ಹಾಸನ, ಮಾರ್ಚ್‌, 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಚ್‌ 1 ಎನ್‌ 1 ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಎಚ್‌3 ಎನ್‌2 ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ. ಈ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲಿ H3N2ಗೆ ಮೊದಲ ಬಲಿ ಆಗಿರುವ ಪ್ರಕರಣ ದಾಖಲಾಗಿದೆ. ಈ ಸೋಂಕಿನಿಂದ ಹಾಸನ ಜಿಲ್ಲೆಯ ಆಲೂರಿನಲ್ಲಿ 78 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾರ್ಚ್ 1 ರಂದು ಇವರು ಮೃತಪಟ್ಟಿದ್ದು, […]

ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಹಾರದ 15 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳ ಶೋಧ ನಡೆಸುತ್ತಿದ್ದಾರೆ. ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಉಡುಗೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇತ್ತೀಚೆಗಷ್ಟೇ ಬಿಹಾರ ಮಾಜಿ ಸಿಎಂ ರಾಬ್ದಿ ದೇವಿ ಹಾಗೂ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಅವರನ್ನು ವಿಚಾರಣೆ ನಡೆಸಿದ್ದರು. ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್ ಆಧರಿಸಿ ಇಡಿ ಅಧಿಕಾರಿಗಳು ಇಂದು 15 ಸ್ಥಳಗಳಲ್ಲಿ […]

ಬೆಂಗಳೂರು, ಮಾರ್ಚ್ 10: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ 1,000 ಕೋಟಿ ರೂ.ಗೂ ಅಧಿಕ ಮೌಲ್ಯದ 25 ಎಕರೆ ಭೂಮಿಯನ್ನು ಒತ್ತುವರಿ ಮಾಡಲಾಗಿದೆ. ಇವುಗಳನ್ನು ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿ ಭೂಗಳ್ಳರು ಹಾಗೂ ಸರ್ಕಾರಿ ಅಧಿಕಾರಿಗಳು ಮಾರಾಟ ಮಾಡಿದ್ದಾರೆ ಎಂದು ಚಿತ್ರ ನಿರ್ಮಾಪಕ ಬೊಮ್ಮನಹಳ್ಳಿ ಟಿಕೆಟ್ ಆಕಾಂಕ್ಷಿ ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದ್ದಾರೆ. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಉಮಾಪತಿ ಗೌಡ, ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಮತ್ತು […]

ಹುಬ್ಬಳ್ಳಿ, ಮಾರ್ಚ್‌, 10: ಪ್ರತಿ ಬಾರಿ ಪ್ರಧಾನಿ ನರೇಂದ್ರ ಮೋದಿ ಬಂದಾಗ ರಾಜ್ಯದ ಮೂಲಭೂತ ಸೌಕರ್ಯಗಳಿಗೆ ಹಣ ಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಿಗೂ ಅತೀ ಹೆಚ್ಚು ಹಣ ಕೊಟ್ಟಿದ್ದಾರೆ. ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಅತೀ ಹೆಚ್ಚು ಹಣ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ. ರೈಲ್ವೆ, ಬಂದರು ಇತ್ಯಾದಿಗೆ ಹಣ ಕೊಟ್ಟಿದ್ದಾರೆ. ಹೀಗಾಗಿ ಮೋದಿ ರಾಜ್ಯಕ್ಕೆ ಬಂದಾಗಲೆಲ್ಲಾ ಭೂಮಿ ಪೂಜೆ ಅಥವಾ ಲೋಕಾರ್ಪಣೆ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ […]

ದೇಶದಲ್ಲಿ ಆತಂಕವನ್ನು ಸೃಷ್ಟಿ ಮಾಡಿದ ಎಚ್3ಎನ್2 ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಶುಕ್ರವಾರ ತಿಳಿಸಿವೆ. ಹರಿಯಾಣದಲ್ಲಿ ಓರ್ವ ವ್ಯಕ್ತಿ ಮೃತಪಟ್ಟರೆ, ಮತ್ತೊಬ್ಬರು ಕರ್ನಾಟಕದಲ್ಲಿ ಎಚ್3ಎನ್2ನಿಂದಾಗಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ ಸುಮಾರು 90 ಎಚ್3ಎನ್2 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಎಚ್1ಎನ್1 ವೈರಸ್ನ ಎಂಟು ಪ್ರಕರಣಗಳು ವರದಿಯಾಗಿವೆ. ಗಮನಾರ್ಹವಾಗಿ ಕಳೆದ ಹಲವಾರು ದಿನಗಳಿಂದ ದೇಶದಲ್ಲಿ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಹೆಚ್ಚಿನ ಸೋಂಕುಗಳು ಎಚ್3ಎನ್2 (H3N2) ವೈರಸ್‌ನಿಂದ ಉಂಟಾಗುತ್ತವೆ. […]

ನವದೆಹಲಿ, ಮಾರ್ಚ್‌ 10: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ನವದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ)ನಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳ 15 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿರುವ […]

