ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.

ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರಒಪ್ಪಿಗೆ ಸೂಚಿಸಿದೆ.ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ.ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸುವ ಬಗ್ಗೆ ಸದಸ್ಯರು ಸದನದ ಗಮನಕ್ಕೆ ತಂದಿದ್ದಾರೆ, ರಾಜಸ್ಥಾನ, ಛತ್ತೀಸ್ಘಡ ಹೀಗೆ ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿಯನ್ನೇ ಮುಂದುವರೆಸಿದ್ದಾರೆ , ಅಂತಿಮವಾಗಿ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ದೇಶದ ರೈತರಿಗೆ ನ್ಯೂ ಇಯರ್ ಗಿಫ್ಟ್!

Wed Dec 21 , 2022
ದೇಶದ ರೈತರಿಗೆ ಸಿಹಿಸುದ್ದಿ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಮತ್ತೊಂದು ಕಂತಿನ ಹಣವನ್ನ ಬಿಡುಗಡೆ ಮಾಡಲು ಸಿದ್ಧವಾಗುತ್ತಿದೆ.ಪಿಎಂ ಕಿಸಾನ್ ಯೋಜನೆಯಡಿ ಲಾಭ ಪಡೆಯುವ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ 13ನೇ ಕಂತಿನ ಹಣವನ್ನ ಶೀಘ್ರದಲ್ಲೇ ಪಡೆಯುವ ಸಾಧ್ಯತೆಯಿದೆ.ಅದ್ರಂತೆ, ಡಿಸೆಂಬರ್’ನಿಂದ ಮಾರ್ಚ್ ಅವಧಿಗೆ ಅನ್ನದಾತರಿಗೆ 2 ಸಾವಿರ ರೂ. ಶೀಘ್ರದಲ್ಲೇ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಲಿದೆ.ಮೋದಿ ಸರಕಾರ ರೈತರ ಬ್ಯಾಂಕ್ ಖಾತೆಗೆ ಇದುವರೆಗೆ 12 ಕಂತುಗಳ ಹಣವನ್ನ […]

Advertisement

Wordpress Social Share Plugin powered by Ultimatelysocial