ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಲದಲ್ಲಿ ರಾಜಕಾರಣದ ಅಪರಾಧೀಕರಣ ಹಾಗೂ ಭ್ರಷ್ಟಾಚಾರ ಎಲ್ಲೆ ಮೀರಿವೆ. ಇಂಥ ದುರುಳ ಸರಕಾರವನ್ನು ಕಿತ್ತೂಗೆಯುವ ಕಾಲ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ಧಾಳಿ ನಡೆಸಿದ್ದಾರೆ. ಜನ ಸಂಘದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆ ನಿಮಿತ್ತ ಕೋಲ್ಕತಾದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಜವಾಹರಲಾಲ್ ನೆಹರೂ ಅವರ ಅನುಕೂಲ ಸಿಂಧು ರಾಜಕಾರಣವನ್ನು ಆರಂಭದಿAದಲೇ ವಿರೋಧಿಸುತ್ತಾ ಬಂದಿದ್ದ […]

ಕೇಂದ್ರಸರ್ಕಾರ ಅಧೀನದ ದೂರಸಂಪರ್ಕ ಸಂಸ್ಥೆಗಳಾದ ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಅನ್ನು ವಿಲೀನಗೊಳಿಸುವ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗಲಿದೆ. ತಕ್ಷಣಕ್ಕೆ ಈ ವಿಲೀನ ಕಾರ್ಯಸಾಧುವಲ್ಲ ಎಂದು ಸರ್ಕಾರವೇ ನೇಮಿಸಿದ ಡೆಲಾಯ್ಟ್ ಆ್ಯಂಡ್ ಎಲ್‌ಎಲ್‌ಪಿ ಸೆಲ್ಸ್ ಸಂಸ್ಥೆ ಸಲಹೆ ನೀಡಿದ್ದೇ ಇದಕ್ಕೆ ಕಾರಣ. ಸದ್ಯ ಬಿಎಸ್ ಎನ್‌ಎಲ್, ದೆಹಲಿ ಮತ್ತು ಮುಂಬೈ ಹೊರತುಪಡಿಸಿ, ದೇಶದ ಉಳಿದೆಲ್ಲೆಡೆ ತನ್ನ ಸೇವೆ ಹೊಂದಿದೆ. ಎಂಟಿಎನ್‌ಎಲ್ ದೆಹಲಿ-ಮುಂಬೈನಲ್ಲಿ ಮಾತ್ರ ಕಾರ್ಯಾಚರಿಸುತ್ತಿದೆ. ಈ ಎರಡು ಸಂಸ್ಥೆಗಳನ್ನು ವಿಲೀನ ಮಾಡುವುದಕ್ಕೆ ಮುನ್ನ […]

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಕಂದಾಯ ಭವನದಲ್ಲಿ ಇರುವ ಉಪವಿಭಾಗಾಧಿಕಾರಿಗಳ ಕಚೇರಿಗೂ ಕೊರೊನಾ ಸೋಂಕಿನ ಭಯ ಕಾಡಲಾರಂಭಿಸಿದೆ. ಈ ಕಚೇರಿಗಳು ಸೀಲ್‍ಡೌನ್ ಆಗಿವೆ ಎಂಬ ವದಂತಿ ಹಬ್ಬಿತ್ತು. ಆದರೆ ಸೀಲ್‍ಡೌನ್ ಆಗಿಲ್ಲ ಎಂದು ಕಚೇರಿ ಮೂಲಗಳು ಸ್ಪಷ್ಟ ಪಡಿಸಿವೆ. ಆದರೆ ಸಾರ್ವಜನಿಕರಿಗೆ ಎಂದಿನಂತೆ ಮುಕ್ತ ಪ್ರವೇಶ ಇಲ್ಲ. ಅತ್ಯಗತ್ಯ ತುರ್ತು ಕೆಲಸ ಇರುವ ಸಾರ್ವಜನಿಕರು ತಾವು ಬಂದ ತುರ್ತು ಕೆಲಸದ ಕುರಿತು ವಿವರಿಸಿದಲ್ಲಿ ಆಯಾ ಕಚೇರಿ ವ್ಯವಸ್ಥಾಪಕರು ಭೇಟಿ […]

