ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ […]

ಕಾಂಗ್ರೆಸ್​ ಶಾಸಕ ರಮೇಶ್​​ ಕುಮಾರ್​ ಮಹಿಳೆಯರ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೊಡ್ಡ ಬಿರುಗಾಳಿಯನ್ನೇ ಬೀಸಿದೆ. ರಮೇಶ್‌ ಕುಮಾರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ರಮೇಶ್​ ಕುಮಾರ್​ ಮಾತುಗಳಿಗೆ ಕಾಂಗ್ರೆಸ್ ನಾಯಕತ್ವ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಮಾತುಗಳಿಂದ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ ಇವುಗಳು ಸಮರ್ಥನೆಗೆ ಮೀರಿದ್ದಾಗಿದೆ.ಇಂತಹ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪಕ್ಷದ ಚುನಾವಣಾ ಕಾರ್ಯತಂತ್ರದ ಮೇಲೂ ಪರಿಣಾಮ ಬೀರಲಿದೆ. ಉತ್ತರ ಪ್ರದೇಶದಲ್ಲಿ ಲಡಕಿ ಹೂಂ ಲಡ್ ಸಕ್ತಾ […]

ರಾಮಮೂರ್ತಿನಗರ ವಾರ್ಡ್ ನ ಎನ್.ಆರ್.ಐ ಬಡಾವಣೆಯಲ್ಲಿ 35 ಎಕರೆ ಖಾಸಗಿ ಭೂಮಿ ನನ್ನ ಮೇಲಿನ ಆರೋಪ ಸುಳ್ಳು ಸತ್ಯಕ್ಕೆ ದೂರವಾದಧ್ದು ನಾನು ಯಾವುದೇ ತಪ್ಪು ಮಾಡಿಲ್ಲ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಭೂಹಗರಣದ ಬಗ್ಗೆ ನಗರಾಭಿವೃದ್ಧಿ ಬೈರತಿ ಬಸವರಾಜು ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 2013 ರಲ್ಲೆ ಎಕರೆಗೆ 18 ಲಕ್ಷ ನೀಡಿ ಖರೀದಿ ಮಾಡಿದ್ದೆನೆ ಈ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಉರುಳಿಲ್ಲ.ವಿಚಾರದ ಬಗ್ಗೆ ಜಮೀನು ಮಾಲೀಕರು […]

ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು.ರಮೇಶ್ ಕುಮಾರ್ ಅವರ ಹೇಳಿಕೆಗೆ ದೇಶ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿ, ರಮೇಶ್ ಕುಮಾರ್ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು […]

ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು ಪುಂಡಾಟ ಮೆರೆದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಬಿಡುವುದಿಲ್ಲ. ಇದು ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪುಂಡಾಟಿಕೆ ಹತ್ತಿಕ್ಕುವ ಜೊತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ […]

ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಸಂಘರ್ಷ ಮಾಡುವ ಉದ್ದೇಶದಿಂದ, ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆಯಿದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಸುದ್ದಿಗಾರರೊದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? […]

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬಸವರಾಜಬೊಮ್ಮಾಯಿ […]

ಕೋಲಾರ ಜಿಲ್ಲೆಯಲ್ಲಿ ಹಣದ ರಾಜಕಾರಣ ಮಾಡುವ ಮೂಲಕ ರಾಜಕೀಯ ಪಾವಿತ್ರ್ಯತೆಯನನು ಹಾಳು ಮಾಡಿದ್ದೇ ಕೊತ್ತೂರು ಮಂಜುನಾಥ್ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಕಿಡಿಕಾರಿದ್ದಾರೆ.ಅವರು ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಷ್ಟು ದಿನ ಕೊತ್ತೂರು ಮಂಜುನಾಥ್ ಎಲ್ಲಿದ್ರು..? ಈಗ ದಿಢೀರ್ ಅಂತ ಬಂದು ಕೋಲಾರ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಾನೇ ಅಂತ ಹೇಳಿಕೆ ನೀಡಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಕೋಲಾರ ಕ್ಷೇತ್ರದ ಭವಿಷ್ಯ ನೆನೆದು ಆತಂಕ […]

  ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲುತೂರಾಟ ನಡೆಸಲಾಗಿದೆ.ರಾಯಣ್ಣ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿ ಕದಡಿ ಜನರಲ್ಲಿ ಭಯಭೀತಿ ಉಂಟುಮಾಡಲು ಪುಂಡರನ್ನು […]

Advertisement

Wordpress Social Share Plugin powered by Ultimatelysocial