ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ  ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್​ ಸೇರಲು ಮುಂದಾಗಿದ್ದಾರೆ ಎಂದು ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್​ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]

ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ […]

ರಾಜ್ಯದ ಪ್ರಬಲ ಬಿಜೆಪಿ ನಾಯಕ ಬಿ.ಎಸ್​. ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿದ್ದರೂ ಸಹ ಅವರು ಪೂರ್ಣ ಅವಧಿಗೆ ಅಧಿಕಾರವನ್ನು ನಿರ್ವಹಿಸಿರಲಿಲ್ಲ. ವಯಸ್ಸಿನ ಕಾರಣಕ್ಕೆ ಇದೀಗ ಅವರನ್ನು ಅಧಿಕಾರದಿಂದ ಇಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಏರಿಸಲಾಗಿದೆ. ಇದು ಸಾಮಾನ್ಯವಾಗಿ ಯಡಿಯೂರಪ್ಪ ಅವರಿಗೂ ಸಹ ಅಸಮಾಧಾನಕ್ಕೆ ಕಾರಣವಾಗಿರುವುದು ಸುಳ್ಳಲ್ಲ. ಆದರೆ, ಕಾಂಗ್ರೆಸ್ ನಾಯಕರು​ ಕಳೆದ ಎರಡು ತಿಂಗಳಿನಿಂದ ಬಿ.ಎಸ್​. ಯಡಿಯೂರಪ್ಪ ಅವರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಾತನಾಡುತ್ತಿದ್ದಾರೆ. […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ […]

ಬೆಂಗಳೂರು: ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ […]

ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು , ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದ್ದಾರೆ.  ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ […]

ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ ನೀಡಿದ್ದು, ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಇಂದಿನಿಂದ ಆರಂಭವಾಗಿದೆ. ಮನಗೂಳಿ ಅವರನ್ನು ಭಗವಂತ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ನಾವೆಲ್ಲ ಸೇರಿ ಮನಗೂಳಿ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ. ಮನಗೂಳಿ ಅವರು […]

ಬೆಳಗಾವಿ: ತೈಲ ಬೆಲೆ ಏರಿಕೆ, ಅಡಿಗೆ ಅನಿಲ ಬೆಲೆ ಹೆಚ್ಚಳದ ಬಗ್ಗೆ  ಬೆಳಗಾವಿ ಗ್ರಾಮೀಣ ಶಾಸಕಿ ಮತ್ತು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಟಾಳಕರ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬಿಜೆಪಿ ದುಬಾರಿ ದರ್ಬಾರ್‌ ಎಂದು ಟ್ವೀಟರ್‌ ಮೂಲಕ ಟೀಕೆ ಮಾಡಿದ್ದಾರೆ. ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಹೆಬ್ಟಾಳಕರ ಹತ್ತು ಲಕ್ಷ ರೂ.ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್‌ ಸಬ್ಸಿಡಿ […]

Advertisement

Wordpress Social Share Plugin powered by Ultimatelysocial