ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್.‌ ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್‌ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ.

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಆರಂಭಿಸಿದ್ದು, ಸಂತೆಕಲ್ಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಗೆಲ್ಲಲು ಬೇಕಿರುವ ತಂತ್ರ ರೂಪಿಸುತ್ತೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ತ್ಯಾಗ ಮಾಡಿರುವ ಪ್ರತಾಪಗೌಡ ಪಾಟೀಲ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ, ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಜಯೇಂದ್ರ ತಮ್ಮ ವಿಶ್ವಾಸ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ  ಪ್ರತಾಪ್ ಗೌಡ ಪಾಟೀಲ್ […]

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ಪ್ರಧಾನಿ ನರೇಂದ್ರ ಮೋದಿ ಅವರು 75ನೇ ʼಮನ್‌ ಕಿ ಬಾತ್‌ʼ ರೇಡಿಯೋ ಕಾರ್ಯಕ್ರಮ ಮೂಲಕ ದೇಶವನ್ನುದ್ದೇಶಿಸಿ  ಮಾತನಾಡಿದ್ದಾರೆ. ಕಳೆದ ವರ್ಷ ಇದೇ ತಿಂಗಳು ನಡೆದ ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರು ಸದಾ ಪ್ರೇರಣೆಯಾಗಿ ಉಳಿದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಇನ್ನು ಇದೇ ತಿಂಗಳಲ್ಲಿ ಸ್ವಾತಂತ್ರ್ಯ ಬಂದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆರಂಭಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು […]

ಹೊಸ ಕಾಂಗ್ರೆಸ್ ಕಾರ್ಯಾಲಯವನ್ನು  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿಯ ಪಕ್ಷದ ಸೊಲು ಬಸವಕಲ್ಯಾಣದಿಂದಲೇ ಶುರುವಾಗಬೇಕು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ, ನಾವು ಕಾಂಗ್ರೆಸ್ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣ ಅವರನ್ನು ಬಹುಮತದಿಂದ ಗೆಲ್ಲಿಸಬೇಕು . ಎಂದು ಕಾರ್ಯಕರ್ತರಿಗೆ‌  ಹೇಳಿದ್ದಾರೆ ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಕಾರ್ಮಿಕ ಸಾವು.!

ವಿಧಾನಸಭೆ ಬಜೆಟ್‌ ಅಧಿವೇಶನವನ್ನು ಮೊಟಕುಗೊಳಿಸಿದನ್ನು ಖಂಡಿಸಿ ವಾಟಾಳ್ ನಾಗರಾಜ್ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆಯನ್ನು  ಆಚರಿಸಿದ್ದಾರೆ. ಬಳಿಕ ಮಾತನಾಡಿದ ವಾಟಲ್ ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್ ಆಗಿದ್ದಾರೆ, ಈ ಬೆಳವಣಿಗೆ ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ, ಶಾಸಕರ ಮೇಲೆ ಏಕಪತ್ನಿವ್ರತದ ಮೇಲೆ ಚರ್ಚೆ ಮಾಡಿರುವುದು ಅಗೌರವ ಅನೈತಿಕ ಕೆಟ್ಟ ಚಿಂತನೆ ಎಂದು ಸರ್ಕಾರದ ವಿರುದ್ಧ ವಾಟಾಳ್ ಕಿಡಿಕಾರಿದ್ದಾರೆ.ಇದಲ್ಲದೆ ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು […]

ಸಿಡಿ ಕೇಸ್‌ನಲ್ಲಿ ಸಿಲುಕಿರುವ ಯುವತಿಗೆ ರಕ್ಷಣೆ ಕೊಡುವುದಾಗಿ ಇದಾಗಲೇ ಕಾಂಗ್ರೆಸ್‌ನ ಹಲವಾರು ಶಾಸಕಿಯರು ಮುಂದೆ ಬಂದಿರುವ ಬೆನ್ನಲ್ಲೇ ಇದೀಗ ಸಚಿವೆ ಶಶಿಕಲಾ ಜೊಲ್ಲೆ ಕೂಡ ರಕ್ಷಣೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೊಲ್ಲೆ 2ನೇ ವಿಡಿಯೋದಲ್ಲಿ ಆ ಯುವತಿ ಏನು ಹೇಳಿದ್ದಾರೆ ನೋಡಿಲ್ಲ. ಗೃಹ ಸಚಿವ ಬೊಮ್ಮಾಯಿ ಅವರು ಮತ್ತು ಸ್ವತಃ ಮುಖ್ಯಮಂತ್ರಿಗಳು ಆ ಮಹಿಳೆಗೆ ರಕ್ಷಣೆ ಕೊಡುವುದಾಗಿ ಸದನದಲ್ಲಿ ಹೇಳಿದ್ದಾರೆ. ಈಗ ನಮ್ಮಿಂದ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. […]

ಸಿಡಿ ಸಂತ್ರಸ್ಥೆ ರಿಲೀಸ್ ಮಾಡಿರುವ 2ನೇ ವಿಡಿಯೋ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ನಾನು ಎಸ್ಐಟಿ ತನಿಖೆಯಲ್ಲಿ ಇಂಟರ್ ಫಿಯರ್ ಆಗಲ್ಲ, ಎಸ್.ಐ.ಟಿ ಮುಖ್ಯಸ್ಥ ಸೋಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ, ಸದ್ಯ ರಮೇಶ್ ಜಾರಕಿಹೊಳಿ ಹೇಳಿಕೆ ಪಡೆದುಕೊಂಡಿದ್ದೇವೆ, ಯುವತಿಯ ಅಪೇಕ್ಷೆಯಂತೆ  ಯುವತಿಗೂ ಅವರ ಪೋಷಕರಿಗೂ ರಕ್ಷಣೆ ಕೊಡುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಡಿ ಲೇಡಿಯಿಂದ ಡಿಕೆಶಿ, ಸಿದ್ದು ಹೆಸರು ಉಲ್ಲೇಖ..! |ಸಿಡಿ‌ […]

ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ನಡೆದಿದೆ.ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಎಂದು ಗುರುತಿಸಲಾಗಿದ್ದು, ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ (ಶನಿವಾರ) ಚರ್ಚೆ ಮಾಡಲಾಗುವುದು. ಚರ್ಚೆಯ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುವುದು. ಕೇಂದ್ರ ಸಮಿತಿಯು ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಪ್ರಭಾರಿಗಳೂ ಆದ ಶ್ರೀ ಅರುಣ್ ಸಿಂಗ್ […]

Advertisement

Wordpress Social Share Plugin powered by Ultimatelysocial