ನವದೆಹಲಿ: ಕೊರೊನಾ ತೀವ್ರವಾಗಿ ಹರಡುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಕಾಲಿಟ್ಟಿದೆ. ಹೌದು ಏ. ೨೦ ರಂದು ಉದ್ಯೋಗಕ್ಕೆ ಹಾಜರಾದ ಸಚಿವಾಲಯದ ಉದ್ಯೋಗಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದರಿಂದ ದೆಹಲಿಯ ಜೋರ್ ಬಾಗ್‌ನ ರಾಜೀವ್ ಗಾಂಧಿ ಭವನ ಸಚಿವಾಲಯದ ಪ್ರಧಾನ ಕಚೇರಿಯನ್ನು ಪ್ರೋಟೋಕಾಲ್ ಮೂಲಕ ಮೊಹರು ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದ ಎಲ್ಲ ಸಹೊದ್ಯೋಗಿಗಳನ್ನು ಮುನ್ನಚ್ಚರಿಕೆಯಾಗಿ ಸ್ವಯಂ-ಪ್ರತ್ಯೇಕತೆಗೆ ಕಳಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ […]

ಮೈಸೂರು: ಕೊರೊನಾ ಸೋಕು ಹರಡುವ ಹಿನ್ನಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಲಾದೆ. ಈ ಮಧ್ಯೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದ ಹೊರವಲಯದ ದೇವಾಲಯವೊಂದರಲ್ಲಿ ಬಾಲ್ಯವಿವಾಹ ನಡೆದಿರುವ ಕುರಿತು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಾಲ್ಯ ವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ […]

ಪಾದರಾಯಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವ ಗೂಂಡಾಗಳ ವರ್ತನೆಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಜನರನ್ನು ರಕ್ಷಣೆ ಮಾಡಲು ಹಗಲು ರಾತ್ರಿ ಎನ್ನದೆ ಪೊಲೀಸರು,ವೈದ್ಯರು ಕರ್ತವ್ಯದಲ್ಲಿ ತೊಡಗಿದ್ದಾರೆ. ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. […]

ಕೊರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅನುಮತಿ ನೀಡಿದ್ದು, ರಾಜ್ಯದಲ್ಲಿ ಈ ಮಾದರಿಯ ಚಿಕಿತ್ಸೆ ಮುಂದುವರೆಸಬಹುದು ಎಂದು ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರೋನಾದಿಂದ ಗುಣಮುಖರಾದ ವ್ಯಕ್ತಿಯ ದೇಹದಿಂದ ರೋಗ ನಿರೋಧಕ ಶಕ್ತಿಯನ್ನು ಉಂಟು ಮಾಡುವ ರಕ್ತದ ಕಣಗಳನ್ನು ರೋಗ ಪೀಡಿತ ವ್ಯಕ್ತಿಗೆ ನೀಡುವ ಮೂಲಕ ಆತನನ್ನೂ ಈ ಕಾಯಿಲೆಯಿಂದ ಗುಣಪಡಿಸಬಹುದು. ಡಾ. ವಿಶಾಲ್ ರಾವ್ ಅವರಿಗೆ […]

ಪಾದರಾಯನಪುರಕ್ಕೆ ಅನುಮತಿ ಪಡೆದು ಹೋಗಲು ಅದು ಜಮೀರ್ ಅಹಮದ್ ಫಾದರ್ ಪ್ರಾಪರ್ಟಿ ಅಲ್ಲ ಎಂದು ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿಕ್ಕಮಗಳೂರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗ ವಿಧಾನಸಭೆಗೆ ಆಯ್ಕೆಯಾಗಿ ಬಂದಿದ್ದೇನೆಯೋ ಅವಾಗಲೇ ಜಮೀರ್ ಕೂಡ ಆಯ್ಕೆಯಾಗಿ ಬಂದಿದ್ದಾರೆ. ಹೀಗಾಗಿ ಜಮೀರ್ ಅವರಿಗೆ ಒಂದು ಕಾನೂನು ನನಗೊಂದು ಕಾನೂನು ಇಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ ರೀತಿ ಅನ್ವಯವಾಗುತ್ತದೆ. ಈಗಾಗಲೇ ಮುಖ್ಯಮಂತ್ರಿಗಳು ಅವನು […]

ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 7 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ, ಕಲಬುರಗಿಯಲ್ಲಿ ಇಂದು 4 ತಿಂಗಳ ಮಗು ಸೇರಿದಂತೆ ಹೊಸದಾಗಿ 5 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಲಬುರಗಿಯ ಐದು ಜನರಿಗೆ […]

ಬೆಂಗಳೂರು : ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಪುಂಡರಿಗೆ ಸಪೋರ್ಟ್ ಮಾಡಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮ್ಮದ್ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಹಿನ್ನಲೆ ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡುವಂತೆ ತಿಳಿಸಿದ್ದಾರೆ. ದಿನಕ್ಕೊಂದು ಹೇಳಿಕೆ ನೀಡಬೇಡ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಸುಮ್ಮನೆ ವಿವಾದ ಮಾಡಿಕೊಳ್ಳಬೇಡ. ತಪ್ಪು ನಡೆದಿದೆ, ಪೊಲೀಸರು ಅವರ […]

ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರೇ  ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್  ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಲ್ಲೆ ಮಾಡಿದ್ರೆ ಅಂತವರ ಕೈ ಕಾಲು ಮುರಿಯಿರಿ ಎಂದು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.  

ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಗೆ ನಿಂದಿಸಿ ಹಲ್ಲೆ ಮಾಡುವವರು, ಧಮ್ಕಿ ಹಾಕಿದವರು ಮನುಷ್ಯರಲ್ಲ, ಮೃಗಗಳು. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.  

ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ನೇರ ಕಾರಣರಾಗಿದ್ದು, ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯ ಮೇಲೆ ನಡೆಸಿದ ಹಲ್ಲೆ ಖಂಡನೀಯ. ಈ ಪ್ರಕರಣದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಸಿಬ್ಬಂದಿಯ ನಡೆಯೇ ತಪ್ಪು ಎಂಬಂತೆ ಮಾತನಾಡಿರುವ ಶಾಸಕರ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ನ್ಯಾಷನಲ್ ಸೆಕ್ಯೂರಿಟಿ […]

Advertisement

Wordpress Social Share Plugin powered by Ultimatelysocial