ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಎಂಟು ಮಂದಿಯ ಮೇಲೆ ಎಫ್ಐಆರ್ ದಾಖಲಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಸರ್ಕಾರ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲ್ಲೂಕಿನ 4 ಮಂದಿ ಮತ್ತು ಕನಕಪುರ ತಾಲ್ಲೂಕಿನ 4 ಮಂದಿಯ ವಿರುದ್ಧ ಎರಡು ತಾಲ್ಲೂಕಿನ ದಂಡಾಧಿಕಾರಿಗಳು ಅವರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾದವರು ನಿಯಮಗಳನ್ನು ಉಲ್ಲಂಘಿಸಿ ಹೊರಗಡೆ ಓಡಾಡುವುದು ಮತ್ತು ಮನೆಯಲ್ಲಿ ಮೊಬೈಲ್ ಬಿಟ್ಟು ಹೋಗುವುದು […]

ಮೈಸೂರು ಜೆಎಸ್ ಎಸ್ ಆಸ್ಪತ್ರೆ ‌‌ಯಲ್ಲಿ ನೂತನವಾಗಿ ಪ್ರಾರಂಭಿಸಲಿರುವ ಕೋವಿಡ್ ಲ್ಯಾಬೊರೇಟರಿ ಯನ್ನು ಮುಖ್ಯಮಂತ್ರಿ ಗಳು‌ ಆನ್ ಲೈನ್ ಮೂಲಕ  ಉದ್ಘಾಟನೆ ‌ಮಾಡಿದರು. ಇಂದು  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕುಳಿತು  ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಯಲ್ಲಿ ನೂತನವಾಗಿ ಪ್ರಾರಂಭಿಸಲಿರುವ  ಕೋವಿಡ್-19 ಲ್ಯಾಬೊರೇಟರಿ ಅನ್ನು ಆನ್‍ಲೈನ್ ವಿಡಿಯೋ ಸಂವಾದದ  ಮುಖಾಂತರ ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ‌ಯಡಿಯೂರಪ್ಪ‌ ಅವರು ಉದ್ಘಾಟನಾ‌ ಮಾಡಿದರು. ಕಾರ್ಯಕ್ರಮವನ್ನು ‌ನೆರವೇರಿಸಿ  ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು  

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಕೊರೊನಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ನಿರಾಕರಿಸಿದ್ದಾರೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ. ಈ ಆದೇಶವನ್ನು ಪಾಲಿಸದಿರುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.  

ಮಾಸ್ಕ್ ಧರಿಸಿರಬೇಕು,ಸ್ಯಾನಿಟೈಸರ್ ಬಳಕೆ ಮಾಡಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೊರೊನಾ ನಿಯಂತ್ರಿಸಲು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಆದರೆ ಇಲ್ಲಿ ಒಬ್ಬ ಮಹಿಳೆ ಬಿಎಂಟಿಸಿ ಬಸ್ ನಲ್ಲಿ ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಅವಾಂತರ ಸೃಷ್ಟಿ ಮಾಡಿದ್ದಾಳೆ. ಯಾವ ರೀತಿ ಅಂತ ನೀವೆ ನೋಡಿ.  

ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕಳೆದ ಒಂದೇ ದಿನದಲ್ಲಿ ಮೊದಲ ಬಾರಿಗೆ ಹೆಚ್ಚು ಸೋಂಕು ಪತ್ತೆಯಾಗಿದೆ. 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ಮಹಾಮಾರಿ ವೈರಸ್’ಗೆ 410 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,095ಕ್ಕೆ ಏರಿಕೆಯಾಗಿದೆ, ಈ ಪೈಕಿ  3,09,713 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,03,051 ಮಂದಿ ಸೋಂಕಿನಿಂದ […]

