ಚಿರಂಜೀವಿ ನಟನೆಯ 25 ಕೋಟಿ ವೆಚ್ಚದ ಆಚಾರ್ಯ ಸಿನಿಮಾದ ಸೆಟ್ ಸುಟ್ಟು ಭಸ್ಮ.

 

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದ ಸೆಟ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.ಹೈದರಾಬಾದ್‌ನ ಹೊರವಲಯದಲ್ಲಿರುವ ಕೋಕಾಪೇಟ್ ಸರೋವರದಲ್ಲಿ ಕೋಟಿ ಕೋಟಿ ಬೆಲೆಯ ಸೆಟ್ ನಿರ್ಮಾಣ ಮಾಡಲಾಗಿತ್ತು.ರಾಮ್ ಚರಣ್ ನಿರ್ಮಾಣದಲ್ಲಿ ಮೂಡಿಬಂದಿದ್ದ ಆಚಾರ್ಯ ಸಿನಿಮಾದಲ್ಲಿ ಅಪ್ಪ ಮಗ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಿದ್ದು.
ಫೆ. 27ರಂದು ಸೆಟ್ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಆಚಾರ್ಯ ಸಿನಿಮಾದ ಬಹುಕೇಟಿ ವೆಚ್ಚದ ಸುಂದರ ಸೆಟ್ ಅನ್ನು ಕಲಾ ನಿರ್ದೇಶಕ ಸುರೇಶ್ ಸೆಲ್ವರಾಜನ್ ನಿರ್ಮಿಸಿದ್ದರು. ಬರೋಬ್ಬರಿ 25 ಕೋಟಿ ವೆಚ್ಚದಲ್ಲಿ ಸೆಟ್ ನಿರ್ಮಾಣ ಮಾಡಲಾಗಿತ್ತು. ಸದ್ಯ ಬೆಂಕಿಗೆ ಆಹುತಿ ಆಗಿರುವ ಆಚಾರ್ಯ್ ಬೆಂಕಿಗೆ ಆಹುತಿ ಆಗಿರುವ ಸೆಟ್ ಮಿನಿ ಟೆಂಪಲ್ ಟೌನ್, ಧರ್ಮಸ್ಥಳಿಯಾಗಿತ್ತು. ಭವ್ಯವಾದ ಟೆಂಪಲ್ ಸೆಟ್ ನಿರ್ಮಾಣ ಮಾಡಲಾಗಿತ್ತು. ದುರದೃಷ್ಟವಶಾತ್ ಧರ್ಮಸ್ಥಳವು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸೆಟ್ ಧಗಧಗ ಎಂದು ಹೊತ್ತಿ ಉರಿಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅಗ್ನಿ ಅವಘಡದ ಮಾಹಿತಿ ಸಿಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡಿದೆ. ಆದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ಅಷ್ಟೊತ್ತಿಗೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಸೆಟ್‌ಗೆ ಬೆಂಕಿ ತಗುಲಲು ನಿಖರ ಕಾರಣ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಸೆಟ್ ನಲ್ಲಿ ಯಾರೋ ಸಿಗೇಟು ಸೇದ ಎಸೆದಿದ್ದಾರೆ. ಹಾಗಾಗಿ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ ಎಂದು ಶಂಕಿಸಲಾಗಿದೆ.ಸೆಟ್ ನಿರ್ಮಾಣ ನೋಡಿ ನಿರ್ದೇಶಕ ಕೊರಟಾಲ ಶಿವ ಕಲಾ ನಿರ್ದೇಶಕರ ಕಲ್ಪನೆಯನ್ನು ಹಾಡಿಹೊಗಳಿದ್ದರು. ಆಚಾರ್ಯ ಸಿನಿಮಾದ ಬಹುತೇಕ ಚಿತ್ರೀಕರಣ ಅದೇ ಸೆಟ್ ನಲ್ಲಿ ನಿರ್ಮಾಣವಾಗಿತ್ತು.ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಆಚಾರ್ಯ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡಿತ್ತು. ಕೋಟಿ ಕೋಟಿ ಸುರಿದು ಸಿನಿಮಾ ಮಾಡಿದ್ದ ಚಿತ್ರತಂಡ ದೊಡ್ಡ ನಷ್ಟ ಅನುಭವಿಸಿತ್ತು. ಹೀನಾಯ ಸೋಲು ರಾಮ್ ಚರಣ್ ಮತ್ತು ಚಿರಂಜೀವಿ ಅವರಿಗೆ ದೊಡ್ಡ ಹಿನ್ನಡೆ ಆಗಿತ್ತು. ಇದೀಗ ಅದ್ದೂರಿಯಾಗಿ ನಿರ್ಮಾಣವಾಗಿದ್ದ ದುಬಾರಿ ಸೆಟ್ ಕೂಡ ಬೆಂಕಿಗೆ ಆಹುತಿ ಆಗಿರುವುದು ಸಹ ಚಿರಂಜೀವಿ ಮತ್ತು ರಾಮ್ ಚರಣ್ ತಂಡಕ್ಕೆ ಭಾರಿಬೇಸರ ತಂದಿದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಮ್ಯಾ ಜೊತೆ ಫೋಟೋ ಶೇರ್ ಮಾಡಿದ ಸಾನ್ಯಾ ಐಯ್ಯರ್,

Wed Mar 1 , 2023
ಕನ್ನಡ ಕಿರುತೆರೆ ನಟಿ, ಬಿಗ್​ಬಾಸ್ ಖ್ಯಾತಿಯ ಸಾನ್ಯಾ ಐಯ್ಯರ್ ಅವರು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಯಕ್ಟಿವ್ ಆಗಿರುವ ಕಲಾವಿದೆ.ತಮ್ಮ ಫೋಟೊ, ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.ಸಾನ್ಯಾ ಅವರ ಫೋಟೋಗಳು ಆಗಾಗ ವೈರಲ್ ಆಗುತ್ತಲೇ ಇರುತ್ತವೆ. ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟ ಮೇಲಂತೂ ಸಾನ್ಯಾ ಅವರ ಖ್ಯಾತಿ ಹೆಚ್ಚಾಗಿದೆ.ಸಾನ್ಯಾ ಅವರ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ನಟಿ ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ ಅವರ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ನಟಿಯ ಈ ಫೋಟೋ […]

Advertisement

Wordpress Social Share Plugin powered by Ultimatelysocial