ರಕ್ಷಿತ್‌ ಶೆಟ್ಟಿ ನಟನೆಯ ಚಾರ್ಲಿಗೆ UFO ಬಲ; ಹಿಂದಿಯಲ್ಲಿ ವಿತರಣೆ ಮಾಡಲಿದೆ ಈ ಸಂಸ್ಥೆ

ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಇನ್ನೇನು ಜೂನ್‌ 10ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಅದಕ್ಕೂ ಮುನ್ನ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿರುವ ತಂಡ, ನಿತ್ಯ ಒಂದಲ್ಲ ಒಂದು ಅಪ್‌ಡೇಟ್‌ ಮಾಹಿತಿಯನ್ನು ಹಂಚಿಕೊಳ್ಳುತ್ತಿದೆ. ಇದೀಗ ಹಿಂದಿಯಲ್ಲಿ ಈ ಚಿತ್ರವನ್ನು ವಿತರಣೆ ಮಾಡುವವರು ಯಾರು ಎಂಬ ವಿಚಾರವನ್ನು ಹೊರಗೆಡವಿದೆ.

ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆಗ ಬರುತ್ತಿರುವ ಈ ಚಿತ್ರ ಈಗಾಗಲೇ ಬೇರೆ ಬೇರೆ ಭಾಷಿಕ ಆಡಿಯನ್ಸ್‌ ಅನ್ನು ಟೀಸರ್‌ ಮೂಲಕ ಸೆಳೆದಿದೆ. ಅದರಂತೆ ಅಲ್ಲಿನ ಸ್ಟಾರ್‌ ನಟರೂ ಈ ಸಿನಿಮಾ ನೋಡಿ ಮೆಚ್ಚಿ ಅರ್ಪಿಸಲು ಮುಂದೆ ಬಂದಿದ್ದಾರೆ.

ತೆಲುಗಿನಲ್ಲಿ ನಟ ರಾಣಾ ದಗ್ಗುಬಾಟಿ, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು, ಮಲಯಾಳಂನಲ್ಲಿ ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ವಿತರಣೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ. ಅದೇ ರೀತಿ ಹಿಂದಿಯಲ್ಲಿ ಖ್ಯಾತ ಸಂಸ್ಥೆ ಯೂಎಫ್‌ಒ (UFO) ವಿತರಣೆ ಮಾಡಲಿದೆ.

ಶ್ವಾನದ ಹಿನ್ನೆಲೆಯಲ್ಲಿಯೇ ಸಾಗುವ ಈ ಸಿನಿಮಾದಲ್ಲಿ ನಾಯಕನಾಗಿ ರಕ್ಷಿತ್‌ ಶೆಟ್ಟಿ ನಟಿಸಿದರೆ, ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿ ಹಲವರಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರ ನಿರ್ದೇಶಿಸಿದರೆ, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದಾರೆ.

ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಅವರ ಸಾಹಸ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಜಿತ್ ಅವರ AK 61 ಮಾಡುವುದನ್ನು ಮಂಜು ವಾರಿಯರ್ ಖಚಿತಪಡಿಸಿದ್ದಾರೆ,ವೈರಲ್ ವೀಡಿಯೊವನ್ನು ವೀಕ್ಷಿಸಿ!

Mon May 9 , 2022
ವಲಿಮೈ ನಂತರ, ಅಜಿತ್ ಕುಮಾರ್ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಹೈದರಾಬಾದ್‌ನಲ್ಲಿ ಪ್ರಾರಂಭಿಸಿದ್ದಾರೆ.ತಾತ್ಕಾಲಿಕವಾಗಿ ಎಕೆ 61 ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಎಚ್ ವಿನೋತ್ ನಿರ್ದೇಶಿಸಿದ್ದಾರೆ. ಮಂಜು ವಾರಿಯರ್ ಅವರು ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಮಾಡಲು ನಿರ್ಧರಿಸಿದ್ದಾರೆ ಎಂಬ ವರದಿಗಳು ಬಂದಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅಸುರನ್ ನಟಿ ತಾನು ಎಕೆ 61 ರ ಭಾಗವಾಗಿದ್ದೇನೆ ಎಂದು ಖಚಿತಪಡಿಸಿದ್ದಾರೆ.AK 61 ರಲ್ಲಿ ಅಜಿತ್ ಜೊತೆ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳಲಿರುವ ಮಂಜು ವಾರಿಯರ್ […]

Advertisement

Wordpress Social Share Plugin powered by Ultimatelysocial