ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

ಬೆಂಗಳೂರು: ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ‘ ಎಂದು ಆರ್‌. ಅಶೋಕ ಹೇಳಿದರು. ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ […]

ಕಡುಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕೆಲಸ ಕರ್ನಾಟಕ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿಂದು ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನಗಳ ಸಂಸ್ಥೆ ಮತ್ತು ಅಂಗಾಂಗ ಕಸಿ ಮಾಡುವ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಉಚಿತವಾಗಿ ಅಂಗಾಂಗ ಕಸಿ ಚಿಕಿತ್ಸೆ ನೀಡುವ ಮೂಲಕ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮುಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಡವರಿಗೆ ಅಂಗಾಂಗ ಕಸಿ ಮಾಡಿಸಿಕೊಳ್ಳುವುದು ಕಷ್ಟ. […]

ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ […]

  ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಸ್ಥಳೀಯ ಕೋರ್ಟ್‌ ಆದೇಶಿಸಿದೆ. ಇಲ್ಲಿನ ಪೊಲೀಸ್‌ ಮಾರ್ಗದಲ್ಲಿರುವ ಅಪರಾಧ ವಿಭಾಗದಲ್ಲಿ ಶನಿವಾರ ಹಾಜರಾದ ಅವರನ್ನುಎಸ್‌ಐಟಿ ಅಧಿಕಾರಿಗಳು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ನಂತರ, ತಡರಾತ್ರಿ ಅವರನ್ನು ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿದರು. ಕೋರ್ಟ್‌ ಗೂ ಹಾಜರುಪಡಿಸುವುದಕ್ಕೂ ಮೊದಲು ವೈದ್ಯರ […]

ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ನಡುವೆ ಪೈಪೋಟಿ ತೀವ್ರಗೊಂಡಿದ್ದು, ಸಚಿವ ಆರ್.ಅಶೋಕ್ ವಿರುದ್ಧ ವಿ.ಸೋಮಣ್ಣ  ಗರಂ ಆಗಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಬೆಂಗಳೂರು ಉಸ್ತುವಾರಿಯನ್ನು ನೀಡುವಾಗ ಮುಖ್ಯಮಂತ್ರಿಗಳು ಜೇಷ್ಠತೆಯನ್ನು ಪರಿಗಣಿಸಬೇಕು. ಉಸ್ತುವಾರಿ ಸಿಎಂ ಬಳಿಯೇ ಇದ್ದರೆ ನಮ್ಮ ಅಭ್ಯಂತರವಿಲ್ಲ, ಆದರೆ ಬೇರೆಯವರಿಗೆ ಕೊಟ್ಟರೆ ನನ್ನನ್ನು ಪರಿಗಣಿಸಬೇಕು ನಾನು ಬೆಂಗಳೂರಿಗೆ ಹಿರಿಯ ಸಚಿವ ಎಂಬುದನ್ನು ಹೇಳಿದ್ದೇನೆ .. ಬೆಂಗಳೂರಿನ ಉಸ್ತುವಾರಿ ಮಾಡಲು ಯಾರ ಅನುಭವ ಏನು […]

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ […]

ಆರ್‌ಎಸ್‌ಎಸ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ. ಹೀಗಾಗಿ ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ ಎಸ್‌ ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆಯ ಉದ್ದೇಶ ಹೊಂದಿದೆ ಎಂದರು. ದೇವೆಗೌಡರು ಪ್ರಧಾನಿ ಆಗಿದ್ದಾಗ […]

Advertisement

Wordpress Social Share Plugin powered by Ultimatelysocial