ಸಿನಿಪ್ರಿಯರಿಗೆ ಪ್ರಿಯವಾಗಲಿದೆ “ಸಿನಿಬಜಾರ್” ಇದು ನಿರ್ಮಾಪಕರ ಸ್ನೇಹಿಯೂ ಹೌದು.

ಇದು ಆಧುನಿಕ ಯುಗ. ಹೊಸ ತಂತ್ರಜ್ಞಾನ ದಿನದಿನಕ್ಕೂ ಅಭಿವೃದ್ಧಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಸೌಲಭ್ಯವುಳ್ಳ ” ಸಿನಿಬಜಾರ್ ” ಆಪ್ ಬಿಡುಗಡೆಯಾಗಿದೆ.

ಹಲವು ವರ್ಷಗಳಿಂದ ಆನ್ ಲೈನ್ ನಲ್ಲಿ ಪರಿಣಿತಿ ಪಡೆದಿರುವ ಆನ್ ಲೈನ್ ಭಾಸ್ಕರ್ ಎಂದೇ ಖ್ಯಾತರಾಗಿರುವ ಭಾಸ್ಕರ್ ವೆಂಕಟೇಶ್ ಹಾಗು ನಿರ್ಮಾಪಕ, ಕರ್ನಾಟಕ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರ ಸಾರಥ್ಯದಲ್ಲಿ ಈ ಆಪ್ ಹೊರಬಂದಿದೆ.

ಈ ಆಪ್ ನಲ್ಲಿ ಸಿನಿಮಾ ವೀಕ್ಷಣೆಗೆ ತಗಲುವ ವೆಚ್ಚ ಕೇವಲ ಇಪ್ಪತ್ತೈದರಿಂದ ಮೂವತ್ತು ರೂಪಾಯಿ. 24 ಗಂಟೆಗಳ ಅವಧಿಯಿರುತ್ತದೆ. ಅಷ್ಟರೊಳಗೆ ಎಷ್ಟು ಸಿನಿಮಾ ಬೇಕಾದರೂ ನೋಡಬಹುದು. ಈ ಸಿನಿಮಾವನ್ನು ಎಷ್ಟು ಜನ ವೀಕ್ಷಿಸಿದ್ದಾರೆ ಎಂಬ ಮಾಹಿತಿ ಕೂಡ ನಿರ್ಮಾಪಕರಿಗೆ ತಿಳಿಯಲಿದೆ. ಪೈರಸಿ ತಡೆಗಟ್ಟುವ ಕಡೆಗೂ ಗಮನ ಹರಸಲಾಗಿದೆ. ಧ್ವನಿಯಿಂದ ಹಿಡಿದು, ಸ್ಕ್ರೀನಿಂಗ್ ‌ತನಕ ಎಲ್ಲಾ ಉತ್ತಮ ಗುಣಮಟ್ಟದಾಗಿರುತ್ತದೆ.‌ ಈಗಾಗಲೇ ಬಿಡುಗಡೆಯಾಗಿರುವ ಚಿತ್ರಗಳು ಈಗಾಗಲೇ ಈ ಆಪ್ ನಲ್ಲಿದೆ. ಈ ಆಪ್ ಮೂಲಕವೇ ಚಿತ್ರವನ್ನು ಬಿಡುಗಡೆ ಮಾಡಲು ಇಚ್ಛಿಸುವವರು ನಮ್ಮ ತಂಡವನ್ನು ಸಂಪರ್ಕಿಸಬಹುದು‌. ಒಟ್ಟಿನಲ್ಲಿ ಕನ್ನಡ ನಿರ್ಮಾಪಕರಿಗೆ ಒಳಿತಾಗಲಿ ಎಂಬುದೇ ನಮ್ಮ ಆಶಯ ಎಂದರು ಭಾಸ್ಕರ್ ವೆಂಕಟೇಶ್.

ಭಾಸ್ಕರ್ ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡಿದಾಗ ಇದರಿಂದ ನಿರ್ಮಾಪಕರಿಗೆ ಹಾಗೂ ನೋಡುಗರಿಗೆ ಅನುಕೂಲವಿದೆ ಎಂದು ತಿಳಿಯಿತು. ನಾನು ಭಾಸ್ಕರ್ ಅವರ ಜೊತೆ ಈ ಪ್ರಯತ್ನಕ್ಕೆ ಕೈ ಜೋಡಿಸಿದ್ದೇನೆ ಎಂದರು ಉಮೇಶ್ ಬಣಕಾರ್.

ಆಪ್ ಹೇಗೆ ಬಳಸಿಕೊಳ್ಳುವುದು? ಎಂಬುದರ ಮಾಹಿತಿಯನ್ನು ಆಪ್ ಡೆವಲಪರ್ ಸುಧಾಕರ್ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಕ್ಸ್ ಆಫೀಸ್: ಕೆಜಿಎಫ್ 2 (ಹಿಂದಿ) ಭಾನುವಾರದಂದು ಭಾರಿ ಸ್ಕೋರ್ ಮಾಡಿದೆ,ರೂ. 20.77 ಕೋಟಿ, ಹೀರೋಪಂತಿ 2 ರೂ ಸಂಗ್ರಹಿಸಿದೆ. 16 ಕೋಟಿ, ರನ್ವೇ 34 ರೂ. 13 ಕೋಟಿ;

Mon May 2 , 2022
KGF – ಅಧ್ಯಾಯ 2 (ಹಿಂದಿ) ಪ್ರಸ್ತುತ ಚಾಲನೆಯಲ್ಲಿರುವ ಎಲ್ಲಾ ಚಲನಚಿತ್ರಗಳ ನಡುವೆ ಪ್ಯಾಕ್ ಅನ್ನು ಮುನ್ನಡೆಸುವ ಸಮಯ, ಮತ್ತೆ ಉತ್ತಮವಾದ ಕಲೆಕ್ಷನ್‌ಗಳು ಮತ್ತೆ ಕಾರ್ಯನಿರ್ವಹಿಸುತ್ತಿವೆ. ಇದು ಆಶ್ಚರ್ಯವೇನಿಲ್ಲ ಏಕೆಂದರೆ ಚಿತ್ರವು ಬಿಡುಗಡೆಯಾದ ದಿನದಿಂದಲೇ ಕೆಲವು ಅತ್ಯುತ್ತಮ ಕಲೆಕ್ಷನ್‌ಗಳಿಗೆ ಸಾಕ್ಷಿಯಾಗುತ್ತಿದೆ ಮತ್ತು ಮಾಸ್ ಸೆಂಟರ್‌ಗಳು ಚಲನಚಿತ್ರವನ್ನು ಚೆನ್ನಾಗಿ ಪ್ರೋತ್ಸಾಹಿಸುವುದನ್ನು ಮುಂದುವರೆಸಿದ್ದರಿಂದ,ಭಾನುವಾರದಂದು ಸಂಖ್ಯೆಗಳು ಮತ್ತೆ ಉತ್ತುಂಗಕ್ಕೇರಿದವು. ಜೊತೆಗೆ ರೂ. 9.27 ಕೋಟಿ ಹೆಚ್ಚು ಬರುತ್ತಿದ್ದು, ಚಿತ್ರ ಈಗ ರೂ. 369.51 ಕೋಟಿಗಳು […]

Advertisement

Wordpress Social Share Plugin powered by Ultimatelysocial