ಬೆಂಗಳೂರು: ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್‌ ಭೇಟಿ ನೀಡಿದರು. ಎಚ್‌ಎಸ್‌ಆರ್‌ ಬಡಾವಣೆಯ ಅಗರ ಕೆರೆ ಆಸುಪಾಸಿನಲ್ಲಿ ಮನೆಗಳಿಗೆ ನೀರು ನುಗ್ಗಿರುವ ತಗ್ಗುಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಗರದಲ್ಲಿ ಕೆಲವು ಕಡೆ ಪ್ರವಾಹ ಬಂದು ಜನವಸತಿಗಳಿಗೆಲ್ಲ ಸಾಕಷ್ಟು ತೊಂದರೆ ಆಗಿದೆ. ಅತಿ ಹೆಚ್ಚು ಮಳೆಯಾದ […]

ಮಂಗಳೂರು ಅಕ್ಟೋಬರ್ 13:ಇಂದು ಕರಾವಳಿ ಪ್ರವಾಸ ಮಾಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಜೆ ಕುದ್ರೋಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ. ಇನ್ನು […]

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ […]

ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ  ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್​ ಸೇರಲು ಮುಂದಾಗಿದ್ದಾರೆ ಎಂದು ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್​ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]

ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಂದಗಿ–ಹಾನಗಲ್​ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವಣೆಗೆರೆ ಜಿಎಂಐಟಿಯಲ್ಲಿ ಸಚಿವರಾದ ಬಿ.ಸಿ. ಪಾಟೀಲ, ಸುನೀಲ್​ ಕುಮಾರ್​ ಸೇರಿದಂತೆ ಪ್ರಮುಖ ಮುಖಂಡರ ಜೊತೆಗೆ ಗುಪ್ತ ಸಭೆ ನಡೆಸಿದ್ದಾರೆ. ಸೋಮವಾರ ರಾತ್ರಿ ದಾವಣಗೆರೆಗೆ ಹೋಗಿದ್ದ ಸಿಎಂ ಬೊಮ್ಮಾಯಿ, ಗುಪ್ತ ಸಭೆ ನಡೆಸಿದ್ದು, ಇಂದು ಹಾವೇರಿ ಜಿಲ್ಲೆಯ ಇನ್ನೂ ಕೆಲವು ನಾಯಕರೊಂದಿಗೆ ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಚುನಾವಣೆ ನಿರ್ವಹಣೆಗೆ ಪ್ರತ್ಯೇಕ ಸಮಿತಿಯನ್ನ ಬೊಮ್ಮಾಯಿ ರಚಿಸಲಿದ್ದಾರೆ ಎಂದು ಬಿಜೆಪಿಯ ಪ್ರಮುಖರು […]

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸಿರುವುದು ಅಕ್ಷಮ್ಯ ಎಂದಿದ್ದಾರೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ […]

ರಾಜ್ಯದ ಪ್ರಬಲ ಬಿಜೆಪಿ ನಾಯಕ ಬಿ.ಎಸ್​. ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿದ್ದರೂ ಸಹ ಅವರು ಪೂರ್ಣ ಅವಧಿಗೆ ಅಧಿಕಾರವನ್ನು ನಿರ್ವಹಿಸಿರಲಿಲ್ಲ. ವಯಸ್ಸಿನ ಕಾರಣಕ್ಕೆ ಇದೀಗ ಅವರನ್ನು ಅಧಿಕಾರದಿಂದ ಇಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಏರಿಸಲಾಗಿದೆ. ಇದು ಸಾಮಾನ್ಯವಾಗಿ ಯಡಿಯೂರಪ್ಪ ಅವರಿಗೂ ಸಹ ಅಸಮಾಧಾನಕ್ಕೆ ಕಾರಣವಾಗಿರುವುದು ಸುಳ್ಳಲ್ಲ. ಆದರೆ, ಕಾಂಗ್ರೆಸ್ ನಾಯಕರು​ ಕಳೆದ ಎರಡು ತಿಂಗಳಿನಿಂದ ಬಿ.ಎಸ್​. ಯಡಿಯೂರಪ್ಪ ಅವರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಾತನಾಡುತ್ತಿದ್ದಾರೆ. […]

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

ಕಡುಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕೆಲಸ ಕರ್ನಾಟಕ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿಂದು ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನಗಳ ಸಂಸ್ಥೆ ಮತ್ತು ಅಂಗಾಂಗ ಕಸಿ ಮಾಡುವ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಉಚಿತವಾಗಿ ಅಂಗಾಂಗ ಕಸಿ ಚಿಕಿತ್ಸೆ ನೀಡುವ ಮೂಲಕ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮುಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಡವರಿಗೆ ಅಂಗಾಂಗ ಕಸಿ ಮಾಡಿಸಿಕೊಳ್ಳುವುದು ಕಷ್ಟ. […]

Advertisement

Wordpress Social Share Plugin powered by Ultimatelysocial