ನಿಮ್ಮ ಮನಸ್ಸಿನಲ್ಲಿ ಕೊರೊನಾ ಕುರಿತ ಯಾವುದೇ ಗೊಂದಲಗಳಿದ್ದರೂ ಒಂದು ಕರೆ ಮಾಡುವುದರ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.ಕೊರೊನಾದಿಂದ ರಕ್ಷಣೆಗೆ ಅನುಸರಿಸಬೇಕಾದ ಕ್ರಮಗಳು, ಮಾನಸಿಕ ತಳಮಳದಿಂದ ಒತ್ತಡ ಅನುಭವಿಸುತ್ತಿರುವವರಿಗೆ ಮಾಹಿತಿ. ನಿಮಗೆ ಆಹಾರ ಸಿಗುವುದು ಕಷ್ಟವಾಗುತ್ತಿದೆಯೇ?, ಸಾಮಾನ್ಯ ಆರೋಗ್ಯ ಸಮಸ್ಯೆಗೆ ವೈದ್ಯರ ತುರ್ತು ಸಲಹೆ ಬೇಕೇ?, ಸರ್ಕಾರದಿಂದ ನೀಡುವ ತರಕಾರಿ , ಧಾನ್ಯ, ದಿನಸಿ ಮತ್ತಿತರೆ ಸೌಲಭ್ಯಗಳ ಬಗ್ಗೆ ಮಾಹಿತಿ ಬೇಕೇ?, ಕೊರೊನಾ ಸಂದರ್ಭದಲ್ಲಿ ನೀವು ಕುಟುಂಬ ಹಿಂಸೆ ಅನುಭವಿಸುತ್ತಿದ್ದೀರಾ ಹಾಗಿದ್ದರೆ ತಪ್ಪದರೆ ಈ […]

ನವದೆಹಲಿ: ಲಾಕ್‌ಡೌನ್ ಹಿನ್ನಲೆ ಪರೀಕ್ಷೆಗಳು ಸ್ಥಗೀತಗೊಂಡಿರುವುದರಿAದ ಲಾಕ್‌ಡೌನ್ ತೆರವುಗೊಳ್ಳುತ್ತಿದ್ದಂತೆಯೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಆ ವಿಚಾರವಾಗಿ ನಾನು ನಾಳೆ ರಾಜ್ಯಗಳ ಶಿಕ್ಷಣ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.  ಜೆಇಇ ಮೇನ್, ನೀಟ್ ಮೊದಲಾದ ಪ್ರವೇಶ ಪರೀಕ್ಷೆಗಳನ್ನು ವಿಳಂಬಗೊಳಿಸಲಾಗಿದೆಯಷ್ಟೇ. ಮೇ,ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದರು.

ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಾಗಿ ಒಂದು ತಿಂಗಳಾಯಿತು. ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು ರೈತಾಪಿ ಸಮುದಾಯ. ಈ ಸಂದರ್ಭದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಅದರಲ್ಲೂ ಹಣ್ಣು, ತರಕಾರಿ, ಹೂವು ಬೆಳೆದವರು ಕಣ್ಣೀರಿಡುವಂತಾಗಿದೆ. ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಹಾಲು ಖರೀದಿಸಿ ಹಾಲು ಉತ್ಪಾದಕರಿಗೆ ನೇರವಾಗಿದ್ದೀರಿ ಹಾಗೆಯೇ […]

“ಹೊಸದಾಗಿ ಕೆಪಿಸಿಸಿ ಅಧ್ಯಕ್ಷರಾಗಿರುವುದನ್ನು ತೋರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಈ ರೀತಿ  ನಾಟಕ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ. ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ. ಜನ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಸರ್ಕಾರದ ಜೊತೆ ಇದ್ದಾರೆ. ಡಿ.ಕೆ.ಶಿವಕುಮಾರ್ ಆರೋಪದಲ್ಲಿ ಹುರುಳಿಲ್ಲ” ಎಂದು ಕಿಡಿಕಾರಿದ್ದಾರೆ. “ಕೊರೊನಾ ವಿಚಾರದಲ್ಲಿ ಡಿಕೆಶಿವಕುಮಾರ ವತುಂಬಾ ಡ್ರಾಮಾ ಮಾಡತ್ತಿದ್ದಾರೆ. ಇಷ್ಟು ದಿನ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ ಎಂದು ಕೇಳುವ ಡಿಕೆಶಿ. […]

ಕೊರೋನಾ ವೈರಸ್​​ನಿಂದ ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಮೃತಪಟ್ಟಿದ್ದಾರೆ. ದೇಶಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ ಅನೇಕರಿಗೆ ಆಹಾರಇಲ್ಲದೆ ಪರದಾಡುತ್ತಿದ್ದಾರೆ. ಅಂಥವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿತ್ತು. ಬಡವರಿಗೆ ಆಹಾರ ವಿತರಿಸುವಾಗಲೇ ಯಾರಿಂದಲೋ ಬದ್ರುದ್ದೀನ್ ಶೇಖ್​ಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆ ಗುಜರಾತ್​ನ ಅಹಮದಾಬಾದ್​ನಲ್ಲಿರುವ ಎಸ್​ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. […]

