ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತೆ” ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು”. ”ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. ಶೇ.97 ರಷ್ಟು ಜನಕ್ಕೆ ಕೊರೊನಾ ಬಂದರೂ ವಾಸಿಯಾಗುತ್ತೆ. ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಬಂದ್ರೆ ಕಳಂಕ ಅಂತ ಅನ್ಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್ […]

ಬಡವರಿಗೆ ತಲುಪಬೇಕಾದ ಅಕ್ಕಿ ತಮಿಳುನಾಡಿನ ಪಾಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ  ಅವರು, ಅಕ್ಕಿ ಗೋಲ್‌ಮಾಲ್ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆಯೇ ಇಲ್ಲವೋ ಎಂಬುದು ತಿಳಿದಿಲ್ಲ. ಹರಿಯಾಣದಿಂದ ಬಂದ ಅಕ್ಕಿಯನ್ನು ತಮಿಳುನಾಡಿನ ಹೊಸೂರು ವ್ಯಾಪಾರಿಗೆ ಮಾರಾಟ ಮಾಡಲಾಗಿದೆ. ಇದನ್ನು ಬಿಜೆಪಿಯ ಸಕ್ರಿಯ ನಾಯಕರೇ ವ್ಯಾಪಾರ ಮಾಡಿದ್ದಾರೆ. ಆಹಾರ ಕಾಯಿದೆಗೆ ಒಂದು ನಿಯಮ ಇದೆ. ಕಾನೂನು ಬಾಹಿರವಾಗಿ ಅಕ್ಕಿ ಮಾರಟ ಮಾಡಿದವರ ಮೇಲೆ ಸರ್ಕಾರ […]

ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ರಾಮನಗರದಲ್ಲಿ ಮಾತನಾಡಿದ ಅವರು, ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು.ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ […]

ರಾಮನಗರ ; ರಾಮ ನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ, ಪಾದರಾಯನಪುರದ ಗ ಆರೋಪಿಗಳ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ. ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು […]

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೆಲಸ ಇಲ್ಲ. ಕೆಲವು ಕಾರ್ಮಿಕರು ಊರುಗಳಿಗೆ ತೆರಳಲಾಗದೇ ಇದ್ದಲ್ಲಿಯೇ ಉಳಿದುಕೊಂಡಿದ್ದಾರೆ ಅಂತವರಿಗೆ  ಮನೆ ಮಾಲೀಕರು ರೆಂಟ್ ಕೇಳುವಂತಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಒಂದು ತಿಂಗಳು ಬಾಡಿಗೆ ವಸೂಲು ಮಾಡಬಾರದು. ‘ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಈ ವಿಷಯದ ಬಗ್ಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಬೇಕು,  ವಿಶೇಷವಾಗಿ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ […]

ರಾಜ್ಯದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ  ಇಂದು ಹೊಸದಾಗಿ 18 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 445 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  18  ಸೋಂಕಿತರ ಪೈಕಿ ಬೆಂಗಳೂರಿನ 10 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ಕಲಬುರ್ಗಿ 1, ದಕ್ಷಿಣ ಕನ್ನಡದಲ್ಲಿ […]

ಕೊರೊನಾ ಸೋಂಕು ಪೀಡಿತರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿರುವ ಹಿನ್ನೆಲೆ ರೆಡ್ ಝೋನ್ ಇದೆ , ಜಿಲ್ಲೆಯಲ್ಲಿ ಯಾವುದೇ ರೀತಿ ಸಡಿಲಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದೆ, ಪರಿಸ್ಥಿತಿ ನೋಡಿ ಮುಂದಿನ ಕ್ರಮ […]

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದೆ.. ರಾಜ್ಯದಲ್ಲಿ  ಇಂದು ಹೊಸದಾಗಿ 16 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 443 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  16  ಸೋಂಕಿತರ ಪೈಕಿ ಬೆಂಗಳೂರಿನ 9 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ ಕೊರೊನಾ […]

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ದಾಳಿಯನ್ನು ನಡೆಸಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್ ಗೆ ಇನ್ಮುಂದೆ ಮತ್ತಷ್ಟು ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.  ದಾಳಿಗೆ ಮುಂದಾದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಗ್ರೀನ್ ಜೋನ್ ವಾತಾವರಣವಿದೆ. […]

ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಲಾಕ್‌ ಡೌನ್ ಜಾರಿಗೊಳಿಸಿದೆ, ನಗರದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಚಿಕಿತ್ಸೆ ಸಿಗದೆ ಗರ್ಭಿಣಿ ಸಾವನ್ನಪ್ಪಿದ ಘಟನೆ‌ ಬುಧವಾರ ನಡೆದಿದೆ. ಕಡಪಟ್ಟಿ ಗ್ರಾಮದ ನಿವಾಸಿ ರೂಪಾ ಶಿವಾನಂದ ಹೊಸಮನಿ(23) ಮೃತ ಗರ್ಭಿಣಿ. ಕೊರೊನಾ ಹಿನ್ನೆಲೆ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆ ವೈದ್ಯರ ಹಿಂದೇಟು ಹಾಕುತ್ತಿದ್ದಾರೆ.  ಆಂಬುಲೆನ್ಸ್ ನಲ್ಲಿ ಗರ್ಭಿಣಿಯನ್ನು ಹೊತ್ತು  ವಿವಿಧ ಖಾಸಗಿ ಆಸ್ಪತ್ರೆಗೆ ಸಂಬಂಧಿಕರ ಅಲೆದಾಟ ನಡೆಸಿದ್ದಾರೆ. ಆದ್ರೆ‌ ಯಾವುದೇ […]

Advertisement

Wordpress Social Share Plugin powered by Ultimatelysocial