ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 6.5 ಕೋಟಿಗೂ ಹೆಚ್ಚು ಜನರಿಗೆ ಸಿಹಿ ಸುದ್ದಿ ನೀಡಿದೆ. ಇಪಿಎಫ್‌ಒನ ನಿವೃತ್ತಿ ಉಳಿತಾಯ ಯೋಜನೆಯ ವೇತನ ಮಿತಿಯನ್ನು ಶೀಘ್ರದಲ್ಲೇ ಹೆಚ್ಚಿಸುವ ಸಾಧ್ಯತೆಯಿದೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಸ್ತುತ ತಿಂಗಳಿಗೆ 15,000 ರೂ.ಗಳ ಮಿತಿಯನ್ನು ಮಾಸಿಕ 21,000 ರೂ.ಗೆ ಪರಿಷ್ಕರಿಸಬಹುದು ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಕೊನೆಯ ಬಾರಿಗೆ 2014 ರಲ್ಲಿ ವೇತನವನ್ನು ಪರಿಷ್ಕರಿಸಲಾಯಿತು. ಇದರಲ್ಲಿ ಮಾಸಿಕ 6,500 ರೂ.ಗಳಿಂದ 15,000 ರೂ.ಗೆ ಹೆಚ್ಚಿಸಲಾಯಿತು. […]

ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಗಣೇಶ ಚತುರ್ಥಿಯ ಮುನ್ನಾದಿನದಂದು ನಾಗರಿಕರಿಗೆ ಶುಭಾಶಯ ಕೋರಿದರು ಮತ್ತು ಈ ಹಬ್ಬವು ಜೀವನದಲ್ಲಿ ವಿನಮ್ರರಾಗಿರಲು ಮತ್ತು ಸಮಾಜದಲ್ಲಿ ಸಹೋದರತ್ವವನ್ನು ಉತ್ತೇಜಿಸಲು ಎಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. “ಈ ಗಣೇಶ ಚತುರ್ಥಿಯ ಹಬ್ಬವನ್ನು ಭಗವಾನ್ ಶ್ರೀ ಗಣೇಶನ ಜನ್ಮ ವಾರ್ಷಿಕೋತ್ಸವವಾಗಿ ಆಚರಿಸಲಾಗುತ್ತದೆ – ಜ್ಞಾನ, ಬುದ್ಧಿವಂತಿಕೆ ಮತ್ತು ಸಮೃದ್ಧಿಯ ಸಾರಾಂಶ, ಇದು ಉತ್ಸಾಹ, ಸಡಗರ ಸಂತೋಷದ ಹಬ್ಬವಾಗಿದೆ” ಎಂದು ಅವರು ಹೇಳಿದರು. ಈ ಹಬ್ಬವು […]

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಹೇಳಿಕೊಂಡಿದ್ದಾರೆ. ಐದು ದಿನಗಳವರೆಗೆ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶ ನಿನ್ನೆಯಿಂದ ಆರಂಭಗೊಂಡಿದೆ. ಇಂದಿನಿಂದ ಕಲಾಪಗಳು ಹೊಸ ಸಂಸತ್‌ ಭವನದಲ್ಲಿ ನಡೆಯಲಿದೆ. ಹೊಸ ಸಂಸತ್‌ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿರುವ ವೇಳೆ […]

ನವದೆಹಲಿ: ವಿಶ್ವಕರ್ಮ ಜಯಂತಿಯ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಪಿ.ಎಂ ವಿಶ್ವಕರ್ಮ’ ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಯೋಜನೆಯಿಂದ ಸಾಂಪ್ರದಾಯಿಕ ಕೌಶಲ ಕಾರ್ಯಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಹಾಗೂ ಕರಕುಶಲಿಗರಿಗೆ ಸಹಾಯವಾಗಲಿದೆ. ಯೋಜನೆ ಅಡಿ ಫಲಾನುಭವಿಗಳಿಗೆ ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲಾಗುತ್ತದೆ. ಮೂಲಭೂತ ಮತ್ತು ಸುಧಾರಿತ ತರಬೇತಿ ಒಳಗೊಂಡ ಕೌಶಲ ಉನ್ನತೀಕರಣ, ₹ 15,000ದಷ್ಟು ಟೂಲ್‌ಕಿಟ್‌ ಪ್ರೋತ್ಸಾಹ ಧನ, ₹ 1 ಲಕ್ಷದವರೆಗೆ ಆಧಾರ […]

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಭದ್ರತಾ ಪಡೆಗಳಿಂದ ನಡೆಯುತ್ತಿರುವ ಕಾರ್ಯಾಚರಣೆಗಳ ಮಧ್ಯೆ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಭಾರತದ ಶತ್ರುಗಳಿಗೆ ಬಲವಾದ ಎಚ್ಚರಿಕೆ ನೀಡಿದರು.ಅವರು ಭಾರತದ ವಿರುದ್ಧ ಯಾರಾದರೂ ಯುದ್ಧಕ್ಕೆ ಹೋದರೆ, ಅವರ ಮಕ್ಕಳನ್ನು ಬೇರೆಯವರು ಬೆಳೆಸುತ್ತಾರೆ” ಎಂದು ಎಚ್ಚರಿಸಿದ್ದಾರೆ.   “ಭಾರತವು ಯುದ್ಧವನ್ನು ಕಂಡಿದೆ ಮತ್ತು ಯುದ್ಧವನ್ನು ಬಯಸುವುದಿಲ್ಲ. ಆದರೆ ನೀವು ಭಾರತದೊಂದಿಗೆ ಯುದ್ಧಕ್ಕೆ ಹೋದರೆ, ಬೇರೆಯವರು ನಿಮ್ಮ ಮಕ್ಕಳನ್ನು ಬೆಳೆಸುತ್ತಾರೆ” ಎಂದು ಸಚಿವರು ಟ್ವೀಟ್ […]

