ಬೆಂಗಳೂರು : ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಅನುಭವ, ಸಲಹೆ ಹಾಗೂ ಮಾರ್ಗದರ್ಶನದ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸೆಂಚುರಿ ಕ್ಲಬ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ ನನ್ನದೇ ಜವಾಬ್ದಾರಿಗಳಿವೆ. ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಕಟ್ಟಬೇಕು. ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ […]

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಹಳ್ಳಿ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಇಂದು ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಹಸುವಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ , ಶಾಸಕ ಸುರೇಶ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು. ಸಚಿವ ಕೆ. ಗೋಪಾಲಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.  

  ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು  ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು […]

ಈ ಹಿಂದೆನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಪಕ್ಷ ಕೆಲವೆಡೆ ಮೇಲುಗೈ ಸಾಧಿಸಿದೆ. ಅದೇ ವೇಗದಲ್ಲಿಯೇ ಮುಂಬರುವ ಉಪ ಚುನಾವಣೆಯಲ್ಲಿ ಕೂಡ  ಗೆಲುವನ್ನು ಸಾಧಿಸಲು ಪಣ ತೊಟ್ಟು ನಿಂತಿದೆ….ಹೌದು ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಂಭವನಿಯ ಅಭ್ಯರ್ಥಿಗಳ ಬಗ್ಗೆ ಕುರಿತು ಇಂದು ಸಭೆ ನಡೆಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ರು ….. ಇಂದು ನಡೆಯಲಿರುವ ಪಕ್ಷದ ರಾಜ್ಯ ಪ್ರಮುಕರ ಸಮಿತಿ ಸಭಯಲ್ಲಿ ಚರ್ಚಿಸಿ  ವರಿಷ್ಠರಿಗೆ  ಶಿಫಾರಸ್ಸು  ಕಳುಹಿಸಲಾಗುವುದು […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

Advertisement

Wordpress Social Share Plugin powered by Ultimatelysocial