CM Siddaramaiah: ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ ಇದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ.

ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದು.

Jagdish Shetter: ಕೇಂದ್ರದಲ್ಲಿದ್ದ ಸರ್ಕಾರ ರಾಜ್ಯದಲ್ಲಿಯು ಬರುತ್ತೆ ಅನ್ನೋದು ಭ್ರಮೆ ಆಗಿದೆ: ಜಗದೀಶ್ ಶೆಟ್ಟರ್

ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ.

ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ.

ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ. 2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು.

2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು.

Delhi High Court: ಲೈಂಗಿಕ ಸಂಬಂಧದಲ್ಲಿ ನಿರಾಶೆಗಿಂತ ಹೆಚ್ಚು ವಿನಾಶಕಾರಿ ಏನೂ ಇಲ್ಲ: ದೆಹಲಿ ಹೈಕೋರ್ಟ್

2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ.

Please follow and like us:

tmadmin

Leave a Reply

Your email address will not be published. Required fields are marked *

Next Post

Logistics Park: ಬೆಂಗಳೂರಲ್ಲಿ 1770 ಕೋಟಿ ವೆಚ್ಚದ ಮಲ್ಟಿ ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್! NHLML ಜತೆ ಡೀಲ್

Wed Sep 20 , 2023
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಲಿಮಿಟೆಡ್ (NHLML) ಎಂದು ಕರೆಯಲಾಗುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದ ಘಟಕವು, ಬೆಂಗಳೂರಿನಲ್ಲಿ (Bengaluru) ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್(multi-modal logistics park) ನಿರ್ಮಾಣಕ್ಕೆ ಸಂಬಂಧಿಸಿದಂತೆ 1,770 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ(ministry of road transport and highways). ಬೆಂಗಳೂರು ಗ್ರಾಮೀಣ ಜಿಲ್ಲೆಯ ಮುದ್ದಲಿಂಗನಹಳ್ಳಿಯಲ್ಲಿ ಸುಾರು 4000 ಎಕರೆಯಲ್ಲಿ ಈ […]

Advertisement

Wordpress Social Share Plugin powered by Ultimatelysocial