ನವದೆಹಲಿ,ಮಾ.10-ದೇಶದಲ್ಲಿ ಉತ್ತರಾಖಂಡದ ರುದ್ರಪ್ರಯಾಗ ಮತ್ತು ತೆಹ್ರಿ ಗರ್ವಾಲ್ ಜಿಲ್ಲೆಗಳು ಅತಿ ಹೆಚ್ಚು ಭೂ ಕುಸಿತದ ಸಾಂದ್ರತೆ ಹೊಂದಿರುವ ಪ್ರದೇಶಗಳಾಗಿವೆ ಎಂದು ಇಸ್ರೋ ಉಪಗ್ರಹ ಮಾಹಿತಿಯಿಂದ ತಿಳಿದುಬಂದಿದೆ. ಹೈದರಾಬಾದ್ ಮೂಲದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್‍ನ ವಿಜ್ಞಾನಿಗಳ ತಂಡ ಮಾಡಿದ ಇತ್ತೀಚಿನ ಅಪಾಯದ ಮೌಲ್ಯಮಾಪನದಿಂದ ಈ ಈ ಅಂಶ ಪತ್ತೆಯಾಗಿದೆ. ದೇಶದ 17 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 147 ಅತಿ ಹೆಚ್ಚು ಭೂಕುಸಿತ-ದುರ್ಬಲ ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, […]

ನವದೆಹಲಿ: ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ, ಆ ಮೂಲಕ ಭೂಮಿಯ ಒಂದು ಸಣ್ಣ ಭಾಗದಿಂದ ಸೂರ್ಯನ ನೋಟವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಮರೆಮಾಡುತ್ತದೆ ಸೂರ್ಯಗ್ರಹಣ ಸಂಭವಿಸುತ್ತದೆ. ಒಟ್ಟು, ಭಾಗಶಃ, ಹೈಬ್ರಿಡ್ ಅಥವಾ ವಾರ್ಷಿಕ ಸೂರ್ಯಗ್ರಹಣ ಇರಬಹುದು. ಏತನ್ಮಧ್ಯೆ, ಚಂದ್ರನು ಭೂಮಿಯ ನೆರಳಿನಲ್ಲಿ ಚಲಿಸಿದಾಗ, ಚಂದ್ರನು ಕತ್ತಲೆಯಾಗಲು ಕಾರಣವಾಗುತ್ತದೆ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರಗ್ರಹಣದ ಸಮಯದಲ್ಲಿ, ಪ್ರಕಾರವನ್ನು ಅವಲಂಬಿಸಿ, ಚಂದ್ರನು ಕೆಂಪು, ಕಿತ್ತಳೆ, ಕಂದು ಅಥವಾ ಸಂಪೂರ್ಣ ಗ್ರಹಣಕ್ಕೆ ಸಂಪೂರ್ಣವಾಗಿ […]

ಕೇಂದ್ರ ಸರ್ಕಾರ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಮತ್ತೊಂದು ಅಧ್ಯಾಯ ಸೇರಿಸಿದ್ದಾರೆ ನಾಗಾಲ್ಯಾಂಡ್‌ ಬಿಜೆಪಿ ನಾಯಕ ತೆಮ್ಜೆನ್ ಇಮ್ನಾ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಬ್ರಿಟನ್‌ಗೆ ಭೇಟಿ ಕೊಟ್ಟಿದ್ದ ವಿಚಾರವಾಗಿ ಇಮ್ನಾ ವಾಗ್ದಾಳಿ ನಡೆಸಿದ್ದಾರೆ. ಲಂಡನ್‌ನ ಚಾಟ್ಹಾಮ್ ಹೌಸ್ ಎದುರು ರಾಹುಲ್ ನಿಂತಿರುವ ಫೋಟೋವೊಂದನ್ನು ಕಾಂಗ್ರೆಸ್ ಪೋಸ್ಟ್ ಮಾಡಿದೆ. “ನೀವೇನು ನಂಬಿದ್ದೀರೋ ಅದಕ್ಕೆ ಬದ್ಧರಾಗಿರಿ, ಈ ವಿಚಾರದಲ್ಲಿ ನೀವು ಏಕಾಂಗಿಯಾದರೂ ಪರವಾಗಿಲ್ಲ,” ಎಂದು ಕಾಂಗ್ರೆಸ್ ಕ್ಯಾಪ್ಷನ್ ಕೊಟ್ಟಿದೆ. ಈ […]

92 ಗಂಟೆಗಳ ಪ್ರಯತ್ನ ವ್ಯರ್ಥವಾಗಿ ಕರುಳಿನ ಸಂಪರ್ಕ ಕಡಿತಗೊಂಡಿದೆ. ನಾಲ್ಕು ಹುಲಿ ಮರಿಗಳು ತಮ್ಮ ತಾಯಿಯನ್ನು ಶಾಶ್ವತವಾಗಿ ಕಳೆದುಕೊಂಡಿವೆ. ನಂದ್ಯಾಲ ಜಿಲ್ಲೆಯ ಪೆದ್ದಗುಮ್ಮದಾಪುರದಲ್ಲಿ ಆಪರೇಷನ್ ಮದರ್ ಟೈಗರ್ ಅಂತ್ಯಗೊಂಡಿದೆ. ಅರಣ್ಯಾಧಿಕಾರಿಗಳು ಎಷ್ಟೇ ಪ್ರಯತ್ನ ಪಟ್ಟರೂ ಟಿ-108 ಹುಲಿ ಪತ್ತೆಯಾಗಿಲ್ಲ. ಇದರೊಂದಿಗೆ 4 ಹುಲಿ ಮರಿಗಳನ್ನು ತಿರುಪತಿ ಮೃಗಾಲಯಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧವಾಗಿದ್ದಾರೆ. ಇಂದು ತಡರಾತ್ರಿ ತಿರುಪತಿ ಶ್ರೀ ವೆಂಕಟೇಶ್ವರ ಮೃಗಾಲಯಕ್ಕೆ ಸ್ಥಳಾಂತರಿಸಲಾಗುವುದು. 4 ದಿನಗಳ ಕಾಲ ಹುಡುಕಾಟ ನಡೆಸಿದರೂ ತಾಯಿ […]

Advertisement

Wordpress Social Share Plugin powered by Ultimatelysocial