ಬೆಂಗಳೂರು: ಭಾರಿ ಮಳೆಗೆ ಬೆಂಗಳೂರಿನ ಜನತೆ ಪರದಾಡುವಂತಾಗಿದೆ. ದಸರಾ ಹಬ್ಬಕ್ಕೆ ವಾಹನಗಳ ಪೂಜೆಗೆ ಸಿದ್ಧತೆ ಮಾಡಿಕೊಂಡವರಿಗೆ ಶಾಕ್ ಆಗಿದ್ದು ಮಳೆ ನೀರಿನಲ್ಲಿ ವಾಹನಗಳು ಜಲಾವೃತಗೊಂಡಿವೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ. ನಗರದ ಕೋಡಿಚಿಕ್ಕನಹಳ್ಳಿಯ ಅಬ್ಬಯ್ಯ ಲೇಔಟ್ನ ಮನೆಯೊಳಗೆ 3 ಅಡಿಯಷ್ಟು ಮಳೆ ನೀರು ನಿಂತಿದ್ದು ಪೂಜೆಗೂ ಜಾಗವಿಲ್ಲದೆ ದಸರಾ ಹಬ್ಬ ಮಾಡಲಾಗದೆ […]

ಬೆಂಗಳೂರು, ಅಕ್ಟೋಬರ್ 14: ಕಳೆದೊಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಗುರುವಾರ ನಗರದಲ್ಲಿ ಸುರಿದ ಮಳೆಗೆ ಮಡಿವಾಳ ಕೆರೆ ತುಂಬಿ ಹರಿದಿದೆ. ಮಡಿವಾಳ ಕೆರೆ ತುಂಬಿರುವುದರಿಂದ ಬಿಟಿಎಂ ಲೇಔಟ್, ಎಚ್‌ಎಸ್‌ಆರ್ ಲೇಔಟ್, ಅನುಗ್ರಹ ಲೇಔಟ್, ಮತ್ತು ಮಡಿವಾಳ ಪ್ರದೇಶಗಳು ಸೇರಿದಂತೆ ಹಲವು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಮುಂದಿನ ಮೂರು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ […]

ಮೈಸೂರು, ಅಕ್ಟೋಬರ್ 14; ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡಿದೆ. ಜಂಬೂಸವಾರಿಯಲ್ಲಿ ಆನೆಗಳಷ್ಟೇ ಮತ್ತೊಂದು ಆಕರ್ಷಣೆ ಎಂದರೆ ಅದು ಸ್ತಬ್ಧ ಚಿತ್ರಗಳು. ಈ ಬಾರಿ ಮೆರವಣಿಗೆಯಲ್ಲಿ 6 ಸ್ತಬ್ಧ ಚಿತ್ರಗಳ ಜೊತೆಗೆ ನೂರಾರು ಜಾನಪದ ಕಲಾವಿದರು ಹೆಜ್ಜೆ ಹಾಕಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಕಾರ ಈ ಬಾರಿ ಸರಳ ದಸರಾ ಆಚರಿಸುತ್ತಿದೆ. ಶುಕ್ರವಾರ ಅರಮನೆ ಮುಂಭಾಗದಲ್ಲಿ ಮಾತ್ರ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ನಡೆಯಲಿದೆ.‌ ಅಂಬಾವಿಲಾಸ ಅರಮನೆ […]

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆರಂಭಕ್ಕೆ ಕ್ಷಣಗಣನೆ. ಜಂಬೂಸವಾರಿಯಲ್ಲಿ ಆನೆಗಳಷ್ಟೇ ಅಲ್ಲದೆ ಸ್ತಬ್ಧ ಚಿತ್ರಗಳು ಆಕರ್ಷಣೆಯಾಗಿದೆ. ಈ ಬಾರಿ ಮೆರವಣಿಗೆಯಲ್ಲಿ 6 ಸ್ತಬ್ಧ ಚಿತ್ರಗಳ ಜೊತೆಗೆ ನೂರಾರು ಜಾನಪದ ಕಲಾವಿದರು ಹೆಜ್ಜೆ ಹಾಕಲಿದ್ದಾರೆ. ಶುಕ್ರವಾರ ಅರಮನೆ ಮುಂಭಾಗದಲ್ಲಿ ಮಾತ್ರ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ನಡೆಯಲಿದೆ.‌ ಅಂಬಾವಿಲಾಸ ಅರಮನೆ ಒಳಗಷ್ಟೇ ದಸರಾ ಸೀಮಿತಗೊಂಡಿದೆ. ಈಗಾಗಲೇ ಆನೆಗಳಿಗೆ ತಾಲೀಮು ನೀಡಿ ಜಂಬೂಸವಾರಿಗೆ ಸಿದ್ಧಗೊಳಿಸಲಾಗಿದ್ದು,ಈ ಬಾರಿ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾನೆ. […]

ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ ಪ್ರಯುಕ್ತ ಇಲ್ಲಿನ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಹಂಪಿ ಕಲ್ಲಿನ ರಥ, ವಿಜಯ ವಿಠಲ ದೇವಸ್ಥಾನ, ಕಲ್ಲಿನ ರಥ, ಆನೆ ಸಾಲು ಮಂಟಪ ಸ್ಮಾರಕಗಳಿಗೆ ಅಲಂಕಾರ ಮಾಡಲಾಗಿದ್ದು ಎಲ್ಲರ ಗಮನ ಸೆಳೆಯುತ್ತಿವೆ. ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವ ಸವಿನೆನಪಿನಲ್ಲಿ ದೇಶದ ಆಯ್ದ ಪ್ರಮುಖ ಸ್ಮಾರಕಗಳಿಗೆ […]

ಕಾಬೂಲ್​​ನಿಂದ ಪಾಕಿಸ್ತಾನಕ್ಕೆ ಬರುತ್ತಿದ್ದ ಮತ್ತು ಇಲ್ಲಿಂದ ಕಾಬೂಲ್​​ಗೆ ಹೋಗುತ್ತಿದ್ದ ಎಲ್ಲ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸುವುದಾಗಿ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ (PIA) ಇಂದು ಹೇಳಿದೆ. ಹಾಗೇ, ತಾಲಿಬಾನಿಗಳ ಮಿತಿಮೀರಿದ ಹಸ್ತಕ್ಷೇಪ, ಅನಿಯಂತ್ರಿತ ನಿಯಮ ಬದಲಾವಣೆ, ಮತ್ತು ಅಲ್ಲಿನ ಸಿಬ್ಬಂದಿಯ ಬೆದರಿಕೆ, ವಿಪರೀತ ಎನ್ನಿಸುವಷ್ಟು ಕಟ್ಟುನಿಟ್ಟಿನ ನಿಯಮಗಳೇ ಇದಕ್ಕೆ ಕಾರಣ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಅಫ್ಘಾನಿಸ್ತಾನದ ಅತಿದೊಡ್ಡ ಖಾಸಗಿ ವಾಹಕವಾದ ಕಾಮ್​ ಏರ್​ ಮತ್ತು ಪಿಐಎ​ (ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ)ಗೆ ಇತ್ತೀಚೆಗಷ್ಟೇ ತಾಲಿಬಾನ್​ ಒಂದು […]

ಶಿವಮೊಗ್ಗ: ₹ 5 ಲಕ್ಷದ ಒಳಗಿನ ಕಾಮಗಾರಿಗಳಿಗೆ ಗುತ್ತಿಗೆ ನೀಡಲು ಇ-ಟೆಂಡರ್‌ ರದ್ದು ಮಾಡಿ, ಭೌತಿಕವಾಗಿ ಕಚೇರಿಯಲ್ಲೇ ಟೆಂಡರ್ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸುವಂತೆ ಪ್ರಸ್ತಾವ ಸಲ್ಲಿಸಲು ಬುಧವಾರ ಮಲವಗೊಪ್ಪದಲ್ಲಿ ನಡೆದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ 101ನೇ ಸದಸ್ಯ ಮಂಡಳಿ ಸಭೆ ಒಮ್ಮತದ ನಿರ್ಣಯ ಅಂಗೀಕರಿಸಿತು. ಇ-ಟೆಂಡರ್ ಅನುಸಾರ ದೇಶದ ಯಾವುದೇ ಮೂಲೆಯಲ್ಲಿ ಗುತ್ತಿಗೆದಾರ ಕುಳಿತುಕೊಂಡು ಬಿಡ್ ಮಾಡಬಹುದು. ಬಿಡ್ ಮಾಡುವ ಗುತ್ತಿಗೆದಾರರು ಕಡಿಮೆ ಬೆಲೆ ನಮೂದಿಸುತ್ತಾರೆ. ನಂತರ ಉಪ […]

ತೈವಾನ್: ತೈವಾನ್ ನಲ್ಲಿ ಬಾರಿ ದುರಂತ ಸಂಭವಿಸಿದೆ. ಗುರುವಾರ ಮುಂಜಾನೆ ಸಂಭವಿಸಿದ ಈ ಅಗ್ನಿ ದುರಂತದಲ್ಲಿ 46 ಜನರು ಸಜೀವವಾಗಿ ದಹನವಾಗಿದ್ದಾರೆ. 79 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 14 ಜನರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ತೈವಾನ್ ನ ಕೌಹ್ಸಿಯುಂಗ್ ನಗರದ 13 ಅಂತಸ್ತಿನ ಟವರ್ ಬ್ಲಾಕ್ ನಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯ ಅಗ್ನಿಶಾಮಕ ಇಲಾಖೆ ತಿಳಿಸಿದೆ. […]

Advertisement

Wordpress Social Share Plugin powered by Ultimatelysocial