ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಪಾಂಡ್ಯ ಬ್ರದರ್ಸ್‌

 

ಟೀಮ್ ಇಂಡಿಯಾದ ಕ್ರಿಕೆಟ್​ ಸಹೋದರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೃಣಾಲ್ ಪಾಂಡ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ವಿಚಾರವನ್ನು ಹಾರ್ದಿಕ್ ಪಾಂಡ್ಯ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಬಹಿರಂಗ ಪಡಿಸಿದ್ದಾರೆ.ಅಮಿತ್​ ಶಾ ಅವರೊಂದಿಗೆ ಚರ್ಚೆ ನಡೆಸುತ್ತಿರುವ ಫೋಟೊವನ್ನು ಶನಿವಾರ ಹಾರ್ದಿಕ್​ ಪಾಂಡ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಕೇಂದ್ರ ಗೃಹ ಸಚಿವರೊಂದಿಗೆ ಅಮೂಲ್ಯ ಸಮಯವನ್ನು ಕಳೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ‘ಅಮಿತ್ ಶಾ ಅವರನ್ನು ಭೇಟಿಯಾಗಿದ್ದು ನಮ್ಮ ಪಾಲಿನ ಸೌಭಾಗ್ಯ’ ಎಂದು ಪಾಂಡ್ಯ ಹೇಳಿದ್ದಾರೆ.ಅಮಿತ್‌ ಶಾ ಭೇಟಿಯ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ‘ನಮ್ಮನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ, ನಮ್ಮೊಂದಿಗೆ ಅಮೂಲ್ಯ ಕ್ಷಣಗಳನ್ನು ಕಳೆದ ಗೃಹಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು ನಮ್ಮ ಸೌಭಾಗ್ಯ ಹಾಗೂ ಗೌರವದ ವಿಚಾರ ಎಂದು ಹೇಳಿದ್ದಾರೆ.ಅಮಿತ್​ ಶಾ ಮತ್ತು ಪಾಂಡ್ಯ ಬ್ರದರ್ಸ್‌ ಗುಜರಾತ್ ಮೂಲದವರಾಗಿರುವುದರಿಂದ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಇವರ ಭೇಟಿಯನ್ನು ಕೆಲವರು ರಾಜಕೀಯ ಕ್ಷೇತ್ರಕ್ಕೆ ಹೋಲಿಕೆ ಮಾಡಿದ್ದಾರೆ. ಅದರಂತೆ ಪಾಂಡ್ಯ ಬ್ರದರ್ಸ್‌ ಶೀಘ್ರವಾಗಿ ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ ಎಂದು ಹೇಳಲಾರಂಭಿಸಿದ್ದಾರೆ.ಹಾರ್ದಿಕ್​ ಪಾಂಡ್ಯ, ಶ್ರೀಲಂಕಾ ವಿರುದ್ಧ ಜನವರಿ 3ರಿಂದ ಆರಂಭವಾಗಲಿರುವ ಟಿ20 ಸರಣಿಗೆ ಟೀಮ್​ ಇಂಡಿಯಾವನ್ನು ಮುನ್ನಡೆಲಿದ್ದಾರೆ. ಅಲ್ಲದೇ ಸದ್ಯದಲ್ಲೇ ಹಾರ್ದಿಕ್ ಪಾಂಡ್ಯ ಟಿ20 ತಂಡದ ಪೂರ್ಣಪ್ರಮಾಣದ ನಾಯಕನಾಗಿ ನೇಮಕವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ವರ್ಷ ಭಾರತದ 3 ಅತ್ಯುತ್ತಮ ಏಕದಿನ ಬ್ಯಾಟಿಂಗ್ ಪ್ರದರ್ಶನಗಳು

Sat Dec 31 , 2022
ಡಿಸೆಂಬರ್‌ನಲ್ಲಿ ಚಟ್ಟೋಗ್ರಾಮ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 227 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ ತಂಡ 2022ರ ಕೊನೆಯ ಏಕದಿನ ಪಂದ್ಯವನ್ನು ಆಡಿತು.ಗೆಲುವಿನ ಹೊರತಾಗಿಯೂ ಭಾರತ ಮೂರು ಪಂದ್ಯಗಳ ಸರಣಿಯನ್ನು ಸೋಲಬೇಕಾಯಿತು.ಬಾಂಗ್ಲಾದೇಶವು ಢಾಕಾದಲ್ಲಿ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆದ್ದಿದ್ದರಿಂದ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು.2022 ಟಿ20 ವಿಶ್ವಕಪ್‌ನ ವರ್ಷವಾಗಿದ್ದರಿಂದ ಪೂರ್ಣ-ಸದಸ್ಯ ರಾಷ್ಟ್ರಗಳ ನಡುವೆ ಹೆಚ್ಚು ಏಕದಿನ ಪಂದ್ಯಗಳು ನಡೆದಿರಲಿಲ್ಲ. ಭಾರತ ತಂಡ ಸಹ ವರ್ಷವಿಡೀ […]

Advertisement

Wordpress Social Share Plugin powered by Ultimatelysocial