ಹುಬ್ಬಳ್ಳಿ: ಬಿಜೆಪಿ ಒಡೆದ ಮನೆಯಾಗಿದ್ದು, ಹಾನಗಲ್  ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯನ್ನು ಹೊರ ಹಾಕಿ ಅಲ್ಲಿನ ಮುಖಂಡರು ಸಭೆ ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಅಭ್ಯರ್ಥಿ ಬೇಡವಾಗಿದ್ದು, ಅವರನ್ನು ಸೋಲಿಸಲು ಜನರೇ ಮುಂದಾಗಿದ್ದಾರೆ. ಈ ಉಪ ಚುನಾವಣೆಯನ್ನು ಪ್ರತಿಯೊಬ್ಬ ನಾಯಕರು ಮಾಡು ಇಲ್ಲವೇ ಮಡಿ ಎಂದು ನಿರ್ಧರಿಸಿ ಪ್ರಾಮಾಣಿಕವಾಗಿ ಚುನಾವಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ ನಲ್ಲಿ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗಾಗಿ 20 […]

ಬಾಗಲಕೋಟೆ: ದೇಶದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಮತ್ತು ಅವರ ಪುತ್ರಿ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿಂದು ಮಾತನಾಡಿದ ಅವರು, ಆರ್ ಎಸ್ ಎಸ್ ಬಗ್ಗೆ ನೆಹರೂ, ಇಂದಿರಾ ಗಾಂಧಿಯವರು ಮಾತನಾಡಿದಾಗಲೇ ಹಚಾ ಅಂತ ಹೋದ್ವಿ, ಇನ್ನು ಇವರೆಲ್ಲಾ ನಮಗೆ ಯಾವ ಲೆಕ್ಕಕ್ಕೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿಯವರವರಿಗೆ […]

ರಾಮನಗರ: ಆರ್‌ಎಸ್‌ಎಸ್ ಬಗ್ಗೆ ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ.‌ ಈ ಬಗ್ಗೆ ಯಾವುದೇ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.‌ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ಬಿಜೆಪಿಯು ಆರ್ ಎಸ್  ಎಸ್‌  ಜೊತೆ ಸೇರಿಕೊಂಡು ಕಾಶ್ಮೀರವನ್ನು ಹಾಳು ಮಾಡುತ್ತಿದೆ‘ ಎಂದು ದೂರಿದ್ದರು. ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ಉಗ್ರರು ಶಾಲೆಗೆ ನುಗ್ಗಿ ಶಿಕ್ಷಕರನ್ನು ಕೊಂದು ಹಾಕಿದ್ದಾರೆ. ಈ ವರ್ಷ ಗಡಿಯಲ್ಲಿ ಹೆಚ್ಚು‌ ಸೈನಿಕರ ಸಾವಾಗಿದೆ‌. ಇದೇನಾ ಆರ್‌ ಎಸ್‌ […]

ಬೆಂಗಳೂರು : ಸಂಘಪರಿವಾರದ ಬಗ್ಗೆ ಲಘುವಾಗಿ ಮಾತನಾಡುತ್ತಿರುವವರಿಗೆ   ಸಂಘಪರಿವಾರದವರಿಗೆ ಖುರ್ಚಿಯ ವ್ಯಾಮೋಹವಿಲ್ಲ ಎಂದು  ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಆರ್ ಎಸ್ ಎಸ್ ಬಗ್ಗೆ ಕಳೆದ ಒಂದು ವಾರದಿಂದ ಚರ್ಚೆಯಾಗುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯರಿಗೆ ಸಂಘಪರಿವಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲಘಪರಿವಾರದವರಿಗೆ ಖುರ್ಚಿ ವ್ಯಾಮೋಹವಿಲ್ಲ. ಖುರ್ಚಿಗಾಗಿ ನಾವು  ಎಂದೂ ಹೋರಾಡಿಲ್ಲ. ಸಮಾಜಸೇವೆಗಾಗಿ ಸಂಘ ಸಮರ್ಪಣೆ ಮಾಡಿಕೊಂಡಿದೆ. ದೇಶಕ್ಕಾಗಿ‌ ತ್ಯಾಗ ಬಲಿದಾನ ಮಾಡುತ್ತಿದೆ. ಖುರ್ಚಿ ವ್ಯಾಮೋಹ ಜೆಡಿಎಸ್, ಕಾಂಗ್ರೆಸ್ಸಿಗಿದೆ. ಅಲ್ಪಸಂಖ್ಯಾತರ […]

