ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು ಪುಂಡಾಟ ಮೆರೆದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಬಿಡುವುದಿಲ್ಲ. ಇದು ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪುಂಡಾಟಿಕೆ ಹತ್ತಿಕ್ಕುವ ಜೊತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ […]

ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಸಂಘರ್ಷ ಮಾಡುವ ಉದ್ದೇಶದಿಂದ, ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆಯಿದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಸುದ್ದಿಗಾರರೊದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? […]

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]

ಕೋಲಾರ ಜಿಲ್ಲೆಯಲ್ಲಿ ಹಣದ ರಾಜಕಾರಣ ಮಾಡುವ ಮೂಲಕ ರಾಜಕೀಯ ಪಾವಿತ್ರ್ಯತೆಯನನು ಹಾಳು ಮಾಡಿದ್ದೇ ಕೊತ್ತೂರು ಮಂಜುನಾಥ್ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಕಿಡಿಕಾರಿದ್ದಾರೆ.ಅವರು ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಷ್ಟು ದಿನ ಕೊತ್ತೂರು ಮಂಜುನಾಥ್ ಎಲ್ಲಿದ್ರು..? ಈಗ ದಿಢೀರ್ ಅಂತ ಬಂದು ಕೋಲಾರ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಾನೇ ಅಂತ ಹೇಳಿಕೆ ನೀಡಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಕೋಲಾರ ಕ್ಷೇತ್ರದ ಭವಿಷ್ಯ ನೆನೆದು ಆತಂಕ […]

ಗಂಗಾ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು, ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ಮಧ್ಯಾಹ್ನ 1 ಗಂಟೆಗೆ, ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಲು ಶಹಜಹಾನ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ.ಈ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುವ ಪ್ರಮುಖ ಮೂಲ ಯೋಜನೆಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.ಉತ್ತರ […]

ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯವಾಗಿದೆ. ಈ ಕ್ರಮವನ್ನು ಸರ್ಕಾರ ಎಂದೂ ಮನ್ನಿಸೋದಿಲ್ಲ. ಪುತ್ಥಳಿ ಕೆಡವಿ, ಪುಂಡಾಟ ಮೆರೆದಂತ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ, ವೀರ ಮರಣಹೊಂದಿದಂತ ಮಹಾನಾಯಕ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಆಗಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ […]

ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ. ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರ ನೆಲಮಂಗಲದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ…ರಾಜ್ಯದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸುವಂತಾಗಬೇಕು, ವೈ ಮನಸ್ಸು ಬಿಡಬೇಕು.ಬೆಳಗಾವಿ ಎಂದೆಂದೂ ಕರ್ನಾಟಕದ ಅವಿಭಾಜ್ಯ ಅಂಗ,ಇನ್ನೂ ರೀತಿಯಲ್ಲಿ ಮಾಡುತ್ತಿರುವುದು ದುರದೃಷ್ಟಕರ.ಗಲಾಟೆ ಪುಂಡಾಟಿಕೆ ಯಾವಾಗಲೂ ಪ್ರಯೋಜನಕ್ಕೆ ಬರಲ್ಲ ತೊಡೆ ತಟ್ಟೊದ್ರಿಂದ ಏನೂ ಆಗಲ್ಲ.ಈ ಎಂಇಎಸ್ ಪೌರುಷಗಳು ಕೇವಲ ತಾತ್ಕಾಲಿಕ.ಸದನ ನಡೆಯುವ ವೇಳೆ ಈ ರೀತಿಯಲ್ಲಿ ಹಾಗುವುದು ಸಾಮಾನ್ಯ.ಪುಂಡಾಟಿಕೆಯನ್ನ ನಾನು ಖಂಡಿಸುತ್ತೇನೆ..ಏನೇ ತಲೆಕೆಳಗಾದ್ರು ಏನೂ ಹಾಗಲ್ಲ ವಿಫಲ ಪ್ರಯತ್ನ ಮಾಡಿ ಮೈ […]

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ […]

ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್​​ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]

Advertisement

Wordpress Social Share Plugin powered by Ultimatelysocial