2 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಗುಡ್ ಗೌವರ್ನಮೆಂಟ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು,ಮಾ.1- ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ 2022- 2 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಗುಡ್ ಗೌವರ್ನಮೆಂಟ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತು ನೀಡಿದ್ದು, ಮಾ.4ಕ್ಕೆ ಮಂಡನೆಯಾಗಲಿರುವ ಆಯವ್ಯಯದಲ್ಲಿ ಡಿಜಿಟಲ್ ಸೇವೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿದು ಬಂದಿದೆ.ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಬೇಕಿದೆ. ಹೀಗಾಗಿ ಆಡಳಿತ ನೀತಿಗೆ ಶರವೇಗ ನೀಡಲು ಮತ್ತು ಸರ್ಕಾರಿ ಸೇವೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಸೇವೆಗಳನ್ನು ಆನ್‍ಲೈನ್ ಮೂಲಕ ಒದಗಿಸಲು ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಬಜೆಟ್ ನಲ್ಲಿ ಡಿಜಿಟಲ್ ಕರ್ನಾಟಕಕ್ಕೆ ಹೆಚ್ಚು ಆದ್ಯತೆ ನೀಡಿದ್ದಾರೆ.ಒಂದಡೆ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ, ಅಕಾರಿಗಳ ಅಸಡ್ಡೆ, ನಿರ್ಲಕ್ಷತೆಯಿಂದ ಜನರಿಗೆ ತಲುಪಬೇಕಾದ ಸೇವೆ ಸಮಯಕ್ಕೆ ಸರಿಯಾಗಿ ತಲುಪುತ್ತಿಲ್ಲ. ಹೀಗಾಗಿ ಆಡಳಿತದ ಮೇಲೆ ನಕಾರಾತ್ಮಕವಾಗಿ ಪರಿಣಾಮ ಬೀರಿದೆ.ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಆಗುತ್ತಿರುವ ವಿಳಂಬಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿಯವರು ಡಿಜಿಟಲ್ ಸೇವೆಗೆ ಆದ್ಯತೆ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ನೇರವಾಗಿ ಜನತೆ ಬಾಗಿಲಿಗೆ ತಲುಪಿಸಲು ಡಿಜಿಟಲ್‍ಗೆ ಒತ್ತು ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರಮೋದಿ ಅವರ ಕನಸು ಕೂಡ ಡಿಜಿಟಲ್ ಇಂಡಿಯಾ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಕರ್ನಾಟಕಕ್ಕೆ ಒತ್ತು ನೀಡಲು ಬಸವರಾಜ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ.ಚುನಾವಣೆ ಇರುವ ಹಿನ್ನೆಲೆಯಲ್ಲಿ ಪಾರದರ್ಶಕ ಆಡಳಿತದ ಜೊತೆಗೆ ಜನರ ಬಾಗಿಲಿಗೇ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು. ಗುಡ್ ಗವರ್ನಮೆಂಟ್ ಅಜೆಂಡಾ ಇಟ್ಟುಕೊಂಡು ಮುಂದಿನ ಚುನಾವಣೆ ಎದುರಿಸಲು ಪ್ಲಾನ್ ರೂಪಿಸಿದ್ದಾರೆ.ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂದಾಯ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಲವು ಸೇವೆಗಳನ್ನು ಅನ್‍ಲೈನ್ ಮೂಲಕ ಪರಿಚಯಿಸಲಾಗಿದೆ.ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಜತೆಗೆ ಪಾರದರ್ಶಕ ಆಡಳಿತ ನೀಡಲು ಸಾಧ್ಯವಿರುವ ಡಿಜಿಟಲ್ ಸೇವೆಯನ್ನು ಸಮಗ್ರವಾಗಿ ಅನುಷ್ಠಾನಕ್ಕೆ ತರಲು ಬಜೆಟ್‍ನಲ್ಲಿ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕರ್ಮದ ಮರ್ಮ ತಿಳಿಸುವ "ಇನ್ ಸ್ಟಂಟ್ ಕರ್ಮ" ಏಪ್ರಿಲ್ ಒಂದರಂದು ತೆರೆಗೆ.

Tue Mar 1 , 2022
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಎಂಬ ಚಿತ್ರ ನಿರ್ದೇಶಿಸಿದ್ದೇನೆ ಎನ್ನುತ್ತಾರೆ ನಿರ್ದೇಶಕ ಸಂದೀಪ್ ಮಹಾಂತೇಶ್.ನಾನು ಈ ಹಿಂದೆ “D k ಬೋಸ್” ಚಿತ್ರ ನಿರ್ದೇಶನ ಮಾಡಿದ್ದೆ. ಮಾಧ್ಯಮದಿಂದ ಈ ಚಿತ್ರಕ್ಕೆ ಒಳ್ಳೆ ಪ್ರಶಂಸೆ ಸಿಕ್ಕಿತ್ತು. ಆದರೆ ನಿರೀಕ್ಷಿಸಿದಷ್ಟು ಗೆಲವು ಸಿಗಲಿಲ್ಲ. ಆ ಚಿತ್ರದಲ್ಲಾದ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಚಿತ್ರ […]

Advertisement

Wordpress Social Share Plugin powered by Ultimatelysocial