ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಮತ್ತು ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್‌ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಬೆಂಗಳೂರಿನ  ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪಂಜಿನ ಮೆರವಣಿಗೆ ನಡೆಸಲು ಮುಂದಾದ ಕಾಂಗ್ರೆಸ್‌ ನಾಯಕರನ್ನು  ಇಂಡಿಯಾನ್‌ ಎಕ್ಸ್ ಪ್ರೆಸ್‌ ವೃತ್ತದ ಬಳಿ ಪೊಲೀಸರು ತಡೆದು ಮೆರವಣಿಗೆಯಲ್ಲಿದ್ದ ಕೈ ನಾಯಕರನ್ನು ವಶಪಡಿಸಿಕೊಂಡಿದ್ದಾರೆ.  ಉತ್ತರಪ್ರದೇಶದಲ್ಲಿ ರೈತರ  ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಪ್ರತಿಭಟನೆ ಜಾಥಗಳನ್ನು ನಡೆಸುತ್ತಿದ್ದಾರೆ..ಪ್ರತಿಭಟನೆಯಲ್ಲಿ  […]

ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಲೆ ಪಾವತಿಗೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ನೀಡಿದ್ದ ಗಡುವಿನಲ್ಲಿ 5 ಕಾರ್ಖಾನೆಗಳು ಒಟ್ಟು 13.65 ಕೋಟಿ ರೂ ಬಾಕಿ ಪಾವತಿಸಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಂಕರ ಪಾಟೀಲ್ ಮುನೇನಕೊಪ್ಪ ,ಗಡುವು ಮುಗಿದರೂ 15.91 ಕೋಟಿ ರೂ ಬಾಕಿ ಉಳಿಸಿಕೊಂಡಿರುವ ಎರಡು ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಈಗಾಗಲೇ ನೋಟಿಸ್ ಜಾರಿಗೊಳಿಸಿದ್ದು ರೈತರಿಗೆ ಬಾಕಿ […]

ಉತ್ತರ ಪ್ರದೇಶದಲ್ಲಿ ಹಿಂದೆ ಆಳ್ವಿಕೆ ನಡೆಸಿದ ಸರ್ಕಾರ ಕೇಂದ್ರದ ವಸತಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಯುಂಟು ಮಾಡುವ ಮೂಲಕ, ರಾಜ್ಯದ ಬಡವರಿಗೆ ಮನೆ ನಿರ್ಮಿಸಿಕೊಡಲು ಆಸಕ್ತಿ ತೋರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಂಎವೈ–ಯು ಯೋಜನೆಯ 75 ಸಾವಿರ ಫಲಾನುಭವಿಗಳಿಗೆ ವರ್ಚುವಲ್‌ ರೂಪದಲ್ಲಿ ಕೀಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, 2017ಕ್ಕೂ ಹಿಂದೆ, ಉತ್ತರ ಪ್ರದೇಶಕ್ಕೆ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಆವಾಸ್ […]

ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಎಂಬ ಕಾಂಗ್ರೆಸ್ ನವರ ಪಾದಯಾತ್ರೆ ಹಾನಗಲ್ ಮತ್ತು ಸಿಂಧಗಿ ಮತಕ್ಷೇತ್ರಗಳ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಒಂದು ಚುನಾವಣಾ ಗಿಮಿಕ್, ಇಂತಹ ಚುನಾವಣಾ ಗಿಮಿಕ್ ಗಳಿಗೆ ಜನ ಮೋಸ ಹೋಗುವುದಿಲ್ಲ. ತಂತ್ರಗಾರಿಕೆಗಳಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಯಾವಾಗಲೂ ಕೃಷ್ಣೆಯ ನಡಿಗೆ ಸತ್ಯದ ಕಡೆಗೆ ಎಂಬುದನ್ನು ಪರಿಪಾಲಿಸುತ್ತಾ ಬಂದಿದ್ದು ಉಪಚುನಾವಣೆ ಇರಲಿಲ್ಲ […]

  ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸಲು ವೈಯಕ್ತಿಕ ಅಭ್ಯಂತರವಿಲ್ಲ. ಆದರೆ, ಹೊಸ ಜಿಲ್ಲೆ ಇಬ್ಭಾಗಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ಚರ್ಚೆಗೆ ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಇಬ್ಭಾಗಿಸುವ ಮುನ್ನ ಪಕ್ಷಾತೀತವಾಗಿ ವಿವಿಧ ಕ್ಷೇತ್ರಗಳ ಪ್ರಮುಖರ ಜತೆ ಚರ್ಚೆ ನಡೆಸಬೇಕು. ಜನರ ಒಟ್ಟಾರೆ ಅಭಿಪ್ರಾಯ ಸಂಗ್ರಹವಾಗಬೇಕು. ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳ ಜತೆ ನಾನು […]

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು..! ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ… ನಾವು ಯಾವುದೇ ಒಂದು ಸಮುದಾಯವನ್ನ ಒಲೈಕೆ ಮಾಡೋದಿಲ್ಲ  ಜೆಡಿಸ್‌ ಪಕ್ಷದಂತೆ ನಾವು ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್‌ […]

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಮೋದಿ ಚಿಲ್ಲರೆ ಅಲ್ಲ ಚಿನ್ನದ ಗಟ್ಟಿ…! ಮೋದಿ ಚಿಲ್ಲರೆ ಮನುಷ್ಯ ಅಲ್ಲ ಅವರೊಬ್ಬ ಹಚ್ಚಿದ ಗಟ್ಟಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು. ಸೋಮವಾರ ಮಾತನಾಡಿದ ಕಾಂಗ್ರೆಸ್ ನ ಖರ್ಗೆ ಮೋದಿಯವರ ಬಗ್ಗೆ ಬಾಯಿತಪ್ಪಿ ಚಿಲ್ಲರೆ ಮನುಷ್ಯ ಎಂದು ಮಾತನಾಡಿದರೆ ಕ್ಷಮೆಯಾಚಿಸಲಿ ಇಲ್ಲದಿದ್ದರೆ ಮೋದಿ ಚಿಲ್ಲರೆ ಬಗ್ಗೆ ಕರೆಗೆ ವಿವರಣೆ ಕೊಟ್ಟರೆ ಹೊರ ಗೌರವ ಹೆಚ್ಚುತ್ತದೆ ಎಂದು ಆಗ್ರಹಿಸಿದರು. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲಿ ಪಂಜಾಬ್ ನಲ್ಲಿ ಕಾಂಗ್ರೆಸ್ […]

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ವಿಜಯೇಂದ್ರ ಅವರಿಗೆ ಹಾನಗಲ್ ಉಸ್ತುವಾರಿ ನೀಡಲಾಗಿದೆ. ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನಿಯೋಜಿಸಿದ್ದು, ವಿಜಯೇಂದ್ರ ಅವರನ್ನು ಕೈಬಿಡಲಾಗಿತ್ತು.ವಿಜಯೇಂದ್ರ ಅವರನ್ನು ದೂರ ಇಟ್ಟಿರುವ ಬಗ್ಗೆ ವಿಜಯೇಂದ್ರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿಂದೆ ಹಲವು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಗೆಲುವಿಗೆ ಕಾರಣರಾಗಿದ್ದ ವಿಜಯೇಂದ್ರ […]

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಬಢೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ರಾಜ್ಯ ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ರಾಜ್ಯದಲ್ಲಿ 150 ಸರ್ಕಾರಿ ಐಟಿಐ ಗಳ ಉನ್ನತೀಕರಣವನ್ನು ಟಾಟಾ ಟೆಕ್ನಾಲಜೀಸ್ ಸಂಸ್ಥೆ ಇತರ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಕೈಗೆತ್ತಿಕೊಂಡಿದ್ದು, ಮೂಲಸೌಕರ್ಯ ಉನ್ನತೀಕರಣ ಬಹುತೇಕ ಪೂರ್ಣಗೊಂಡಿದೆ. ಜೊತೆಗೆ ಐಟಿಐ ಬೋಧಕ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಮುಖ್ಯಮಂತ್ರಿಯವರು ಐಟಿಐಗಳ ಒಟ್ಟಾರೆ ಅಭಿವೃದ್ಧಿಗೆ, […]

Advertisement

Wordpress Social Share Plugin powered by Ultimatelysocial