ವಾಷಿಂಗ್ಟನ್: ಕೊರೊನಾ ಸೋಂಕಿತರಿಗೆ ಮಲೇರಿಯಾ ನಿರೋಧಕ ಹೈಡ್ರಾಕ್ಸಿ ಕ್ಲೋರೋಕ್ವಿನ್ ಮತ್ತು ಅದಕ್ಕೆ ಸರಿಸಮನಾದ ಔಷಧವನ್ನು ನೀಡುವುದರಿಂದ ಅವರ ಹೃದಯದ ಮೇಲೆ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ತಿಳಿಸಿದೆ. ಸಂಶೋಧನೆ, ಅಧ್ಯಯನಕ್ಕಾಗಿ ಆಸ್ಪತ್ರೆಗಳಲ್ಲಿ ಬಳಸುವುದನ್ನು ಹೊರತುಪಡಿಸಿ ಕೊರೊನಾ ವೈರಸ್ ರೋಗಿಗಳಿಗೆ ಹೈಡ್ರಾಕ್ಸಿ ಕ್ಲೋರೋಕ್ವಿನ್ ನೀಡದಂತೆ ವೈದ್ಯರಿಗೆ ಎಚ್ಚರಿಕೆಯನ್ನೂ ನೀಡಿದೆ. ಕೊರೊನಾ ಸೋಂಕಿತರ ಚಿಕಿತ್ಸೆಯಲ್ಲಿ ಮಲೇರಿಯಾ ಹೈಡ್ರಾಕ್ಸಿ ಕ್ಲೋರೋಕ್ವಿನ್ ಪರಿಣಾಮಕಾರಿಯಾಗಬಲ್ಲದು ಎಂದು ಅಮೆರಿಕದ ಅಧ್ಯಕ್ಷ […]

ದೆಹಲಿ: ಉತ್ತರ ಕೊರಿಯಾದ ಕ್ರೂರ ದೊರೆ ಕಿಮ್‌ಜಾಂಗ್ ಉನ್ ಅವರ ಹೃದಯ ರಕ್ತನಾಳದ ಶಸ್ತ್ರಚಿಕೆತ್ಸೆಗೆ ಒಳಗಾಗಿದ್ದು, ಅವರ ಜೀವಕ್ಕೆ  ಅಪಾಯವಿದೆ. ಈ ಬಗ್ಗೆ ಇತ್ತಿಚಿಗೆ ಮಾದ್ಯಮಗಳು ವರದಿಯಿಂದ ಬಹಿರಂಗವಾಗಿತ್ತು. ಕೊರೊನಾ ನಡುವೆಯೂ ಚೀನಾ ತನ್ನ ಮಿತ್ರ ರಾಷ್ಟ್ರದ ನಾಯಕನ ನೆರವಿಗೆ ಧಾವಿಸಿದೆ. ಉನ್ ಬಗ್ಗೆ ಸಲಹೆ ನೀಡಲು ಚೀನಾದ ವೈದ್ಯರು, ಅಧಿಕಾರಿಗಳ ತಂಡವನ್ನು ರವಾನಿಸಿದೆ.ಆದರೆ ಚೀನಾದ ವೈದ್ಯರು ಉತ್ತರ ಕೊರಿಯಾಕ್ಕೆ ತೆರಳುತ್ತಿರುವುದರ ಹಿನ್ನೆಲೆಯಲ್ಲಿ ಕಿಮ್ ಸದ್ಯದ ಆರೋಗ್ಯ ಪರಿಸ್ಥಿಯನ್ನು ನಿಖರವಾಗಿ […]

ಮೈಸೂರು: ಕೊರೊನಾ ಹಿನ್ನಲೆ ಕೆಎಸ್‌ಆರ್‌ಟಿಸಿ ಹಳೆ ಬಸ್ಸೊಂದನ್ನು ಆಧುನೀಕರಣಗೋಳಿಸಿ, ಅದನ್ನು ಸಂಚಾರಿ ಫೀವರ್ ಕ್ಲಿನಿಕ್ ಸೇವೆಗೆ ಇಳಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಈ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ಈ ಬಸ್ಸಿನಲ್ಲಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳೆಲ್ಲವೂ ಇವೆ. ವೈದ್ಯಾಧಿಕಾರಿಗಳು, ನರ್ಸ್ಗಳು, ಟೇಬಲ್, ಫ್ಯಾನ್ ಹಾಗೂ ರೋಗಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಜನರಿಗೆ ಸಹಾಯಕವಾಗಲು ಇಂತಹ ವ್ಯವಸ್ಥೆ ಕಲ್ಪಿಸಲಾಗಿದೆ.

