ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಸೂಪರ್ ಹಿಟ್ ಆಗಿದ್ದು, ಸದ್ಯ ಎಲ್ಲೆಡೆ ಸಕ್ಸಸ್ ಫುಲ್ ಪ್ರದರ್ಶನ ಕಾಣ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫಿಸ್ ನಲ್ಲೂ ಉತ್ತಮ ಕಲೆಕ್ಷನ್ ಮಾಡಿದ್ದು, ಇನ್ನೇನು ನೂರು ಕೋಟಿಗೆ ಸನಿಹದಲ್ಲಿದೆ. ಸಿನಿಮಾ ಹೀಗೆ ಅದ್ಭುತ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಇದೇ ತಿಂಗಳ ೨೯ ರಿಂದ ಏಪ್ರಿಲ್ 1 ರವರೆಗೂ ಕರ್ನಾಟಕದಾದ್ಯಂತ ವಿಜಯಯಾತ್ರೆ ನಡೆಸಿ ಅಭಿಮಾನಿಗಳಿಗೆ ಕೃತಜ್ಞತೆ […]

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಲಂಬಾಣಿ ತಾಂಡ್ಯದಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದರು. ಹೆಣ್ಣುಮಕ್ಕಳ ಜೊತೆಯಲ್ಲಿ “ಲಂಬಾಣಿಯ ನೃತ್ಯ” ಮಾಡುವ ಮೂಲಕ ಹೋಳಿ ಹಬ್ಬವನ್ನು ಆಚರಣೆ ಮಾಡಿ ಮಾತನಾಡಿದವರು, ನಮ್ಮ ಹಳ್ಳಿಯ ಸಂಸ್ಕೃತಿ ಸೊಗಡೆ ಚಂದ. ಕಾರ್ಯನಿಮಿತ್ತ  ಹಳ್ಳಿಗೆ ತೆರಳಿದ್ದಾಗ ಹೆಣ್ಣುಮಕ್ಕಳ ಜೊತೆ ಅವರ ಶೈಲಿಯಲ್ಲಿ ಹೋಳಿ ಹಬ್ಬದ ಅಂಗವಾಗಿ ಕಳೆದ ಸಂತಸದ ಸಂದರ್ಭ ಇದಾಗಿತ್ತು ಎಂದು ಹಿರಿಯೂರಿನ ಶಾಸಕರು. ಇದನ್ನೂ ಓದಿ: ರಾಜ್ಯ ಸರ್ಕಾರದ […]

ಹೊಸ ಕಾಂಗ್ರೆಸ್ ಕಾರ್ಯಾಲಯವನ್ನು  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿಯ ಪಕ್ಷದ ಸೊಲು ಬಸವಕಲ್ಯಾಣದಿಂದಲೇ ಶುರುವಾಗಬೇಕು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ, ನಾವು ಕಾಂಗ್ರೆಸ್ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣ ಅವರನ್ನು ಬಹುಮತದಿಂದ ಗೆಲ್ಲಿಸಬೇಕು . ಎಂದು ಕಾರ್ಯಕರ್ತರಿಗೆ‌  ಹೇಳಿದ್ದಾರೆ ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಕಾರ್ಮಿಕ ಸಾವು.!

ಕೆಮಿಕಲ್ ಫ್ಯಾಕ್ಟರಿಯಿಂದ ವಿಷಾನಿಲ ಸೋರಿಕೆಯಿಂದಾಗಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ರಾಯಚೂರಿನ ಕೈಗಾರಿಕಾ ವಲಯದ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಜೆವೈ ಫಾರ್ಮ್ ಕಾರ್ಖಾನೆಯಲ್ಲಿ ವಿಷಪೂರಿತ ಅನಿಲ ಸೋರಿಕೆಯಿಂದಾಗಿ ವ್ಯಕ್ತಿ ಮೃತಪಟ್ಟಿದ್ದಾನೆ. ಆಂಧ್ರ ಮೂಲದ ರಂಗ (೨೮) ಮೃತ ದುರ್ದೈವಿ ಮತ್ತು ಉಳಿದ 4 ಜನರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಈ ಕಾರ್ಖಾನೆಯು 3 ತಿಂಗಳಿಂದೆಯಷ್ಟೇ ಪ್ರಾರಂಭವಾಗಿದ್ದು,  ಕಾರ್ಖಾನೆಯ ಹೆಸರಾಗಲೀ, ದಾಖಲಾತಿಯಾಗಲೀ, ಲೈಸೆನ್ಸ್ ಯಾವುದೂ ಇಲ್ಲ. ಇನ್ನು ದುರಂತ ಆದ […]

