ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಅಂಥ ಸಚಿವ ಈಶ್ವರಪ್ಪನವುರ ಟಾಂಗ್‌ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಹೇಳಿದ್ರು. ಇದೇ ವೇಳೆ ಅವರು ಮಾತನಾಡುತ್ತ, ನಾಡು, ನುಡಿಗೆ, ಗಡಿಗೆ ಸಂಬಂಧಪಟ್ಟಂತೆ ಮಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.ಇನ್ನೂ ಮಹಾ ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಸರಿಯಾದ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅವರು ಹೇಳಿದರು. ಇನ್ನೂ […]

ದೇಶಭಕ್ತರಾದ ಶಿವಾಜಿ ಮಹರಾಜರು, ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರ ಚನ್ನಮ್ಮ ಅವರು ಸಮುದಾಯ ಮೀರಿ ನಿಂತು ದೇಶಕ್ಕಾಗಿ ತ್ಯಾಗ ಮಾಡಿ ದೇಶವನ್ನು ಒಗ್ಗೂಡಿಸಿದವರು, ಅವರ ಹೆಸರಲ್ಲಿ ನಾವೆಲ್ಲರು ಒಗ್ಗಟ್ಟಾಗಿ ಇರಬೇಕು, ಅವರನ್ನು ಜಾತಿಗೆ ಸೀಮಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಶಿಗ್ಗಾವಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ, ಈಗ ನಡೆಯುತ್ತಿರುವ ಗೊಂದಲದ ಬಗ್ಗೆ […]

ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಶಾಸಕ ರಾಮಣ್ಣ ಲಮಾಣಿ ಕೊರೋನದಿಂದ ಪಟ್ಟ ಮೃತಪಟ್ಟ ಕುಟುಂಬಗಳಿಗೆ ಸರಕಾರದಿಂದ ಬಂದ ಪರಿಹಾರ ಧನ 1 ಲಕ್ಷ ರೂಪಾಯಿಯ ಚೆಕ್ಕನ್ನು ಕೊರೊನದಿಂದ ಮೃತಪಟ್ಟ ಕುಟುಂಬಕ್ಕೆ ವಿತರಿಸಿದರು. ತಾಲೂಕಿನಲ್ಲಿ ಕೊರೋನ ಸೊಂಕಿನಿಂದ 69 ಕುಟುಂಬಗಳ ಪೈಕಿ ಅದರಲ್ಲಿ ಸದ್ಯಕ್ಕೆ 29 ಜನರು ಮೃತಪಟ್ಟವರಿಗೆ ಪರಿಹಾರ ಬಂದಿದೆ. ಗದಗ ಜೀಮ್ಸ್ ನಲ್ಲಿ ಅಧಿಕೃತವಾಗಿ ಬಂದ ಮಾಹಿತಿ ಪ್ರಕಾರ 29 ಕುಟುಂಬಗಳಿಗೆ ಪರಿಹಾರ ಚೆಕ್ ಬಂದಿದೆ ಅದರಲ್ಲಿ 17 […]

ಬಿದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ತಹಸಿಲ್ದಾರ್ ಸಾವಿತ್ರಿ ಸಲಗರ್ ಅವರ ನೆತೃತ್ವದಲ್ಲಿ ವ್ಯಾಕ್ಸಿನೇಷನ್ ಮೆಳ ಆಯೋಜಿಸಲಾಗಿದೆ.. ಬಸವಕಲ್ಯಾಣ ತಹಸಿಲ್ದಾರ್ ಸಾವಿತ್ರಿ ಸಲಗರ್ ಬಸವಕಲ್ಯಾಣ ನಗರದ ತುಂಬಾ ಓಡಾಡಿ ವ್ಯಾಕ್ಸಿನೇಷನ್ ಪಡೆಯದವರಿಗೆ ವ್ಯಾಕ್ಸಿನೇಷನ್ ನೀಡಿದ್ದಾರೆ…ಬಸವಕಲ್ಯಾಣ ನಗರದ ಮಹಾದ್ವಾರ ಮತ್ತು ಎ .ಪಿ.ಎಂ.ಸಿ ಮಾರುಕಟ್ಟೆ ಹಾಗು ಜನಬಿಡುವಿರುವ ಪ್ರದೆಶಗಳಿಗೆ ಪೊಲಿಸ್ ಮತ್ತು ಆರೊಗ್ಯ ಇಲಾಖೆಯಿಂದ ವಾಹನ ಸವಾರರ ವ್ಯಾಕ್ಸಿನೆಷನ್ ಪ್ರಮಾಣಪತ್ರ ಪರಿಶಿಲಿಸಿ ವ್ಯಾಕ್ಸಿನೇಷನ್ ನಿಡುತ್ತಿದ್ಧಾರೆಬಸವಕಲ್ಯಾಣ ನಗರದಲ್ಲಿ ಪ್ರತಿಯೊಂದು ವೃತ್ತದಲ್ಲಿ ಆರೊಗ್ಯ ಇಲಾಖೆಯಿಂದ ವ್ಯಾಕ್ಸಿನೇಷನ್ […]

ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು..ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡಧ್ವಜ ಸುಟ್ಟ, ಬೆಳಗಾವಿಯಲ್ಲಿ ಕಲ್ಲು ತೂರಾಟ, ಮಹಾರಾಷ್ಟ್ರದಲ್ಲಿ ಕನ್ನಡಿಗರು, ಅವರ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್‌ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆ ನಿಷೇಧಿಸಬೇಕು, ಕನ್ನಡ ಧ್ವಜ ಸುಟ್ಟವರು, ಕನ್ನಡಿಗರ ಮೇಲೆ ದಾಳಿ ನಡೆಸಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು…ಕೆಲ ಕಾಲ ರಸ್ತೆ ತಡೆ ನಡೆಸಿ, […]

ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವುದಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಈ ಬಗ್ಗೆ ನಟಿ ಹರಿಪ್ರಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿ, ರಾರಾಜಿಸುತ್ತಿರುವ ಕನ್ನಡ ಭಾವುಟದ […]

ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್‍ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ […]

ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.ಅಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತನ್ನ ಬೆಂಬಲವನ್ನು ಮಹಾರಾಷ್ಟ್ರ ಸರ್ಕಾರವು ಪುನರುಚ್ಛರಿಸಿದೆ. ಘಟನೆಯ ನಂತರ ಗಡಿಭಾಗದ ಜಿಲ್ಲೆಗಳಾದ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿವೆ.ಪ್ರತಿಮೆಗೆ ಮಸಿ ಬಳಿದಿರುವುದು ಕನ್ನಡಿಗರ ವಿಕೃತ […]

ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.ಆದ್ರೆ, ಬೇರೆ […]

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ.ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ.ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ […]

Advertisement

Wordpress Social Share Plugin powered by Ultimatelysocial