ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳು ಕರ್ನಾಟಕದಲ್ಲಿ ಅಷ್ಟೇನೂ ಪ್ರಬಲವಾಗಿಲ್ಲ. ಅವುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಎಲ್ಲಿದೆ? ರಾಷ್ಟ್ರದ್ರೋಹಿ ಕೆಲಸ ಮಾಡುವ ಎಸ್‍ಡಿಪಿಐನಂತಹ ಸಂಘಟನೆಗಳ ಬಗ್ಗೆ ನಿಷೇಧದ ಮಾತು ಕೇಳಿಬಂದರೆ ಸಮಂಜಸ.ಅಷ್ಟೇನೂ ಪ್ರಬಲವಾಗಿಲ್ಲದ, ಶಕ್ತಿಯೇ ಇಲ್ಲದ ಎಂಇಎಸ್ ಬಗ್ಗೆ ನಾವು ಅನಗತ್ಯವಾಗಿ ಏಕೆ ಮಹತ್ವ ನೀಡಬೇಕು ಎಂದು ಪ್ರಶ್ನಿಸಿದರು. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದಕ್ಕೆ ಸಂಬಂಧಪಟ್ಟಂತೆ ಈಗಾಗಲೇ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್  ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು.ಗೋಹತ್ಯೆ ನಿಷೇಧ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದರು.ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡಾಟ ಹೆಚ್ಚಾಗುತ್ತಿದೆ.ಎಂಇಎಸ್ ಆಟಕ್ಕೆ ಸರ್ಕಾರ ಬ್ರೇಕ್ ಹಾಕಲಿದೆ. ಈಗಾಗಲೇ ಎಂಇಇಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ […]

ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವಂತೆ ರಾಕೇಶ್ ಟಿಕಾಯತ್ ಅವರಿಗೆ ಮನವಿ ಮಾಡಿದ್ದರು.ಆದರೆ, ಆ ಮನವಿಯನ್ನು ಟಿಕಾಯತ್ ತಿರಸ್ಕರಿಸಿದ್ದಾರೆ.ಈ ಸಂಬಂಧ ಉತ್ತರಪ್ರದೇಶದ ಶಾಮ್ಲಿಯಲ್ಲಿ ಮಾತನಾಡಿರುವ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ. ಆದರೆ, ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ […]

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,081 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 264 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಸದ್ಯಕ್ಕೆ ಒಟ್ಟು 83,913 ಸಕ್ರಿಯ ಪ್ರಕರಣಗಳಿವೆ.ಕಳೆದ ಮಾರ್ಚ್​ 2020 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.ಜೊತೆಗೆ ನಿನ್ನೆ 264 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ4,77,422 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ […]

ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.ಅಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತನ್ನ ಬೆಂಬಲವನ್ನು ಮಹಾರಾಷ್ಟ್ರ ಸರ್ಕಾರವು ಪುನರುಚ್ಛರಿಸಿದೆ. ಘಟನೆಯ ನಂತರ ಗಡಿಭಾಗದ ಜಿಲ್ಲೆಗಳಾದ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿವೆ.ಪ್ರತಿಮೆಗೆ ಮಸಿ ಬಳಿದಿರುವುದು ಕನ್ನಡಿಗರ ವಿಕೃತ […]

ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.ಆದ್ರೆ, ಬೇರೆ […]

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ.ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ.ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ […]

ದೇಶ ಭಕ್ತರ ಹೆಸರಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ.ದೇಶಭಕ್ತರಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದೇವೆ. ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ ಎಂದರು.ಏನೇ ಹೇಳುವುದಿದ್ದರೂ ಶಾಂತವಾಗಿ […]

ಬೆಳಗಾವಿ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜುರವರು ಭೂಕಬಳಿಕೆಯ ವಿಚಾರ ಜೋರು ಸದ್ದು ಮಾಡ್ತಿದೆ.. ಸಚಿವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದಾರೆ.. ಆದ್ರೆ ಸಚಿವ ಬೈರತಿ ಬಸವರಾಜು ನ್ಯಾಯಯುತವಾಗಿ ವ್ಯವಹಾರ ನಡೆದಿದೆ ಎನ್ನುತ್ತಿದ್ದಾರೆ..ನಗರರಾಭಿವೃದ್ಧಿ ಸಚಿವ ಬೈರತ ಬಸವರಾಜುಗೆ ಭೂಉರುಳು ಸುತ್ತಿಕೊಂಡಿದೆ.. 18 ವರ್ಷಗಳ ಹಳೇಯ ಕೇಸಿಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೇಸ್ ರಾಜೀನಾಮೆಗೆ ಒತ್ತಾಯಿಸುತ್ತಿದೆ.. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದಕ್ಕೆ ಬುದ್ದಿಕಲಿಸಲು ರಾಜೀನಾಮೆಗೆ ಒತ್ತಾಯಿಸಲಾಗುತ್ತಿದೆ.. ಆದ್ರೆ ಬೈರತಿ ಬಸವರಾಜು ಭೂಹಗರಣದ ಬಗ್ಗೆ ಮಾತನಾಡಿದ್ದು ರಾಮಮೂರ್ತಿನಗರ […]

ಬೀದರ್ : ಬೆಳಗಾವಿ ನಗರದಲ್ಲಿ ಕೆಲ ಪುಂಡರು ಪುಂಡಾಟಿಕೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಮೂರ್ತಿಯನ್ನು ವಿರೂಪಗೊಳಿಸಿದ್ದಾರೆ ಹಾಗೂ ಸರ್ಕಾರಿ ವಾಹನಗಳು ಸೇರಿದಂತೆ ಅನೇಕ ವಾಹನಗಳನ್ನು ಜಖಂಗೊಳಿಸಿದ್ದಾರೆ. ಅಂಥ ಪುಂಡರ ವಿರುದ್ಧ ಮುಖ್ಯಮಂತ್ರಿಗಳು ಕೂಡಲೇ ಕಠಿಣ ಕ್ರಮ ಜರುಗಿಸಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.ಖಾಶೆಂಪುರ್ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ […]

Advertisement

Wordpress Social Share Plugin powered by Ultimatelysocial