ಸಿಐಡಿ ಅಧಿಕಾರಿಗಳ ತಳ್ಳಿ ಓಡಿ ಹೋದ ಆರ್.ಡಿ.ಪಾಟೀಲ.

 

ಪಿಎಸ್‍ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಮತ್ತೆ ಪರಾರಿಯಾಗಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮತ್ತು ಸಿಐಡಿ ಅಧಿಕಾರಿಗಳ ನೋಟಿಸ್‍ಗೆ ಕ್ಯಾರೆ ಅನ್ನದೇ ಇರುವ ಹಿನ್ನೆಲೆಯಲ್ಲಿ ಗುರುವಾರ ಸಿಐಡಿ ಅಧಿಕಾರಿಗಳು ಆರ್.ಡಿ.ಪಾಟೀಲ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಕರೆದೊಯ್ಯುತ್ತಿದ್ದರು. ಈ ವೇಳೆ ಆರ್.ಡಿ.ಪಾಟೀಲ ಸಿಐಡಿ ಅಧಿಕಾರಿಗಳನ್ನು ತಳ್ಳಿ ಓಡಿ ಹೋಗಿದ್ದು,ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಎಸ್‍ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಆರ್.ಡಿ.ಪಾಟೀಲಗೆ ನ್ಯಾಯಾಲಯ ಇತ್ತೀಚೆಗಷ್ಟೇ ಷರತ್ತು ಬದ್ಧ ಜಾಮೀನು ನೀಡಿತ್ತು. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಆರ್.ಡಿ.ಪಾಟೀಲ ಓಡಾಟ ನಡೆಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಸಿಐಡಿ ಅಧಿಕಾರಿಳು ಜಾರಿ ಮಾಡಿದ್ದ ನೋಟಿಸ್‍ಗೂ ಕ್ಯಾರೆ ಎನ್ನದೆ ಆರ್.ಡಿ.ಪಾಟೀಲ ಓಡಾಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಗುರುವಾರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದರು.
ಬಂಧಿಸಿ ವಿಚಾರಣೆಗೆಂದು ಕರೆದೊಯ್ಯುತ್ತಿದ್ದ ವೇಳೆ ಆರ್.ಡಿ.ಪಾಟೀಲ ಸಿಐಡಿ ಅಧಿಕಾರಿಗಳನ್ನು ತಳ್ಳಿ ಓಡಿ ಹೋಗಿದ್ದು, ಪರಾರಿಯಾಗಿರುವ ಆರ್.ಡಿ.ಪಾಟೀಲ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಇದಲ್ಲದೆ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಆರ್.ಡಿ.ಪಾಟೀಲ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಗುರುವಾರ ದಾಳಿ ಮಾಡಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಅಧಿಕಾರಿಗಳು ನೆರೆಯ ತೆಲಂಗಾಣ ರಾಜ್ಯದ ನಾಮಫಲಕ ಹೊಂದಿದ ವಾಹನಗಳಲ್ಲಿ ಬಂದಿದ್ದರು. ಪಿಎಸ್‍ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳಿಂದ ಪಡೆದ ಹಣದ ದಾಖಲೆಗಳು, ಇತರೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿ ಆಸೆಗೆ ಸಿದ್ಧಾಂತ ಬಿಟ್ಟವರು : ಸಿದ್ದು ವಿರುದ್ಧ ಹೆಚ್‌ಡಿಕೆ ಕಿಡಿ.

Sun Jan 22 , 2023
ಮುದ್ದೇಬಿಹಾಳ: ಕಾಂಗ್ರೆಸ್-ಜಾ.ದಳ ಮೈತ್ರಿ ಸರ್ಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಜನರು ಕಷ್ಟ ಹೇಳಿಕೊಂಡು ನಮ್ಮ ಬಳಿ ನಿರಂತರವಾಗಿ ಬರುತ್ತಾರೆ. ಅನಗತ್ಯವಾಗಿ ಜಾ.ದಳ ಪಕ್ಷದ ಬಗ್ಗೆ ಮಾತನಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು. ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು […]

Advertisement

Wordpress Social Share Plugin powered by Ultimatelysocial