ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ :ಮಾಜಿ ಸಿಎಂ ಯಡಿಯೂರಪ್ಪ 

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. ಈ ನಿಟ್ಟಿನಲ್ಲಿ ಯಾರೂ ಕೂಡ ಮಸೂದೆಗೆ ವಿರೋಧ ವ್ಯಕ್ತಪಡಿಸಬಾರದು. ಎಲ್ಲರೂ ಸರ್ವಾನುಮತದಿಂದ ಮಸೂದೆಗೆ ಬೆಂಬಲ ನೀಡಬೇಕು ಎಂದು ತಿಳಿಸಿದ್ದಾರೆ.ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮತಾಂತರ ಮಸೂದೆ ಮಂಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.ಮಧ್ಯಾಹ್ನದ ನಂತರ ವಿಧಾನಸಭೆಯಲ್ಲಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಒಂದೊಮ್ಮೆ ವಿಧೇಯಕ ಮಂಡನೆಯಾದರೆ ಕಲಾಪದಲ್ಲಿ ಗದ್ದಲ-ಕೋಲಾಹಲ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಲ್ಲಿದೆ ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ʼಪರಿಹಾರʼ

Tue Dec 21 , 2021
ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ.ಸೋಂಪು ನಮ್ಮ ಜೀರ್ಣಕ್ರಿಯೆ ಸುಧಾರಿಸುವುದಲ್ಲದೆ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಸೋಂಪಿನಿಂದ ಮಾಡಿದ ಚಹಾ ಕುಡಿಯುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ತಲೆ ಸುತ್ತುವುದು ಮತ್ತು ಅತಿಯಾದ ತಲೆನೋವಿಗೆ ತಕ್ಷಣ ಪರಿಹಾರ ಸಿಗುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವ ಜನರು ಗ್ರೀನ್ ಟೀ ಕುಡಿಯುತ್ತಾರೆ. ತೂಕ ಇಳಿಸಿಕೊಳ್ಳಲು […]

Advertisement

Wordpress Social Share Plugin powered by Ultimatelysocial