ಬೆಂಗಳೂರು; ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ  ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ.ಎಂ.ಆರ್. ಅವರ ಅನ್ಯ ಸೇವೆಯನ್ನು ಹಿಂಪಡೆಯಲಾಗಿದೆ. ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಲ್ಲಿ ಅನ್ಯಸೇವೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ, ಉಮೇಶ್‌  ಅವರನ್ನು ತಕ್ಷಣವೇ ಹಿಂಪಡೆಯುವಂತೆ ಆದೇಶವನ್ನು ಹಿಂಪಡೆಯಲಾಗಿದೆ. ಬಿಎಂಟಿಸಿಯ ಘಟಕ 11ರಲ್ಲಿ ಚಾಲಕ/ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉಮೇಶ ಎಂ.ಆರ್. ಅವರನ್ನು ಈ ಹಿಂದೆ ಹಾಲಿ ವಿಧಾನಪರಿಷತ್ ಸದಸ್ಯ ಅಯನೂರು ಮಂಜುನಾಥ್ […]

  ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ನವರ ಆಪ್ತನ ಮನೆ  ಮೇಲೆ ಆದಾಯ ತೆರಿಗೆ ಅಧಿಕಾರಿಗಳು  ದಾಳಿ ಮಾಡಿದ ಬೆನ್ನಲ್ಲೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಇಂದು ದಿಢೀರ್‌ ದೆಹಲಿ ಪ್ರವಾಸ ಮಾಡಿದ್ದಾರೆ. ಅಷ್ಟಕ್ಕೂ ಸಿಎಂ ಬೊಮ್ಮಾಯಿ ದೆಹಲಿಗೆ ತರಾತುರಿಲ್ಲಿ  ಯಾಕೆ ಹೋದ್ರು.? ಬಿಎಸ್‌ ವೈ ಆಪ್ತನ ಮನೆ  ಮೇಲೆ ಐಟಿ ರೇಡ್‌ ಆಗಿದ್ದಕ್ಕೆ ಸಿಎಂ ದೆಹಲಿಗೆ ಹೊದ್ರಾ..? ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ದೆಹಲಿಗೆ ತೆರಳಿದರಾ.? ಈ […]

ಶಿವಮೊಗ್ಗ: ಆಪ್ತ ಸಹಾಯಕನಾಗಿದ್ದ ಉಮೇಶ್ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ನವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಪ್ಪು ಯಾರೇ ಮಾಡಿದ್ದರೂ ಐಟಿ ಅಧಿಕಾರಿಗಳು ಯಾರನ್ನೂ ಬಿಡಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ. ಉಮೇಶ್ ನಾನು ಸಿಎಂ ಆಗಿದ್ದಾಗಲೂ ಆಪ್ತ ಸಹಾಯಕನಾಗಿ […]

80 ಬಿಜೆಪಿ ಸದಸ್ಯರೊಂದಿಗೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ಸಂಸದ ಪ್ರಲ್ಹಾದ್ ಜೋಷಿ ಗೆ ಸ್ಥಾನ ನೀಡಲಾಗಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೂ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ನೀಡಿದ್ದು, ಇದರೊಂದಿಗೆ ಸಂಸದ ಉಮೇಶ್ ಜಾಧವ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ್ ಲಕ್ಷ್ಮಣ್ ಸವದಿಗೆ ವಿಶೇಷ ಆಹ್ವಾನಿತರ ಸ್ಥಾನ ನೀಡಲಾಗಿದೆ. 80 ಸಾಮಾನ್ಯ ಸದಸ್ಯರಲ್ಲದೆ, ಕಾರ್ಯಕಾರಣಿಯಲ್ಲಿ 50 ವಿಶೇಷ ಆಹ್ವಾನಿತರು […]

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರ್‌ ಎಸ್‌ ಎಸ್‌ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‌ ಎಸ್‌ ಎಸ್‌ ಗೆ ಸೇರಿದವರು. […]

ಕಲಬುರ್ಗಿ: ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಬಗ್ಗೆ ಟೀಕಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಇತ್ತೀಚೆಗೆ ಸಾಕಷ್ಟು ಅಧ್ಯಯನ ಮಾಡುತ್ತಿದ್ದಾರೆ. ಬಹುಶಃ ತಮ್ಮ ವಿದ್ಯಾರ್ಥಿ ದಿನಗಳಲ್ಲೂ ಇಷ್ಟೊಂದು ಓದಿರಲಿಕ್ಕಿಲ್ಲ‘ ಎಂದು ವಸತಿ ಸಚಿವ ವಿ. ಸೋಮಣ್ಣ ಟೀಕಿಸಿದ್ದಾರೆ. ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಬರುವಾಗಲೂ ಅವರೊಂದಿಗೆ ಮಾತನಾಡಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದೆ. ಅದು ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ನಿರತವಾಗಿದೆಯೇ ಹೊರತು […]

Advertisement

Wordpress Social Share Plugin powered by Ultimatelysocial