ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪುನಾರಂಭಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. ಲಾಕ್ಡೌನ್ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮೇ ಮೂರರವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಮೇ ೩ರ ಬಳಿಕ ವಿಮಾನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಈ ಹಿಂದೆ ಆರಂಭಿಸಲಾಗಿದ್ದ ಟಿಕೆಟ್ ಬುಕ್ಕಿಂಗ್ ಗೆ ಅನುಮತಿ ನೀಡಿಲ್ಲ ಎಂದು ತಿಳಿಸಿತ್ತು. […]

ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾ.೧೬ರಿಂದಲೇ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದು ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಮೇಲೆ ಗಂಭಿರ ಪರಿಣಾಮ ಬೀರಲಿದೆ. ಹೀಗಾಗಿ ಕಾಲೇಜುಗಳಲ್ಲಿ ನೂತನ ಶೈಕ್ಷಣಿಕ ವರ್ಷಾರಂಭವನ್ನು ಜುಲೈ ಮಧ್ಯಾವಧಿಯಲ್ಲಿ ಆರಂಭದ ಬದಲು, ಸೆಪ್ಟಂಬರ್‌ನಲ್ಲಿ ಆರಂಭಿಸಲಿದೆ. ಸರ್ಕಾರ ನೇಮಿಸಿದ ಸಮಿತಿಯೊಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗಕ್ಕೆ (ಯುಜಿಸಿ) ಶಿಫಾರಸು ಮಾಡಿದೆ. ಕಾಲೇಜುಗಳನ್ನು ಮುಚ್ಚಿದ್ದರಿಂದ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗಿಲ್ಲ. ಆ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸುವಂತೆ ಸಮಿತಿ ಸಲಹೆ […]

ನವದೆಹಲಿ: ಡೆಡ್ಲಿ ಕೊರೊನಾ ವೈದ್ಯರನ್ನು ಸಹ ಬಿಟ್ಟಿಲ್ಲ. ಬಾಬುಜಗಜೀವನರಾಮ್ ಆಸ್ಪತ್ರೆಯ ೧೧ ವೈದ್ಯರು ಸೇರಿ ೩೧ ಸಿಬ್ಬಂದಿಗೆ ಕೋವಿಡ್-೧೯ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ. ಎಲ್‌ಎನ್‌ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಕಳೆದ ಕೆಲವು ದಿನಗಳ ಅವಧಿಯಲ್ಲಿ ಒಟ್ಟು ೩೫೦ ಸಿಬ್ಬಂದಿಯನ್ನು ಈ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಪೈಕಿ ೩೧ ಜನರ ವರದಿ […]

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗಿದೆ.  ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ  24,506ಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1429 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ.  ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ […]

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ಉದ್ದೇಶದಿಂದ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ಏಪ್ರಿಲ್ ೨೬ರ ಬೆಳಗ್ಗೆ ೬ ಗಂಟೆಯಿಂದ ಏಪ್ರಿಲ್ ೨೯ ರ ರಾತ್ರಿ ೯ ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದೆ. […]

ನವದೆಹಲಿ: ಮೀಸಲಾತಿಯ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅಗತ್ಯವಿರುವವರಿಗೆ ಮಾತ್ರ ಮೀಸಲಾತಿಯ ಅನುಕೂಲಗಳು ದೊರೆಯುವಂತೆ ಮಾಡಬೇಕು. ಮೀಸಲಾತಿ ಪಟ್ಟಿಯನ್ನು ಪರೀಕ್ಷಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಆದೇಶ ನೀಡಿದೆ. ಮೀಸಲಾತಿಯ ಫಲಾನುಭವಿಗಳಾಗಲು ಪರಿಶಿಷ್ಟಜಾತಿ ಮತ್ತು ಪಂಗಡಗಳಲ್ಲಿ ಹಲವು ತೊಡಕುಗಳಿವೆ. ಇದಲ್ಲದೇ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ವರ್ಗಗಳಿವೆ. ಆದರೆ ಈ ಜಾತಿ ಮತ್ತು […]

ನವದೆಹಲಿ: ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಹಿನ್ನೆಲೆ, ವಿವಿಧ ಗ್ರಾಮ ಪಂಚಾಯ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಅಂತಾ ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಅಲ್ಲದೇ ಈ ಸಂದರ್ಭದಲ್ಲಿ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಮೋದಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇಂದು ದೇಶದ ವಿವಿಧ ಗ್ರಾಮ ಪಂಚಾಯ್ತಿಗಳನ್ನು […]

ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಸಾಕಷ್ಟು ಹಣದ ಅವಶ್ಯಕತೆ ಇದೆ. ಖಾಸಗಿಯವರ ಆರ್ಥಿಕ ನೆರವಿನ ಹೊರತಾಗಿ ಕೇಂದ್ರದ ಎಲ್ಲಾ ಸಚಿವರು ಹಾಗೂ ಸಂಸದರ ವೇತನದಲ್ಲಿ ಶೇಕಡಾ ೩೦ರಷ್ಟು ಕಡಿತ ಮಾಡಲಾಗಿದೆ. ಇದೀಗ ಕೇಂದ್ರ ಸರ್ಕಾರಿ ನೌಕರರ ಡಿಎ ಹಾಗೂ ಪಿಂಚಣಿದಾರರ ಡಿಆರ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಭತ್ಯೆಗಳನ್ನು ೨೦೨೦ರ ಜನವರಿ ಒಂದರಿಂದ ೨೦೨೧ರ ಜುಲೈ ೦೧ ರವರೆಗೆ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ತಿಳಿಸಿದೆ. ಕಳೆದ ಮಾರ್ಚ್ನಲ್ಲಿ […]

ನವದೆಹಲಿ : ಇಂದು ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಹಿನ್ನೆಲೆಯಲ್ಲಿ ಇ-ಗ್ರಾಮ್ ಸ್ವರಾಜ್ ಮೊಬೈಲ್ ಆಯಪ್ ನ್ನು ಬಿಡುಗಡೆಗೊಳಿಸಿದರು.ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಗ್ರಾಮ ಪಂಚಾಯತ್ ಗಳ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಿದರು. ಇದೇ ವೇಳೆ, ಗ್ರಾಮಗಳ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿದ್ದಪಡಿಸಿರುವ ಇ-ಗ್ರಾಮ್ ಸ್ವರಾಜ್ ಮೊಬೈಲ್ ಆಯಪ್ ಹಾಗೂ ಸ್ವಮಿತ್ವ ಯೋಜನೆಗಳಿಗೆ ಚಾಲನೆ […]

ಮುಂಬೈ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಜನತೆ ಆತಂಕಗೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೨೩ ಸಾವಿರ ಗಡಿದಾಟಿದೆ. ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಭೀತಿ ಎದುರಾಗಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಇನ್ನು ೧೪ ಮಂದಿ ಕಿಲ್ಲರ್ […]

Advertisement

Wordpress Social Share Plugin powered by Ultimatelysocial