ಇಟಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಅಲ್ಲಿನ ಸರ್ಕಾರ ಹರ ಸಾಹಸಪಟ್ಟಿತು. ಮಾ.13ರಂದು ತಿರುವನಂತಪುರದ ಕೇರಳಕ್ಕೆ ಭೇಟಿ ಕೊಟ್ಟಿದ್ದರು. ಆಗ ಅವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ, ಟೋನಿಜ್  ಈಗ ಕೊರೊನಾ  ಸೋಂಕಿನಿಂದ  ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.  ಅವರನ್ನು ಸೋಮವಾರ ಆಸ್ಪತ್ರೆಯ ಸಿಬ್ಬಂದಿ ಮತ್ತು ಕೇರಳ ಸರ್ಕಾರ ಸನ್ಮಾನ ಮಾಡಿ ಬೀಳ್ಕೊಟ್ಟಿದೆ. ಅವರು ಬೆಂಗಳೂರಿಗೆ ತೆರಳಲು ಕೇರಳ ಸರ್ಕಾರವೇ ಸಹಾಯ ಮಾಡಿದೆ.

ಬೆಂಗಳೂರು.ಏ.೨೦: ಬಿಬಿಎಂಪಿಯ ತೆರಿಗೆ ಮತ್ತು ರ‍್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ೨೦೨೦-೨೧ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ ಸರ್ವ ಶಿಕ್ಷಣ, ಶುದ್ಧ ಕುಡಿಯುವ ನೀರು, ಪರಿಸರ ಸಂರಕ್ಷಣೆ ಹಾಗೂ ಮೂಲಸೌಕರ್ಯಕ್ಕೆ ಅದ್ಯತೆ. ಪ್ರತಿ ಗೃಹೋಪಯೋಗಿ ಕೆಲಸಗಳಿಗೆ ತಿಂಗಳಿಗೆ ೧೦ ಸಾವಿರ ಲೀಟರ್ ನೀರು ಪೂರೈಕೆ. ಇದಕ್ಕಾಗಿ ಬಜೆಟ್‌ನಲ್ಲಿ ₹43 ಕೋಟಿ ಕಾಯ್ದಿರಿಸಲಾಗಿದೆ.

ಬೆಂಗಳೂರು.ಏ.20:  ಕೆಳ ರ‍್ಯಾಂಕಿಂಗ್ ಆಟಗಾರರಿಗೆ ನೆರವು ನೀಡಲು ಸ್ಟಾರ್ ಆಟಗಾರರಾದ ರೋಜರ್ ಫೆಡರರ್, ರಾಫೆಲ್ ನಡಾಲ್, ನೊವಾಕ್ ಜೊಕೊವಿಕ್ ಮುಂದೆ ಬಂದಿದ್ದಾರೆ. ಪುರುಷರ ಟೆನಿಸ್ ಆಡಳಿತ ಸಂಸ್ಥೆ ಎಟಿಪಿ ಸ್ಲಾಂ ಟೆನಿಸ್ ಸಂಘಟಕರ ಜತೆಗೂಡಿ ದತ್ತಿನಿಧಿಯೊಂದನ್ನು ಆರಂಭಿಸಲು ಯೋಜನೆ ನಿರೂಪಿಸಿದ್ದಾರೆ.      

ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ರ‍್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಗುಂಪು ಗುಂಪಾಗಿ ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಪಾದರಾಯನಪುರವನ್ನು ಸಂಪರ‍್ಣ ಸೀಲ್ ಡೌನ್ ಮಾಡಲಾಗಿದ್ದು, ರಸ್ತೆ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಆ ವೇಳೆ ಕೊರೊನಾ ಸೋಂಕಿತ ೫೯ ಮಂದಿಯನ್ನು ಬೇರೆಡೆ ಸ್ಥಳಾಂತರಿಸಲು ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳು ಮುಂದಾದಾಗ ಆ ವೇಳೆ ಪುಂಡರು ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಹಾಕಿದ ಚೆಕ್ ಪೋಸ್ಟ್, […]

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನತೆ ತಲ್ಲಣಗೊಂಡಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಮತ್ತಷ್ಟು ಆತಂಕ ತಂದೊಡ್ಡಿದೆ. ರಾಜ್ಯದಲ್ಲಿ ಇಂದು ಮತ್ತೆ ಐವರಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ […]

ಬೆಂಗಳೂರು, ನಗರದ ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೋನ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ […]

ಬೆಂಗಳೂರು.ಏ.20: ನಿನ್ನೆ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಪಟ್ಟ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಮುಖಂಡರ ಜೊತೆಗೆ ಡಿಕೆ ಶಿವಕುಮಾರ್ ಘಟನೆಯ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ  ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖಂಡರು, ನಾಯಕರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಎನ್ ಎ ಹ್ಯಾರಿಸ್, ಜಮಿರ್ ಅಹಮದ್ ಖಾನ್, […]

ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ.‌ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ೫೪ ಜನರನ್ನು ಇದುವರೆಗೆ ಬಂಧಿಸಲಾಗಿದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಲೂರಿನಲ್ಲಿ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ‌ಕ್ರಮ‌ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ.‌ ಶೀಘ್ರದಲ್ಲೇ ‌ಮತ್ತಷ್ಡು ಕಿಡಿಗೇಡಿಗಳನ್ನು ಬಂಧಿಸಲಾಗುವುದು.ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. […]

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ 59 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಘಟನೆ ನಡೆದ ಮೂರು -ನಾಲ್ಕು ಗಂಟೆಯೊಳೆಗೆ ಎಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು ಈಗಾಗಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಬಿಬಿಎಂಪಿ ಸಿಬ್ಬಂದಿಯ ಮೇಲೆ ಕೆಲವರು ಹಲ್ಲೆ ಮಾಡಿದ್ದು, ವಿಚಾರಣೆ ನಡೆಸಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ […]

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಿಗೆ ಇಂದು ಭಾನುವಾರ ಅಚ್ಚರಿ ಕಾದಿತ್ತು. ಪ್ರಯಾಣಿಕರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದವರಿಗೆ ನಿಜಕ್ಕೂ ಪರಮಾಶ್ಚರ್ಯ. ಇಂದು ಐಶ್ವರ್ಯಾ ರೈ ಬಚ್ಚನ್ ಹಾಗೂ ಪತಿ ಅಭಿಷೇಕ್ ಬಚ್ಚನ್ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರು ಮೂಲದವರಾಗಿರುವ ಐಶ್ವರ್ಯಾ ರೈ ತನ್ನ ಚಿಕ್ಕಪ್ಪನ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದಾರೆ.

Advertisement

Wordpress Social Share Plugin powered by Ultimatelysocial