ಸಾವಿನ ಸಂಖ್ಯೆಯಲ್ಲಿ ಏರಿಕೆ, ದೇಶದಲ್ಲಿ 1,72,433 ಹೊಸ ಪ್ರಕರಣ, 1,008 ಮಂದಿ ಸಾವು.

ನವದೆಹಲಿಭಾರತದಲ್ಲಿ ಕೋವಿಡ್ ಮೂರನೇ ಅಲೆಯ ನಡುವೆ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಅಧಿಕವಾಗಿದೆ. 1,72,433 ಹೊಸ ಪ್ರಕರಣಗಳು ವರದಿಯಾಗಿದೆ. ನಿನ್ನೆಗಿಂತ ಶೇಕಡಾ 6.8ರಷ್ಟು ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ 1,008 ಮಂದಿ ಮೃತಪಟ್ಟಿದ್ದಾರೆ.ಕಳೆದೊಂದು ದಿನದಲ್ಲಿ 2,59,107 ಮಂದಿ ಗುಣಮುಖರಾಗಿದ್ದಾರೆ.ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,98, 983 ಆಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 15,33,921 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶ ತಿಳಿಸಿದೆ.ಪ್ರತಿದಿನ ದೇಶದಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರ ದರ ಶೇಕಡಾ 10.99ರಷ್ಟು ಇದೆ. ಇನ್ನು ಭಾರತದಲ್ಲಿ ನಿನ್ನೆ ಒಂದೇ 15,69,449 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 73,41,92,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದ್ವಿತೀಯ ಪಿಯುಸಿ ಪಠ್ಯ ಕಡಿತ : ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ

Thu Feb 3 , 2022
ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಕಡಿತದ ಕುರಿತಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಇಲಾಖೆ ಪರಿಶೀಲನಾ ಸಭೆ ನಡೆಸಲಿದೆ.ಇಂದು ಪಿಯು ಬೋರ್ಡ್ ಅಧಿಕಾರಿಗಳ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ ನಡೆಸಲಿದ್ದು, ದ್ವಿತೀಯ ಪಿಯುಸಿ ಪಠ್ಯ ಕಡಿತದ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.ವಿದ್ಯಾರ್ಥಿಗಳು ಮತ್ತು ಪೋಷಕರು ಪಠ್ಯ ಕಡಿತ ಮಾಡುವಂತೆ ಮನವಿ […]

Advertisement

Wordpress Social Share Plugin powered by Ultimatelysocial