ಮಾಜಿ ಕ್ರಿಕೆಟಿಗ ಸಚಿನ್ ತೆಂಡಲ್ಕೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸೋಂಕು ತಗುಲಿರುವ ವಿಚಾರವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೊಂಡಿದ್ದು, ಕೊರೊನಾ ನಿಯಮಗಳನ್ನ ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇಂದು ವರದಿಯಲ್ಲಿ ಸೋಂಕು ತಗುಲಿರೋದು ದೃಢವಾಗಿದ್ದು, ಮನೆಯ ಇತರೆ ಸದಸ್ಯರ ವರದಿ ನೆಗೆಟಿವ್ ಬಂದಿದೆ. ಕೋವಿಡ್ ನಿಯಮಗಳನ್ನ ಪಾಲಿಸಿ, ವೈದ್ಯರ […]

by- Pandit Sri Sidhanth Arun Sharma Guruji 9980663821 ತಿಥಿ : ‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವು ಕಡೆ ಎರಡು ದಿನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಐದು ದಿನ ಗಳ ವರೆಗೆ ಈ ಉತ್ಸವವನ್ನು ಆಚರಿಸುತ್ತಾರೆ. ಇತಿಹಾಸ ಅ. ಹಿಂದಿನ ಕಾಲದಲ್ಲಿ ಢುಂಢಾ ಅಥವಾ ಢೌಂಢಾ ಹೆಸರಿನ ಒಬ್ಬ ರಾಕ್ಷಸಿಯು ಊರೊಳಗೆ ನುಗ್ಗಿ ಸಣ್ಣ ಮಕ್ಕಳನ್ನು ಪೀಡಿಸುತ್ತಿದ್ದಳು. ಅವಳು ರೋಗಗಳನ್ನು ನಿರ್ಮಿಸುತ್ತಿದ್ದಳು. ಅವಳನ್ನು […]

ಪೊಲೀಸ್ ನೀಡಿದ ಮಿಷನ್ ಪೂರ್ಣಗೊಳಿಸಿದ ಕನ್ನಡಿಗ ವೀಡಿಯೋ ವೈರಲ್ ರಸ್ತೆಯಲ್ಲಿ ಸಂಚರಿಸುವ ಬೈಕ್ ಕಾರುಗಳನ್ನು ನಿಲ್ಲಿಸಿ ತಪಾಸಣೆ ನಡೆಸುವುದು ಪೊಲೀಸರ ಕರ್ತವ್ಯ. ಆದರೆ ಇಲ್ಲೊಬ್ಬರು ಪೊಲೀಸ್ ಪೇದೆ ಪ್ರವಾಸಿಗನ ಬೈಕನ್ನು ನಿಲ್ಲಿಸಿ ಮುಂದೆ ಚಲಿಸುತ್ತಿರುವ ಬಸ್ಸ್ ನಲ್ಲಿರುವ ಮಹಿಳೆಯೊಬ್ಬರಿಗೆ ಔಷಧಿಯ ಬಾಟಲ್ ಕೊಡುವಂತೆ ಮನವಿ ಮಾಡಿಕೊಂಡು ಮಾನವೀಯತೆ ಮೆರೆದಿದ್ದಾರೆ. ಕರ್ನಾಟಕ ಮೂಲದ ಪ್ರವಾಸಿಗರೊಬ್ಬರು ಬೈಕ್ನಲ್ಲಿ ತಮಿಳುನಾಡಿನ ತೆಂಕಾಸಿ ಬಳಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಮಿಳುನಾಡಿನ ಪೊಲೀಸ್ ಪೇದೆ ಬೈಕ್ ನಿಲ್ಲಿಸಿ […]

ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸತೀಶ್ ಹಾಗೂ ವಸಂತ ಎಂದು ಗುರುತಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 45 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಶಾಖಪಟ್ಟಣಂನಿಂದ  ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾ ತಂದು ಸಣ್ಣ ಸಣ್ಣ ಪ್ಯಾಕೇಟ್ ಗಳಾಗಿ ಮಾಡಿ ಮಾರಾಟ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಇದನ್ನೂ ಓದಿ: ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್.!

ವಿಧಾನಸಭೆ ಬಜೆಟ್‌ ಅಧಿವೇಶನವನ್ನು ಮೊಟಕುಗೊಳಿಸಿದನ್ನು ಖಂಡಿಸಿ ವಾಟಾಳ್ ನಾಗರಾಜ್ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆಯನ್ನು  ಆಚರಿಸಿದ್ದಾರೆ. ಬಳಿಕ ಮಾತನಾಡಿದ ವಾಟಲ್ ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್ ಆಗಿದ್ದಾರೆ, ಈ ಬೆಳವಣಿಗೆ ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ, ಶಾಸಕರ ಮೇಲೆ ಏಕಪತ್ನಿವ್ರತದ ಮೇಲೆ ಚರ್ಚೆ ಮಾಡಿರುವುದು ಅಗೌರವ ಅನೈತಿಕ ಕೆಟ್ಟ ಚಿಂತನೆ ಎಂದು ಸರ್ಕಾರದ ವಿರುದ್ಧ ವಾಟಾಳ್ ಕಿಡಿಕಾರಿದ್ದಾರೆ.ಇದಲ್ಲದೆ ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು […]

ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆ ನಡೆದಿದ್ದು ಸಭೆಯಲ್ಲಿ  ಎರಡುವರೆ ಗಂಟೆ ಕಾಲ 60 ಕ್ಕೂ ಹೆಚ್ಚು ಜನ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ರೇಣುಕಾಚಾರ್ಯ ಅನುದಾನ ಹಾಗೂ ಮತ್ತಿತರ ವಿಚಾರದಲ್ಲಿ ಸಿಎಂ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ, ಸರ್ಕಾರದ ಜೊತೆ ನಾವು ಇರ್ತಿವಿ , ಏನೇ ಸಮಸ್ಯೆ ಇದ್ರೂ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ […]

Advertisement

Wordpress Social Share Plugin powered by Ultimatelysocial