ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ವಿಧಿವಶ

40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಅವರು ಜನಿಸಿದರು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಜಾಲಪ್ಪ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರಾಗಿ, ಸಹಕಾರ, ಗೃಹ, ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಚಿಕ್ಕಬಳ್ಳಾಪುರದಿಂದ ಲೋಕಸಭೆ ಸದಸ್ಯರಾಗಿ 4 ಸಲ ಆಯ್ಕೆಯಾದ ಅವರು ಕೆಂದ್ರದಲ್ಲಿ ಒಮ್ಮೆ ಜವಳಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಸಂಸತ್ತಿನ ವಿವಿಧ ಸಮಿತಿಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ:ಸಚಿವ ಕೋಟ ಶ್ರೀನಿವಾಸ ಪೂಜಾರಿ

Sat Dec 18 , 2021
ಹಿಂದುಳಿದ ವರ್ಗಗಳು ಮತ್ತು ಜಾತಿಗಳ ಕುರಿತು ಸಂಶೋಧನೆಗಾಗಿ ಸ್ಥಾಪಿಸಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.ಹಿಂದುಳಿದ ವರ್ಗಗಳ […]

Advertisement

Wordpress Social Share Plugin powered by Ultimatelysocial