ನವದೆಹಲಿ: ಡೆಡ್ಲಿ ಕೊರೊನಾ ವೈದ್ಯರನ್ನು ಸಹ ಬಿಟ್ಟಿಲ್ಲ. ಬಾಬುಜಗಜೀವನರಾಮ್ ಆಸ್ಪತ್ರೆಯ ೧೧ ವೈದ್ಯರು ಸೇರಿ ೩೧ ಸಿಬ್ಬಂದಿಗೆ ಕೋವಿಡ್-೧೯ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ. ಎಲ್‌ಎನ್‌ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಕಳೆದ ಕೆಲವು ದಿನಗಳ ಅವಧಿಯಲ್ಲಿ ಒಟ್ಟು ೩೫೦ ಸಿಬ್ಬಂದಿಯನ್ನು ಈ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಪೈಕಿ ೩೧ ಜನರ ವರದಿ […]

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗಿದೆ.  ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ  24,506ಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1429 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ.  ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ […]

ನವದೆಹಲಿ : ಕೊರೊನಾ ಪೀಡಿತರಿಗೆ  ಕೇಂದ್ರ ಸರ್ಕಾರ ಸೀಮಿತ ಪ್ರಮಾಣದಲ್ಲಿ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಅನುಮತಿ ನೀಡಿದೆ. ದೆಹಲಿಯಲ್ಲಿ ಈವರೆಗೆ ನಾಲ್ವರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿಲಾಗಿದ್ದು, ಇದಕ್ಕೆ ಧನಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಕೆಲ ದಿನಗಳ ಹಿಂದೆ ನಾಲ್ವರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ […]

ಮುಂಬೈ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಜನತೆ ಆತಂಕಗೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೨೩ ಸಾವಿರ ಗಡಿದಾಟಿದೆ. ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಭೀತಿ ಎದುರಾಗಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಇನ್ನು ೧೪ ಮಂದಿ ಕಿಲ್ಲರ್ […]

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ನಾಳೆ ಮೊದಲ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಕೇಂದ್ರ ರ‍್ಕಾರದಿಂದ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಅನುಮತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಮೊದಲ ರೋಗಿಗೆ ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದು […]

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ..ಪ್ರತಿನಿತ್ಯ ಕೊರೊನಾ ವೈರಸ್ ಜನರಿಂದ ಜನರಿಗೆ ಹರಡುತ್ತಲೇ ಇದೆ..ಇಂದು ವಿಶೇಷ ಅಂದ್ರೆ ಬೆಂಗಳೂರು ನಗರದಲ್ಲೇ 11 ಹೊಸ ಕೊರೊನಾ ಸೋಂಕು ಹರಡಿರೋದು ಧೃಡಪಟ್ಟಿದೆ..ಇನ್ನು ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ 463 ಕ್ಕೆ ಏರಿಕೆ ಕಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರೋ ಹೆಲ್ತ್ ಬುಲಿಟನ್ ನಲ್ಲಿ ಸೋಂಕು ಧೃಡಪಟ್ಟಿರೋ ಬಗ್ಗೆ ತಿಳಿಸಿದ್ದಾರೆ..ಇಂದು 18 ಹೊಸ ಕೊರೊನಾ ಪ್ರಕರಣಗಳು […]

ನವದೆಹಲಿ : ಕಳೆದ 24 ಗಂಟೆಗಳಲ್ಲಿ 1,409 ಕೋವಿಡ್ -19 ಸಕಾರಾತ್ಮಕ ಪ್ರಕರಣಗಳು ವರದಿಯಾಗಿವೆ, ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದ್ದಾರೆ. ಒಂದೇ ದಿನದಲ್ಲಿ 1,409 ಹೊಸ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 21,393 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 16,454 ಸಕ್ರಿಯ ಪ್ರಕರಣಗಳಾಗಿವೆ. ಇದುವರೆಗೆ 4,257 ಜನ ಚೇತರಿಸಿಕೊಂಡಿದ್ದು, ಒಂದು ದಿನದಲ್ಲಿ 388 ಜನ ಚೇತರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದ್ದಾರೆ.  

Advertisement

Wordpress Social Share Plugin powered by Ultimatelysocial