ಸೂಕ್ತ ಚಿಕಿತ್ಸೆ ದೊರೆಯದೆ ಮತ್ತಿಬ್ಬರು ಅಮಾನವೀಯವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯ ೪೫ ವರ್ಷದ ಮಹಿಳೆ ಹಾಗೂ ಕಾಚರಕನಹಳ್ಳಿಯ ವೃದ್ಧರೊಬ್ಬರು ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟ ದುರ್ದೈವಿಗಳು. ೪೫ ವರ್ಷದ ಮಹಿಳೆ ಕಳೆದ ಬುಧವಾರ ಮನೆಗೆ ಹೋಗುತ್ತಿದ್ದಾಗ ತಲೆ ತಿರುಗಿ ಕುಸಿದು ಬಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಂವಿಜೆ, ಮಣಿಪಾಲ್ ಮತ್ತು ವೈದೇಹಿ ಆಸ್ಪತ್ರೆಗೆ ಸುತ್ತಾಡಿ ಕೊನೆಗೆ ಸಿಲಿಕಾನ್ ಸಿಟಿ […]

ಪುನೀತ್ ರಾಜಕುಮಾರ್ ನರ‍್ಮಾಣದ ‘ಲಾ’ ಚಿತ್ರವು ಇದೇ ತಿಂಗಳ ೧೭ರಂದು ಅಮೇಜಾನ್ನಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೂಲಕ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಾಗಿಣಿ ಈ ಹಿಂದೆ ಕೆಲವು ಜಾಹೀರಾತುಗಳಲ್ಲಿ ಮತ್ತು ರಚಿತಾ ರಾಮ್ ನಿರ್ಮಾಣದ ‘ರಿಷಭ ಪ್ರಿಯ’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದರು. ಈಗ ‘ಲಾ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರಾಗಿಣಿಗೆ ರೊಮ್ಯಾಂಟಿಕ್ ಸಿನಿಮಾ […]

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನ ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.  ಬಾಲಬ್ರೂಯಿಯಲ್ಲಿ ಐಸಿಯು  ಟೆಲಿಕಾರ್ಟ್ ಗೆ ರಿಮೋಟ್ ಮೂಲಕ ಆರೋಗ್ಯ ಸಚಿವರು ಚಾಲನೆ ನೀಡಿದರು. ನಂತರ ಮಾತನಾಡಿರುವ ಅವರು, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ ದೂರದಿಂದಲೇ ವೈದ್ಯರು ಸೋಂಕಿತರನ್ನು ಆರೈಕೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.  

ಕೋವಿಡ್-19 ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35 ಎಕರೆ 18 ಗುಂಟೆ ಸ್ಥಳವನ್ನು ಗುರುತಿಸಲಾಗಿದೆ. ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಸಾವನ್ನಪ್ಪಿದವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ […]

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ತಪ್ಪಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ ಮೇಲೆ ಓರ್ವನನ್ನು ಬಂಧಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಆತನಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ ಸೋಂಕು ತಗುಲಿದೆ ಎಂದು ದೃಢಪಟ್ಟಿತ್ತು. ಆದರೆ ಇಂದು ಮುಂಜಾನೆ […]

ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದು. ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಯೋರ್ವರಲ್ಲಿ ಸೋಂಕು ದೃಢ ಪಟ್ಟಿದೆ.ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ದೃಢಪಟ್ಟಿದ್ದು ಇಂದು ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಸೋಂಕಿನ ವಿರುದ್ಧ ಹೊರಾಡುತ್ತಿರುವ ಕೊರೊನಾ ವಾರಿಯರ್ಸ್ಗಳಲ್ಲಿ ಪ್ರಕರಣ ದೃಢವಾಗುತ್ತಿರುವ ಹಿನ್ನಲೆ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ, ಬದಲಾಗಿ ಆರೋಗ್ಯ ವ್ಯವಸ್ಥೆಯನ್ನೇ ಮೇಲ್ದರ್ಜೆಗೇರಿಸಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಚೀನಾ ಕುರಿತು ಮಾತನಾಡಿ ಚೀನಾಗೆ ತಕ್ಕ ಪಾಠ ಕಲಿಸುತ್ತೇವೆ, ಚೀನಾಗೆ ತಕ್ಕ ಉತ್ತರ ನೀಡುವ ನಾಯಕತ್ವ ಇದೆ, ಒಂದು ಇಂಚು ಜಾಗವನ್ನೂ ಬಿಟ್ಟುಕೊಟ್ಟಿಲ್ಲ ಎಂದು ಹೇಳಿದರು.

Advertisement

Wordpress Social Share Plugin powered by Ultimatelysocial