ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ […]

ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ […]

ಆರ್‌ಎಸ್‌ಎಸ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ. ಹೀಗಾಗಿ ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ ಎಸ್‌ ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆಯ ಉದ್ದೇಶ ಹೊಂದಿದೆ ಎಂದರು. ದೇವೆಗೌಡರು ಪ್ರಧಾನಿ ಆಗಿದ್ದಾಗ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ರಾಜ್ಯದ ಕಲ್ಲಿದ್ದಲು ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.  ಬಳಿಕ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಸಚಿವರಾದ ಬೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.  ಸಚಿವರಾದ ಡಾ. ಕೆ. ಸುಧಾಕರ್ , ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ […]

ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ  ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌ ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ನಡೆದ ಇಂಡಿಯಾ ಟು ಡೇ ಕಾನ್ಕಲೇವ್ ನಲ್ಲಿ  ಮಾತನಾಡಿದ  ಸಿಎಂ ಬೊಮ್ಮಾಯಿ ಅವರು  ಉತ್ತರ ಕರ್ನಾಟಕ ಭಾಗದಿಂದ ಹಲವಾರು […]

ನಾನು ಆರ್.ಎಸ್.ಎಸ್. ನ ಯಾವುದೇ ಬೈಟಕ್ ಕೂತಿಲ್ಲ, ಸಂಘ ಪರಿವಾರವನ್ನು ಹೊಗಳಿಯೂ ಇಲ್ಲ. ಯಾರ್ಯಾರು ಏನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಆರ್.ಎಸ್.ಎಸ್. ನ್ನು ಸ್ವತಃ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರೇ ಹೊಗಳಿದ್ದರು. ಆರ್.ಎಸ್.ಎಸ್. ಬಗ್ಗೆ ಆರೋಪ ಮಾಡುವ ಮೊದಲು ಕುಮಾರಸ್ವಾಮಿಯವರು ದೇವೇಗೌಡರನ್ನು ಕೇಳಿ ತಿಳಿದುಕೊಳ್ಳಬಹುದಿತ್ತು ಎಂದು ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ದೇವೇಗೌಡರು, ನನಗೂ […]

  ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ. ಬಿಜೆಪಿ ನಾಯಕರ ಕಾರು ನಿಮ್ಮ ಅಕ್ಕ ಪಕ್ಕದಲ್ಲಿ ಹೋಗುವಾಗ ಮೊಬೈಲ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರೊಬ್ಬರ […]

 ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸಿಂಧಗಿ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಈಶ್ವರಪ್ಪ ಸಚಿವ  ಕೆ ಸ್‌ ಈಶ್ವರಪ್ಪ  ಈವರೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಾನು ಸಿಎಂ ನಾನು ಸಿಎಂ ಎನ್ನುತ್ತಿದ್ದರು. ಒಬ್ಬರು ಎಡಕ್ಕೆ ಎಳೆದರೆ, ಇನ್ನೊಬ್ಬರು ಬಲಕ್ಕೆ ಎಳೆಯುತ್ತಾರೆ. ಇದೀಗ ಅನಿವಾರ್ಯವಾಗಿ ಒಂದಾಗಿದ್ದಾರೆ ಎಂದು ವ್ಯಂಗ್ಯ […]

ಶಿವಮೊಗ್ಗ: ಆಪ್ತ ಸಹಾಯಕನಾಗಿದ್ದ ಉಮೇಶ್ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ನವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಪ್ಪು ಯಾರೇ ಮಾಡಿದ್ದರೂ ಐಟಿ ಅಧಿಕಾರಿಗಳು ಯಾರನ್ನೂ ಬಿಡಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ. ಉಮೇಶ್ ನಾನು ಸಿಎಂ ಆಗಿದ್ದಾಗಲೂ ಆಪ್ತ ಸಹಾಯಕನಾಗಿ […]

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರ್‌ ಎಸ್‌ ಎಸ್‌ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‌ ಎಸ್‌ ಎಸ್‌ ಗೆ ಸೇರಿದವರು. […]

Advertisement

Wordpress Social Share Plugin powered by Ultimatelysocial