ಶೀಘ್ರವೇ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ;ಸಚಿವ ಸಿ.ಸಿ.ಪಾಟೀಲ್‌

ರಾಜ್ಯದ ಕೆಲವೆಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದ್ದಾರೆ.. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಹೆದ್ದಾರಿ ನಿರ್ವಹಿಸುವ ಅಧಿಕಾರಿಗಳು ತಕ್ಷಣ ಖುದ್ದಾಗಿ ಸ್ಥಳಪರಿಶೀಲನೆ ನಡೆಸಿ ಹೆದ್ದಾರಿಯ ಗುಣಮಟ್ಟವನ್ನು ಉತ್ತಮವಾಗಿ ಕಾಯ್ದುಕೊಂಡು ಹೋಗಲು ಸೂಕ್ತ ಕ್ರಮ ಕೈಗೊಳ್ಳಬೇಕು, ಇದಕ್ಕೆ ಅಗತ್ಯ ಸಹಕಾರವನ್ನು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಅನೇಕ ಕಡೆ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತು ಇತರ ರಸ್ತೆಗಳಲ್ಲಿ ನಿರ್ಮಿಸಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುತ್ತಿದೆ ಮತ್ತು ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಜನಪ್ರತಿನಿಧಿಗಳಿಂದ ವ್ಯಾಪಕವಾಗಿ ದೂರುಗಳು ವ್ಯಕ್ತವಾಗಿವೆ. ಇವುಗಳನ್ನು ಪರಿಶೀಲಿಸಿ ಮತ್ತು ಸ್ಥಳೀಯರನ್ನು ಮನವೊಲಿಸಿ ಅವೈಜ್ಞಾನಿಕ ರೋಡ್ ಹಂಪ್ ಗಳನ್ನು ತೆಗೆದು ಹಾಕುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಸಿ.ಸಿ.ಪಾಟೀಲರು ಸೂಚಿಸಿದರು.ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿವೆ. ಇಂತಹ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಒಂದು ವೇಳೆ ಗುತ್ತಿಗೆದಾರರಿಂದ ವಿಳಂಬವಾದಲ್ಲಿ ಅವರಿಗೆ ನೋಟೀಸ್ ನೀಡಿ, ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವ ಸಂಸ್ಥೆಗಳು ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ನಿರ್ಲಕ್ಷ್ಯ ತೋರುತ್ತಿವೆ ಮತ್ತು ವಾಹನ ಸವಾರರಿಗೆ ಕಿರುಕುಳ ನೀಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು ಬಗ್ಗೆ ಗಮನ ಹರಿಸಿ ಮುಂದೆ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದರು. ಹಾಸನಮಂಗಳೂರು, ಬೆಂಗಳೂರುಬಿ.ಆರ್.ಹಿಲ್ಸ್, ಬೆಂಗಳೂರುಕನಕಪುರ ಹೆದ್ದಾರಿ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂಬ ಬಗ್ಗೆ ಸಚಿವರು ಅತೃಪ್ತಿ ವ್ಯಕ್ತಪಡಿಸಿ, ಕಾಮಗಾರಿಗಳಿಗೆ ಇರುವ ಅಡೆತಡೆಗಳನ್ನು ನಿವಾರಿಸಿ ಆದಷ್ಟು ಶೀಘ್ರವಾಗಿ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದು ಅವರು ಸೂಚಿಸಿದರು. ಹೆದ್ದಾರಿ ದುರಸ್ತಿ ಕಾರ್ಯವೊಂದೇ ಮುಖ್ಯವಲ್ಲ, ಹೆದ್ದಾರಿ ಅಕ್ಕಪಕ್ಕದ ಹಳ್ಳಿಗಳಿಗೆ ಮತ್ತು ಪೇಟೆಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ವರ್ತುಲ ರಸ್ತೆಗಳ ಕಾಮಗಾರಿಗಳನ್ನು ವಿಳಂಬ ಮಾಡಿದರೆ ಆಯಾ ಪ್ರದೇಶಗಳ ನಗರಗಳ ಒಳಭಾಗದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿ ಅಪಘಾತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ..

Please follow and like us:

Leave a Reply

Your email address will not be published. Required fields are marked *

Next Post

The Best Rated Philippine Girl Online dating Site

Tue Oct 12 , 2021
There are a number of several Mexican lady dating sites in existence, so how do you select the right https://mexican-woman.com/about/marrying-a-mexican-in-mexico/ a person? While some of them do offer similar features, they have completely unique features. The very best ones offer unique features like video chat, instantaneous messaging, and other tools […]

Advertisement

Wordpress Social Share Plugin powered by Ultimatelysocial