ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ್ಮದಿನ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 63ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕರ್ನಾಟಕದ 23ನೇ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ಅಂಗವಾಗಿ ಹಲವಾರು ರಾಜಕೀಯ ಗಣ್ಯರು ಶುಭಹಾರೈಸಿದ್ದಾರೆ.

‘ಅರ್ಥಶಾಸ್ತ್ರದಲ್ಲಿ ಆಧ್ಯಾತ್ಮ ಕಾಣಬೇಕು. ಆಧ್ಯಾತ್ಮದಲ್ಲಿ ಅರ್ಥಶಾಸ್ತ್ರ ಪಡೆಯಬೇಕು ಎಂಬ ಮೇರು ವಿಚಾರವಂತಿಕೆಯ ಸಮಚಿತ್ತದ ಪ್ರಜ್ಞಾವಂತ ಆಡಳಿತಗಾರ ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಾ, ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ ನಾಡಿನ ಸೇವೆಗೆ ಇನ್ನಷ್ಟು ಶಕ್ತಿ ನೀಡಲಿ ಎಂದು ಹಾರೈಸುವೆ’ ಎಂದು ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಆತ್ಮೀಯರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭ ಹಾರೈಕೆಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ, ನಿಮ್ಮ ನಾಯಕತ್ವದಲ್ಲಿ ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಲಿ ಎಂದು ಹಾರೈಸುತ್ತೇನೆ’ ಎಂದು ಸಚಿವ ವಿ ಸೋಮಣ್ಣ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.

‘ಆತ್ಮೀಯರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಹೆಚ್ಚು ಹೆಚ್ಚು ಜನಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದು ಹಾರೈಸುತ್ತೇನೆ’ ಎಂದು ಸಚಿವ ಎಸ್ ಟಿ ಸೋಮಶೇಖರ್ ಗೌಡ ಟ್ವೀಟ್ ಮಾಡಿದ್ದಾರೆ.

ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಅವರು ಜನರ ಸೇವೆಯಲ್ಲಿ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲಿ’ ಎಂದು ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಇವರು ಜನತಾ ದಳ (ಯು)ದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. 2008ರಲ್ಲಿ ಪಕ್ಷ ತೊರೆದು ಕೇಸರಿ ಪಡೆ ಸೇರಿಕೊಂಡರು. ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿಯೂ ಗುರುತಿಸಿಕೊಂಡಿದ್ದರು. ಬಳಿಕ ವಿವಿಧ ಇಲಾಖೆಗಳ ಖಾತೆಯನ್ನು ನಿಭಾಯಿಸಿದ ಇವರು ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ ನೇಮಕಗೊಂಡರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0' ತಂತ್ರಾಂಶ ಜಾರಿ.

Sat Jan 28 , 2023
ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು […]

Advertisement

Wordpress Social Share Plugin powered by Ultimatelysocial