ಚಿಕ್ಕಬಳ್ಳಾಪುರ: ಭಾರಿ ಮಳೆಗೆ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ಹಾನಿ

 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯಲ್ಲಿ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಶಿಡ್ಲಘಟ್ಟ ತಾಲೂಕಿನ ಚೊಕ್ಕನಹಳ್ಳಿ ಗ್ರಾಮದ ಬಳಿ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಧಾರಾಕಾರ ಮಳೆಗೆ ಬಟ್ಲಹಳ್ಳಿ ಮುಖ್ಯ ರಸ್ತೆ ಬಂದ್:
ಚಿಂತಾಮಣಿ: ಧಾರಾಕಾರ ಮಳೆಯಿಂದ ಬ್ರಾಹ್ಣಣರಹಳ್ಳಿ ಬಳಿ ಕುಶಾವತಿ ನದಿ ತುಂಬಿ ಹರಿಯುತ್ತಿರುವ ಕಾರಣ, ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹಳ್ಳಿಗಳಾದ ಬ್ರಾಹ್ಣಣರಹಳ್ಳಿ, ಬೊಮ್ಮಲಾಕಪುರ, ವೈ ಗೊಲ್ಲಹಳ್ಳಿ, ಮಾದಮಂಗಲ, ಕೊನಪ್ಪಲ್ಲಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.

ತುಂಬಿ ಹರಿಯುತ್ತಿರುವ ಕುಶಾವತಿ ನದಿ

ಧಾರಾಕಾರ ಮಳೆಗೆ ಉಕ್ಕಿ ಹರಿದ ಕುಶಾವತಿ ನದಿ:
ರಾತ್ರಿ ಸುರಿದ ಧಾರಾಕರ ಮಳೆಗೆ ಚಿಂತಾಮಣಿ ತಾಲೂಕಿನ ಬ್ರಾಹ್ಮಣರ ಹಳ್ಳಿ ಬಳಿ ಕುಶಾವತಿ ನದಿ ಉಕ್ಕಿ ಹರಿಯುತ್ತಿದೆ. ಬತ್ತಿದ ನದಿಯಲ್ಲಿ ನೀರು ನೋಡಿ ರೈತರು ಸಂತಸಗೊಂಡಿದ್ದಾರೆ. ನದಿ ತುಂಬಿ ಹರಿಯುತ್ತಿರುವ ಅಪರೂಪದ ದೃಶ್ಯ ನೋಡಲು ಜನರು ಧಾವಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಗಗನಕ್ಕೇರಿದ ತರಕಾರಿ ಬೆಲೆ..!:ಮಳೆ ತಂದ ಸಂಕಷ್ಟದಿಂದ ಕಂಗಾಲಾದ ಜನ

Wed Oct 13 , 2021
ಬೆಂಗಳೂರು,ಅ.13- ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಭಾರೀ ಹಾನಿ ಉಂಟಾಗಿದ್ದರೆ, ಮತ್ತೊಂದು ಕಡೆ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಮಳೆಯಿಂದಾಗಿ ತರಕಾರಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಕಲಬುರಗಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಟೊಮೆಟೋ ಬೆಲೆ 60ರ ಗಡಿ ದಾಟಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗ ರೈತರಿಗೂ ನಷ್ಟವಾಗುತ್ತಿದೆ. ಮಳೆ ನೀರು ಹೊಲಗಳಿಗೆ […]

Advertisement

Wordpress Social Share Plugin powered by Ultimatelysocial