ಸೆಂಟ್ರಲ್‌ ರೈಲುವೆ

 

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಮಧ್ಯ ರೈಲ್ವೆ(Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 2422 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ cr.indianrailways.gov.inಗೆ ಭೇಟಿ ನೀಡಬಹುದು.ಅಧಿಸೂಚನೆಯಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ, ಪ್ರಸ್ತುತ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಅಭ್ಯರ್ಥಿಗಳು ಜನವರಿ 15, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಆ ಸಂದರ್ಭದಲ್ಲಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಅರ್ಜಿ ನಮೂನೆಯನ್ನು ಪಡೆಯಬೇಕು. ಈ ಗಡುವಿನ ಯಾವುದೇ ಬದಲಾವಣೆಯನ್ನು ನೋಟಿಸ್ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಮೊದಲು ಅಧಿಕೃತ ವೆಬ್​ಸೈಟ್​ rrccr.com ಗೆ ಭೇಟಿ ನೀಡಬೇಕು.
ಬಳಿಕ ಅಲ್ಲಿ ಕಾಣ ಸಿಗುವ “Click here to apply online” ಆಯ್ಕೆಯನ್ನು ಕ್ಲಿಕ್ ಮಾಡಬೇಕು.
ಆ ಮೂಲಕ ಮುಖಪುಟಕ್ಕೆ ಹೋಗಿ ಅಪ್ರೆಂಟಿಸ್ ನೇಮಕಾತಿ ಲಿಂಕ್‌ಗೆ ಹೋಗಬೇಕು.ಅಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕದೊಂದಿಗೆ ಅದನ್ನು ಸಲ್ಲಿಸಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಮಧ್ಯ ರೈಲ್ವೆ
ಹುದ್ದೆ ಅಪ್ರೆಂಟಿಸ್
ಒಟ್ಟು ಹುದ್ದೆ 2422
ವೇತನ ನಿಯಮಾನುಸಾರ
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ 15/01/2023

ಕೇಂದ್ರ ರೈಲ್ವೆ ನೇಮಕಾತಿ 2022: ವಯೋಮಿತಿ

ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 12, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.

ಕೇಂದ್ರ ರೈಲ್ವೆ ನೇಮಕಾತಿ 2022: ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಅಥವಾ ಪಿಯುಸಿ ಪಾಸಾಗಿರಬೇಕು.

ಸಂಸ್ಥೆ ಮಧ್ಯ ರೈಲ್ವೆ
ಹುದ್ದೆ ಅಪ್ರೆಂಟಿಸ್
ಒಟ್ಟು ಹುದ್ದೆ 2422
ವೇತನ ನಿಯಮಾನುಸಾರ
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ 15/01/2023

ಕೇಂದ್ರ ರೈಲ್ವೆ ನೇಮಕಾತಿ 2022: ವಯೋಮಿತಿ

ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 12, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.

ಕೇಂದ್ರ ರೈಲ್ವೆ ನೇಮಕಾತಿ 2022: ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಅಥವಾ ಪಿಯುಸಿ ಪಾಸಾಗಿರಬೇಕು.

ರಾಷ್ಟ್ರೀಯ ಕೌನ್ಸಿಲ್ ಅಥವಾ ವೊಕೇಶನಲ್ ಟ್ರೈನಿಂಗ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ ನೀಡಿದ ವ್ಯಾಪಾರದಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರವನ್ನು ಹೊಂದಿರಬೇಕು/ ವೃತ್ತಿಪರ ತರಬೇತಿಗಾಗಿ ರಾಜ್ಯ ಕೌನ್ಸಿಲ್ ನೀಡಿದ ತಾತ್ಕಾಲಿಕ ಪ್ರಮಾಣಪತ್ರವನ್ನು ಹೊಂದಿರಬೇಕು.

ಕೇಂದ್ರ ರೈಲ್ವೆ ನೇಮಕಾತಿ 2022: ಆಯ್ಕೆ ವಿಧಾನ

ಅಭ್ಯರ್ಥಿಗಳ ಮೆರಿಟ್ ಲಿಸ್ಟ್​ ಆಧರಿಸಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಜೊತೆಗೆ 10ನೇ ತರಗತಿಯಲ್ಲಿ ಪಡೆದ ಅಂಕಗಳು ಹಾಗೂ ನಿರ್ದಿಷ್ಟ ವ್ಯಾಪಾರದ ಅಡಿಯಲ್ಲಿ ಐಟಿಐನಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಕೇಂದ್ರ ರೈಲ್ವೆ ನೇಮಕಾತಿ 2022: ಅರ್ಜಿ ಶುಲ್ಕ

SC/ST/PWD ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಉಳಿದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂ. ಕೃಷ್ಣೇಗೌಡ

Mon Dec 19 , 2022
ಈಗ ಕರ್ನಾಟಕದಲ್ಲಿ ಯಾರ ಭಾಷಣವೆಂದರೆ ಜನ ದೂರದೂರದಿಂದ ಬಂದು, ಸಭೆ ಆರಂಭವಾಗುವ ಮೊದಲೇ ಬಂದು ನೆರೆದು, ಸಭಾಂಗಣ ತುಂಬಿ ತುಳುಕಾಡುತ್ತಾ ಇರುತ್ತದೋ ಅಲ್ಲಿ ಪ್ರೊ. ಎಂ. ಕೃಷ್ಣೇಗೌಡರು ಇರಲೇಬೇಕು.ಪಂಡಿತರನ್ನೂ ಪಾಮರರನ್ನೂ ಸಮಾನವಾಗಿ ಉಲ್ಲಾಸಮಯ ವಾತಾವರಣದಲ್ಲಿ ತಿಳಿಹಾಸ್ಯದ ಹೊನಲಿನಲ್ಲಿ, ಜೊತೆಗೆ ಜಾನಪದದ ಸೊಗಡಿನಲ್ಲಿ ಈಜಾಡಿಸುವ ಕೃಷ್ಣೇಗೌಡರು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕ್ಕಿನ ‘ಕನಗನ ಮರಡಿ’ ಎಂಬ ಗ್ರಾಮದಲ್ಲಿ 1958ರ ಡಿಸೆಂಬರ್ 18ರಂದು ಜನಿಸಿದರು. ಅವರ ತಂದೆ, ಮರೀಗೌಡರು ಮತ್ತು ತಾಯಿ ದೇವಮ್ಮನವರು. […]

Advertisement

Wordpress Social Share Plugin powered by Ultimatelysocial