ಕೆಂಪೇಗೌಡ ಪುತ್ಥಳಿ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಭೂಮಿ ಪೂಜೆ.

ಬೆಂಗಳೂರು : ವಿಧಾನಸೌಧದ ಮುಂಭಾಗ ಇಂದು ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಸವಣ್ಣ, ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾನ್ ನಾಯಕರ ಪುತ್ಥಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

ವಿಧಾನಸೌಧಧ ಮುಂಭಾಗ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. ಸಂಪುಟದಲ್ಲಿ ಒಪ್ಪಿಗೆ ಪಡೆದು ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. ಒಂದೂವರೆ ಎರಡು ತಿಂಗಳಲ್ಲಿ ಪುತ್ಥಳಿಗಳ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗ 24 ಅಡಿ ಎತ್ತರದ ಬಸವಣ್ಣ ಮತ್ತು ಕೆಂಪೇಗೌಡ ಪುತ್ಥಳಿಗಳನ್ನು 8 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರತಿಮೆಗಳಿವೆ. ಇವೆರಡು ಪ್ರತಿಮೆಗಳ ನಡುವೆ ಬಸವಣ್ಣ ಮತ್ತು ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಲಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ಬಹುಭಾಷಾ ಪ್ರಾಜ್ಞರಾಗಿದ್ದ ರುದ್ರಪಟ್ನ ಶಾಮಾಶಾಸ್ತ್ರಿ.

Fri Jan 13 , 2023
ಕೌಟಿಲ್ಯನ ಅರ್ಥಶಾಸ್ತ್ರವನ್ನೂ ಒಳಗೊಂಡಂತೆ ಮಹತ್ವದ ಕೃತಿಗಳನ್ನು ಬೆಳಕಿಗೆ ತಂದ ಮಹಾನ್ ವಿದ್ವಾಂಸ ಮತ್ತು ಹಲವು ಮಹತ್ವದ ಪ್ರತಿಭೆಗಳ ಸಂಗಮರಾಗಿದ್ದ ಆರ್. ಶಾಮಾಶಾಸ್ತ್ರಿಗಳು 1868ರ ಜನವರಿ 12ರಂದು ಹಾಸನ ಜಿಲ್ಲೆಯ ರುದ್ರಪಟ್ಟಣದಲ್ಲಿ ಜನಿಸಿದರು. ಶಾಸ್ತ್ರಿಗಳಿಗೆ ಕನ್ನಡ, ಇಂಗ್ಲಿಷ್‌, ಸಂಸ್ಕೃತ ಭಾಷೆಗಳ ಜೊತೆಗೆ ಜ್ಯೋತಿಷ ಶಾಸ್ತ್ರದಲ್ಲೂ ಅಪಾರ ಪಾಂಡಿತ್ಯವಿತ್ತು. ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡರೂ ಸ್ವಪ್ರಯತ್ನದಿಂದ ಮುಂದೆ ಬಂದ ಶಾಮಾಶಾಸ್ತ್ರಿಗಳು ಮೈಸೂರು ಸಂಸ್ಕೃತ ಕಾಲೇಜಿನಲ್ಲಿ ವಿದ್ವತ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು. ಅಂದಿನ ದಿವಾನರಾಗಿದ್ದ ಕೆ. […]

Advertisement

Wordpress Social Share Plugin powered by Ultimatelysocial