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಡಿಜಿಟಲ್ ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಗ್ರಾಹಕರು ಬ್ಯಾಂಕ್ ಗೆ ಹೋಗಬೇಕಾಗಿಲ್ಲ. ಈ ಖಾತೆಯನ್ನು ಇ-ಕೆವೈಸಿ ಮತ್ತು ವಿಡಿಯೋ ಪರಿಶೀಲನೆಯ ಮೂಲಕ ತೆರೆಯಬಹುದು ಎಂದು ತಿಳಿಸಿದೆ. ಹಾಗೆಯೇ ಡಿಜಿಟಲ್ ಉಳಿತಾಯ ಖಾತೆಯು ವರ್ಚುವಲ್ ಡೆಬಿಟ್ ಕಾರ್ಡ್‌ನೊಂದಿಗೆ ಬರುತ್ತದೆ. ಇದರ ಸಹಾಯದಿಂದ ಗ್ರಾಹಕರಿಗೆ 100 ಕ್ಕೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು […]

ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಶಂಕರ್ ಸಿಂಗ್ ವಘೇಲಾ ಅವರಿಗೆ ತೀವ್ರ ಜ್ವರ ಕಂಡುಬಂದು ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ಶಂಕರ್ ಸಿಂಗ್ ವಘೇಲಾ ಅವರಿಗೆ ಕೋವಿಡ್ -19 ಸೋಂಕು ದೃಢವಾದ ಮಾಹಿತಿ ತಿಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳು […]

ಅರಸೀಕೆರೆ  ನಗರದ ಶಾನುಭೋಗರ ಬೀದಿ ಹಾಗೂ ಸಂತೆಪೇಟೆ ಮೈದಾನದ ಮುಖ್ಯರಸ್ತೆ ಯನ್ನು ತಾಲ್ಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆದ್ದರಿಂದ ನಗರದ ಪ್ರಮುಖ ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡುವ ಪ್ರಮುಖ ವ್ಯಕ್ತಿಗಳಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದರು. ನಂತರ ಇಬ್ಬರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಂಪೂರ್ಣ ನಗರದ 2 ಬೀದಿಗಳನ್ನು ಸೀಲ್ ಡೌನ್ ಮಾಡಲಾಗಿದೆ, ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ತಿಳಿಸಿದರು. ಕೊರೊನಾ ದಿಂದ […]

ರಾಜ್ಯ ಸರ್ಕಾರ ಕೊರೊನಾ ವೈರಸ್ ಸಂಕಷ್ಟದ ನಡುವೆಯು ಅತಿದೊಡ್ಡ ರಿಸ್ಕ್ ತೆಗೆದುಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುತ್ತಿದೆ.ಆದರೆ ಈ ಸಮಯದಲ್ಲಿಯೂ ಕೂಡ ವಿದ್ಯಾರ್ಥಿಗಳು ನಕಲು ಮಾಡಿ ಪರೀಕ್ಷೆಯನ್ನು ಬರೆಯುತ್ತಿದ್ದರು.ಹೀಗಾಗಿ  ಈ  ಮೂರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ. ಗದಗದ ಮುನ್ಸಿಪಲ್‌ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಇಂದು ಗಣಿತ ವಿಷಯದಲ್ಲಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಭೇಟಿ ನೀಡಿದ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ […]

ಕೊರೊನಾ ವೈರಸ್ ಹಿನ್ನಲೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಅತ್ತಿಬೆಲೆ ಬಾರ್ಡರ್ ನಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ  ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಎಲ್ಲಾ ವಾಹನಗಳಿಗೆ ಅನುಮತಿ ನೀಡುವುದಿಲ್ಲ ಹಾಗೂ ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ವಾಹನಗಳಿಗೆ ಇ-ಪಾಸ್ ಇದ್ರೆ ಮಾತ್ರ ಅನುಮತಿ ನೀಡಲಾಗುವುದು ಮತ್ತು ತುರ್ತು ಸಂಧರ್ಭಗಳಿಗೆ ಅನುಮತಿ ನೀಡಲಾಗುತ್ತದೆ. ಇನ್ನೂ ತರಕಾರಿ ವಾಹನಗಳಿಗೆ ಕಂಪನಿ ವರ್ಕರ್ಸ್ ಗಳಿಗೆ ಐಡಿ ಕಾರ್ಡ್ ಗಳು ಇದ್ದಾರೆ ಮಾತ್ರ ಅನುಮತಿ […]

Advertisement

Wordpress Social Share Plugin powered by Ultimatelysocial