ಹೊಸದಿಲ್ಲಿ: ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯ ಕಾರಣದಿಂದ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. 6E 093 ಫ್ಲೈಟ್‌ ನಲ್ಲಿ 150 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.   YashoBhoomi; ತಮ್ಮ ಜನ್ಮದಿನದಂದು ಯಶೋಭೂಮಿ ಸಮಾವೇಶ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಹೊಂದಿತ್ತು ಮತ್ತು ನಂತರ ದೆಹಲಿ […]

ಕೊಚ್ಚಿ: ಮಲಯಾಳಂ ಲೇಖಕ ಮತ್ತು ಶಿಕ್ಷಣ ತಜ್ಞ ಸಿ ಆರ್ ಓಮನಕುಟ್ಟನ್ (80) ಅವರು ಶನಿವಾರ ಹೃದಯಾಘಾತದಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1943 ರಲ್ಲಿ ಕೊಟ್ಟಾಯಂನ ತಿರುನಕ್ಕರದಲ್ಲಿ ಜನಿಸಿದ ಓಮನಕುಟ್ಟನ್ ನಾಲ್ಕು ವರ್ಷಗಳ ಕಾಲ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಾಹಿತಿ ಅಧಿಕಾರಿಯಾಗಿ ಕೆಲಸ ಮಾಡಿದರು. ನಂತರ ಅವರು ಅಧ್ಯಾಪಕ ವೃತ್ತಿಯನ್ನು ಆರಿಸಿಕೊಂಡರು ಮತ್ತು ಕೋಝಿಕ್ಕೋಡ್ ಮೀಂಚಂತಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇರಿದರು. ಒಂದು ವರ್ಷದ ನಂತರ ಅವರು ಎರ್ನಾಕುಲಂ ಮಹಾರಾಜ […]

ನವದೆಹಲಿ,ಸೆ.17- ಸಂಸತ್‍ನ ನೂತನ ಭವನದಲ್ಲಿ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ. ಲೋಕಸಭೆಯ ಅಧ್ಯಕ್ಷ ಹೋಂಬಿರ್ಲಾ ಅವರೊಂದಿಗೆ ಹೊಸ ಸಂಸತ್ ಗಜದ್ವಾರದಲ್ಲಿ ಧ್ವಜಾರೋಹಣ ನಡೆದಿದೆ. ಈ ಮೂಲಕ ಸೋಮವಾರದಿಂದ ಆರಂಭಗೊಳ್ಳುವ 5 ದಿನಗಳ ಅಧಿವೇಶನ ಹೊಸಭವನದಲ್ಲೇ ನಡೆಯಲು ಸಿದ್ಧತೆ ನಡೆದಿವೆ.   ಸಂಸತ್ ಅಧಿವೇಶನಕ್ಕೂ ಮುನ್ನ ಉಭಯ ಸದನಗಳ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸುವ ಸಂಪ್ರದಾಯ ಮೊದಲಿನಿಂದಲೂ ಜಾರಿಯಲ್ಲಿದೆ. ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ: ಮಲ್ಲಿಕಾರ್ಜುನ ಖರ್ಗೆ […]

ಚೆನೈ: ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಡಿಎಂಕೆ ನಾಯಕರ ವಿರುದ್ಧ ಮದ್ರಾಸ್ ಹೈಕೋರ್ಟ್ (Madras High Court) ಅಸಮಾಧಾನ ವ್ಯಕ್ತಪಡಿಸಿದೆ. ವಾಕ್ ಸ್ವಾತಂತ್ರ್ಯವು (Freedom Of Speech) ಮೂಲಭೂತ ಹಕ್ಕು ಆದರೆ ಅದು ದ್ವೇಷದ ಭಾಷಣವಾಗಿ ಬದಲಾಗಬಾರದು. ವಿಶೇಷವಾಗಿ ಧರ್ಮದ ವಿಷಯಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣವಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡಿಸಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎನ್ ಶೇಷಸಾಯಿ ಅವರಿದ್ದ ಪೀಠ ವಿಚಾರಣೆ […]

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ. ಭಾನುವಾರವೂ (ಸೆಪ್ಟೆಂಬರ್‌ 17) ನರೇಂದ್ರ ಮೋದಿ (Narendra Modi) ಅವರು ದೆಹಲಿ ಏರ್‌ಪೋರ್ಟ್‌ ಮೆಟ್ರೋ ಎಕ್ಸ್‌ಪ್ರೆಸ್‌ ಲೈನ್‌ಗೆ ಚಾಲನೆ ನೀಡುವ ಮೊದಲು ಮೋದಿ ಅವರು ದೆಹಲಿ ಮೆಟ್ರೋದಲ್ಲಿ (Delhi Metro) ಸಂಚರಿಸಿದರು. ದ್ವಾರಕಾ […]

Advertisement

Wordpress Social Share Plugin powered by Ultimatelysocial