ಮಂಡ್ಯದಲ್ಲಿ ಆರೋಗ್ಯ ತಪಾಸಣೆ ವೇಳೆ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮಾರಕ ಕೊರೊನಾ ಸೋಂಕು ಪರಿಸ್ಥಿತಿಯ ನಡುವೆಯೂ ಪತ್ರಕರ್ತರು ತಮ್ಮ ಪ್ರಾಣದ ಹಂಗುತೊರೆದು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆಗೆ ಅಡ್ಡಿಪಡಿಸಿ, ಅವರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಎಂಎಲ್ ಸಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನಿಂದ ಈ ದೃಷ್ಕೃತ್ಯ ನಡೆದಿರುವುದು […]

ಕೊರೋನಾ ವಿರುದ್ಧದ ಹೋರಾಟದಲ್ಲಿ ನಾಗರೀಕರು ಭಾಗಿಯಾಗಿದ್ದು, ಇದರಲ್ಲಿ ಜಯಗಳಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಾಕ್ ಡೌನ್ ಬಳಿಕ ಎರಡನೇ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ ಅವರು, ಜನ ಹೋರಾಟದ ಸಿಪಾಯಿಗಳಾಗಿದ್ದಾರೆ. ಕೋರೋನಾ ವಿರುದ್ಧದ ಹೋರಾಟ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ. ಜನರು ಮೇಣದಬತ್ತಿ, ದೀಪ ಬೆಳಗುವ ಮೂಲಕ ಮತ್ತು ಚಪ್ಪಾಳೆ ತಟ್ಟುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದು ಜನರೇ ನೇತೃತ್ವ ವಹಿಸಿರುವ ಹೋರಾಟವಾಗಿದೆ. ಲಾಕ್ […]

ಕೊರೊನಾ ವೈರಸ್ ಕಾಯಿಲೆಯಿಂದ ಗುಣಮುಖರಾಗಿರುವವರು ಧರ್ಮವನ್ನು ಬದಿಗಿಟ್ಟು, ಮುಂದೆ ಬಂದು ಕೊರೊನಾ ಪೀಡಿತರಿಗೆ ಪ್ಲಾಸ್ಮಾ ದಾನ ಮಾಡಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ದೆಹಲಿನಲ್ಲಿ ಮಾತನಾಡಿದ ಅವರು, ರಕ್ತದ ಪ್ಲಾಸ್ಮಾ ಧರ್ಮದ ನಡುವೆ ವ್ಯತ್ಯಾಸವನ್ನು ತೋರಿಸುವುದಿಲ್ಲ. ಹಿಂದೂ ವ್ಯಕ್ತಿಯ ಪ್ಲಾಸ್ಮಾ ಮುಸ್ಲಿಂ ರೋಗಿಯನ್ನು ಉಳಿಸಬಹುದು ಮತ್ತು  ಮುಸ್ಲಿಂ ರೋಗಿಯ ಪ್ಲಾಸ್ಮಾ ಹಿಂದೂ ವ್ಯಕ್ತಿಯನ್ನು ಉಳಿಸಬಹುದು.’ಮುಂದೆ ಬಂದು ಪ್ಲಾಸ್ಮಾವನ್ನು ದಾನ ಮಾಡಿ. ನಾವೆಲ್ಲರೂ ಕರೋನವೈರಸ್ ನಿಂದ ಚೇತರಿಸಿಕೊಂಡೂ […]

ಮೃತ ಶರೀರರದ ಜೊತೆ ಕಠೋರವಾಗಿ ವರ್ತಿಸಿ ಎಂದು ಯಾವ ಧರ್ಮವೂ ಹೇಳಿಲ್ಲ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ  ಮಾತನಾಡಿದ ಅವರು,  ಕೊರೊನಾ ಸೋಂಕು ಕಾರಣದಿಂದ 75 ವರ್ಷದ ಮಹಿಳೆ ಅಸುನೀಗಿದ್ದು, ಆಕೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರಿನ ಪಚ್ಚನಾಡಿ, ಬೋಳೂರು, ನಂದಿಗುಡ್ಡೆ, ಬಳಿಕ ಮೂಡುಶೆಡ್ಡೆ ಸ್ಮಶಾನಗಳಲ್ಲಿ ಅವಕಾಶ ನಿರಾಕರಿಸಿ ಜನರು ಪ್ರತಿಭಟನೆ ನಡೆಸಿದ್ದರು. ಶಾಸಕ ಭರತ್ ಶೆಟ್ಟಿ ಕೂಡಾ ಇಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶ ನಿರಾಕರಿಸಿದ್ದರು. ನಂತರ […]

ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ. ಸರ್ಕಾರ ಕೊರೊನಾ ಸೋಂಕಿತರನ್ನು ರಾಮನಗರಕ್ಕೆ ಕರೆತಂದು ಹುಡುಗಾಟ ಪ್ರದರ್ಶನ ಮಾಡಿದೆ’ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಮನಗರ ಕಾರಾಗೃಹಕ್ಕೆ ಕರೆತಂದಿದ್ದ ಐವರಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಮೂವರ ಪ್ರಕರಣ ಮುಚ್ಚಿ ಹಾಕಲು ಸರ್ಕಾರವೇ ಯತ್ನಿಸಿದೆ. ‘ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ’. ‘ಶ್ರೀರಂಗಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವೊಬ್ಬ […]

Advertisement

Wordpress Social Share Plugin powered by Ultimatelysocial