ಕಾಶ್ಮೀರ ಭಾಗದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಭಾರತೀಯ ಯೋಧರು ಬುದ್ಧಿ ಕಲಿಸಿದ್ದರು.

ತೆಲಂಗಾಣ:2016ರ ಸೆಪ್ಟೆಂಬರ್ 29 ರಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಭಾರತೀಯ ಯೋಧರು ಬುದ್ಧಿ ಕಲಿಸಿದ್ದರು. ಕಾಶ್ಮೀರದ ಉರಿ ಪ್ರದೇಶದಲ್ಲಿ ಪಾಕಿಸ್ತಾನಿಗಳು ನಡೆಸಿದ್ದ ದಾಳಿಗೆ ಪ್ರತಿಯಾಗಿ ಈ ದಾಳಿ ಮಾಡಲಾಗಿತ್ತು.ಆದರೆ ಈ ದಾಳಿ ನಡೆದೇ ಇಲ್ಲ ಎಂದು ಸಂಸದ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಸರ್ಜಿಕಲ್‌ ಸ್ಟ್ರೈಕ್‌ ನಡೆದಿರುವ ಬಗ್ಗೆ ಅವರು ಸಾಕ್ಷ್ಯಾಧಾರ ಕೇಳಿದ್ದರು. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಕೂಡ ರಾಹುಲ್‌ ಗಾಂಧಿಯ ಹಾದಿ ಹಿಡಿದಿದ್ದು ಭಾರತೀಯ ಸೇನೆಯ ಮೇಲೆ ಸವಾಲು ಎಸೆದಿದ್ದಾರೆ.ಸರ್ಜಿಕಲ್ ದಾಳಿ ನಡೆಸಿದ್ದಕ್ಕೆ ರಾಹುಲ್‌ ಗಾಂಧಿ ತಮ್ಮ ಭಾಷಣಗಳಲ್ಲಿ ಸಾಕ್ಷ್ಯಾಧಾರ ಕೇಳುತ್ತಲೇ ಬಂದಿದ್ದಾರೆ. ಇವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ, ರಾಹುಲ್ ಗಾಂಧಿ ನಮ್ಮ ಸೇನೆಯಿಂದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುತ್ತಾರೆ. ನಾವು ಎಂದಾದರೂ ಅವರಿಗೆ ನೀವು ರಾಜೀವ್ ಗಾಂಧಿ ಅವರ ಮಗ ಅಥವಾ ಅಲ್ಲ ಎಂಬುದಕ್ಕೆ ಪುರಾವೆ ಕೇಳಿದ್ದೇವೆಯೇ? ನನ್ನ ಸೇನೆಯಿಂದ ಪುರಾವೆ ಕೇಳಲು ನಿಮಗೆ ಯಾವ ಹಕ್ಕಿದೆ? ಎಂದು ಪ್ರಶ್ನಿಸಿದ್ದರು.ಇದಕ್ಕೆ ಇದೀಗ ಕಿಡಿ ಕಾರಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ರಾಹುಲ್ ಗಾಂಧಿ ಕಾಂಗ್ರೆಸ್​ ಪಕ್ಷದ ನಾಯಕ. ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ಕುರಿತು ಪ್ರಶ್ನಿಸಿದ್ದಾರೆ. ಇದರಲ್ಲಿ ತಪ್ಪೇನಿದೆ? ಈಗ ನಾನು ಕೇಳುತ್ತಿದ್ದೇನೆ, ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಕುರಿತು ಸಾಕ್ಷಿ ಕೊಡಲಿ ಎಂದು ಸವಾಲು ಹಾಕಿದ್ದಾರೆ. ಜಿಜೆಪಿಯವರು ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ದಾಳಿ ನಡೆದದ್ದೇ ಹೌದಾದರೆ ಸಾಕ್ಷಿ ಕೊಡಲಿ ಎಂದಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‌ ಬಗ್ಗೆ ಪುರಾವೆ ಕೇಳಿದ್ದರಲ್ಲಿ ತಪ್ಪೇನಿದೆ? ನನಗೂ ಬೇಕು, ಕೇಂದ್ರ ಸರ್ಕಾರ ಸಾಕ್ಷಿ ಕೊಡಲಿ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡರು.

Mon Feb 14 , 2022
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡರು.ಹಿಜಾಬ್ ವಿಷಯ ಮುಂದಿಟ್ಟುಕೊಂಡು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ, ಈ ಕೂಡಲೇ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಶಾಲೆಗೆ ಬರಲು ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ಶಾಸಕರು ಆಗ್ರಹಿಸುತ್ತಾ ಕಪ್ಪುಪಟ್ಟಿ ಧರಿಸಿ ಸಾಂಕೇತಿ ಪ್ರತಿಭಟನೆ ನಡೆಸಿ ಕಲಾಪದಲ್ಲಿ ಪಾಲ್ಗೊಂಡರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial