ದುನಿಯಾ ವಿಜಯ್ ಮೊಟ್ಟ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ ‘ಸಲಗ’ ಚಿತ್ರ ಅಕ್ಟೋಬರ್ 14ಕ್ಕೆ ತೆರೆಗೆ ಬರಲಿದೆ. ಸಿನಿಮಾ ತಂಡದಿಂದ  ಈಗಾಗಲೇ ಪ್ರಚಾರ ಜೋರಾಗಿದ್ದು ಸಿನಿಮಾವನ್ನು ಹೆಚ್ಚು ಮಂದಿಗೆ ತಲುಪಿಸುವ ಪ್ರಯತ್ನದಲ್ಲಿದೆ. ‘ಸಲಗ’ ಚಿತ್ರತಂಡ ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ‘ಸಲಗ’ದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್‌ಕುಮಾರ್ ಸಹ ಬರಲಿದ್ದಾರೆ. ಪುನೀತ್ ರಾಜ್‌ಕುಮಾರ್, ಸಿದ್ದರಾಮಯ್ಯ ಹಾಗೂ ಇನ್ನಿತರು ಅತಿಥಿಗಣ್ಯರು ‘ಸಲಗ’ […]

‘ತೋಟಗಾರಿಕೆ ಬೆಳೆ’ಗಳಿಗೆ ತಗಲುವ ಸಹಾಯಧನ ಹೆಚ್ಚಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆಯವರೊಂದಿಗೆ ಚರ್ಚಿಸಿದಂತೆ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ತೋಟಗಾರಿಕೆ ಬೆಳೆಗಳಿಗೆ ತಗುಲುವ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ರೈತರಿಗೆ ಒದಗಿಸುತ್ತಿರುವ ಸಹಾಯಧನವನ್ನ ಹೆಚ್ಚಿಸಿದೆ. ಅದ್ರಂತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ರೈತರಿಗೆ ಘಟಕ ವೆಚ್ಚದ ಶೇಕಡ 90ರಂತೆ ಹಾಗೂ ಸಾಮಾನ ವರ್ಗದ ರೈತರಿಗೆ ಘಟಕ ವೆಚ್ಚದ ಶೇ.75ರಂತೆ ನೀಡಬಹುದಾಗಿದೆ. ಅಂದ್ಹಾಗೆ, ಶಿವಮೊಗ್ಗ, ಚಿಕ್ಕಮಗಳೂರು […]

ಮೈಸೂರು,ಅ.6- ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು, ವೃತ್ತಗಳನ್ನು ದೀಪಾಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ […]

  ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನವನ್ನು ಬೋನಸ್ ಆಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, RPF ಮತ್ತು RPSF ಸಿಬ್ಬಂದಿಯನ್ನು ಹೊರತುಪಡಿಸಿ ಭಾರತೀಯ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ರೈಲ್ವೆಯ ಸುಮಾರು 11.58 ಲಕ್ಷ ನಾನ್ […]

ತರಕಾರಿ ವ್ಯಾಪಾರಿಗಳ ಕರ್ಕಶ ಮೈಕ್ ವಿರುದ್ಧ ಪೊಲೀಸರ ಸಮರ…! ಈ ಕುರಿತು ಪ್ರಕಟಣೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರು, ತರಕಾರಿ ವ್ಯಾಪಾರಿಗಳು ಬದುಕಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ. ಆದರೆ ಯಾರೂ ಮೈಕ್ ಬಳಿಸಿ ವೃದ್ಧರಿಗೆ, ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗೆ ತೊಂದರೆ ಮಾಡುವ ರೀತಿಯಲ್ಲಿ ಜೋರಾಗಿ ಕೂಗಬಾರದು. ಶಬ್ಧ ಮಾಲಿನ್ಯದಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇಂತಹ ಪ್ರಕರಣಗಳು ಇನ್ನು ಮೂದೆ ನಡೆದರೆ ಕಾನೂನು ಕ್ರಮ ಜರುಗಿಸಲಾಗುವುದು. […]

ಮೈಸೂರು, ಅಕ್ಟೋಬರ್ 6: ನಾಡಹಬ್ಬ ದಸರಾ ಹಿನ್ನಲೆ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ಆಗಮಿಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ನಗರದ ಮೈಸೂರು- ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷ್ಯಾ ಜಂಕ್ಷನ್ ಬಳಿ ಎಸ್.ಎಂ. ಕೃಷ್ಣ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು ಹೂಗುಚ್ಛ ನೀಡಿ, ಆತ್ಮೀಯವಾಗಿ ಸ್ವಾಗತಿಸಿದರು.  ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ: ಶಿವಸೇನೆ ಆಕ್ರೋಶ ಈ ಬಾರಿಯ […]

ಬೆಂಗಳೂರು : ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಅನುಭವ, ಸಲಹೆ ಹಾಗೂ ಮಾರ್ಗದರ್ಶನದ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸೆಂಚುರಿ ಕ್ಲಬ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ ನನ್ನದೇ ಜವಾಬ್ದಾರಿಗಳಿವೆ. ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಕಟ್ಟಬೇಕು. ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ […]

Advertisement

Wordpress Social Share Plugin powered by Ultimatelysocial