತಿನಿಂದ ಅರಣ್ಯದಲ್ಲಿ ವಾಸಿಸುತ್ತೀದ್ದ ಕರಡಿಯನ್ನು ಸೆರೆಹಿಡಿದು ಸಾಯಿಸಿ ದೇಹವನ್ನು ಬೇಟ್ಟದ ಮೇಲೆ ಕತ್ತರಿಸಿ ಮಾಂಸವನ್ನಾಗಿ ಪರಿವರ್ತಿಸಿ ಸೇವಿಸಿರುವ ಘಟನೆ ಕೊರಟಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟ ಗ್ರಾಪಂ ವ್ಯಾಪ್ತಿಯ ಗೌಜಗಲ್ಲು ಗ್ರಾಮದ ಚಿಕ್ಕಬಸವಯ್ಯ ಎಂಬುವರ ಮನೆಯ ಮೇಲೆ ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸುರೇಶ್ ನೇತೃತ್ವದ ತಂಡ ಖಚಿತ […]

ಕೊರಟಗೆರೆ :- ತಾಲ್ಲೂಕು ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ಹಿಂದೆ ಇದ್ದ ಅಧ್ಯಕ್ಷರು ವೈಯಕ್ತಿಕ ಕಾರಣದಿಂದ ರಾಜೀನಾಮೆ ಕೊಟ್ಟಿದ್ದರು. ತದನಂತರ ಖಾಲಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ಅಲಿ ಉಪಾಧ್ಯಕ್ಷರಾಗಿದ್ದ ಭಾರತಿ ಸಿದ್ಮಲ್ಲಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಸರ್ವ ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಿ ಮಾತನಾಡಿದ ಅವರು. ನಾನು ಇಂದಿನಿಂದ ತಾಲ್ಲೂಕು ಪಟ್ಟಣ ಪಂಚಾಯಿತಿಯ ಪ್ರಭಾರ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ ನನ್ನ ಅಧ್ಯಕ್ಷಸ್ಥಾನ ಇರುವವರೆಗೂ ತಾಲ್ಲೂಕಿನ ಜನತೆಯ ಕುಂದುಕೊರತೆಗಳ […]

  ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಡಿಗ್ರೀ ಓದಿ ಸರ್ಟೀಫಿಕೆಟ್‌ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.  

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ ತಮ್ಮ ಹೊಸ […]

ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]

ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ  ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 […]

Advertisement

Wordpress Social Share Plugin powered by Ultimatelysocial