ಚರ್ಚೆಯ ಬಳಿಕ 7ನೇ ವೇತನ ಆಯೋಗ ಕುರಿತು ನಿರ್ಧಾರಿಸಿದ : ಸಿಎಂ ಬೊಮ್ಮಾಯಿ ;

 

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸಲು 2022-23ನೇ ಸಾಲಿನಲ್ಲಿ 7ನೇ ವೇತನ ಆಯೋಗ ರಚಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

ಪ್ರಶ್ನೋತ್ತರ ವೇಳೆ ಜೆಡಿಎಸ್’ನ ಕೆ.ಟಿ.ಶ್ರೀಕಂಠೇಗೌಡ, ದೇವೇಗೌಡ, ಬಿಜೆಪಿಯ ಅರುಣ್ ಶಹಾಪೂರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಆಯೋಗ ರಚನೆ ಮಾಡುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರ 2017-18ರಲ್ಲಿ ವೇತನ ಪರಿಷ್ಕರಣೆ ಮಾಡಿದ್ದು, ಪ್ರಸ್ತುತ ಜಾರಿಯಲ್ಲಿದೆ. ಈ ಬಗ್ಗೆ ರಾಜ್ಯದ ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗಬೇಕಾಗುತ್ತದೆ. ಬಜೆಟ್ ಪೂರ್ವ ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾವುದು ಎಂದು ತಿಳಿಸಿದರು. ಇದೇ ವೇಳೆ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ನೌಕರರ ಶ್ರಮವನ್ನು ಶ್ಲಾಘಿಸಿದರು.

ರಾಜ್ಯ ಸರ್ಕಾರಿ ನೌಕರರ ವೇತನವು ರಾಜ್ಯ ಆಯೋಗ ಮತ್ತು ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಆಯೋಗವನ್ನು ಆಧರಿಸಿರುವುದರಿಂದ ಅವರ ನಡುವೆ ವ್ಯತ್ಯಾಸಗಳಿವೆ. ರಾಜ್ಯ ಸರ್ಕಾರಿ ನೌಕರರ ಹಿತಾಸಕ್ತಿಗಳನ್ನು ಸರ್ಕಾರ ಕಾಪಾಡಲಿದೆ ಎಂದು ಭರವಸೆ ನೀಡಿದರು.

ಪರಿಷತ್ತಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಎಂಎಲ್‌ಸಿಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ವ್ಯತ್ಯಾಸವಿದ್ದು, 25 ರಾಜ್ಯಗಳು ತಮ್ಮ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ನೀಡುತ್ತಿವೆ. ಕರ್ನಾಟಕವೂ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಗೆ ಹೊಡೆತ ಬಿದ್ದಿದೆ, ಆದರೆ ಇದರ ಹೊರತಾಗಿಯೂ, ಸರ್ಕಾರವು 15,000 ಶಿಕ್ಷಕರು, 16,000 ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇಮಕಾತಿ ಮತ್ತು ಇತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಹಂತ ಹಂತವಾಗಿ 15,000 ಶಿಕ್ಷಕರು, 16,000 ಪೊಲೀಸರ ನೇಮಕ;

Fri Feb 18 , 2022
  ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಪೊಲೀಸ್, 15 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್, 17 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ […]

Advertisement

Wordpress Social Share Plugin powered by Ultimatelysocial